ಪುಣ್ಯ ಸ್ಮರಣೋತ್ಸವ, ಧರ್ಮಸಭೆ ಇಂದು

ದಾವಣಗೆರೆ : ಬಾಡಾ ಕ್ರಾಸ್‌ನ ಶ್ರೀ ವೀರೇಶ್ವರ ಪುಣ್ಯಾಶ್ರಮದಲ್ಲಿ ಮಂಗಳವಾರ, ಲಿಂ. ಪಂ.ಪಂಚಾಕ್ಷರಿ ಗವಾಯಿಗಳ 80ನೇ ಹಾಗೂ ಪಂ.ಪುಟ್ಟರಾಜ ಕವಿ ಗವಾಯಿಗಳ 14ನೇ ಪುಣ್ಯ ಸ್ಮರಣೋತ್ಸವ ಹಾಗೂ ಧರ್ಮಸಭೆ ಹಮ್ಮಿಕೊಳ್ಳಲಾಗಿದೆ ಎಂದು ಪುಣ್ಯಾಶ್ರಮ ನಿರ್ದೇಶಕ ದೇವರಮನೆ ಶಿವಕುಮಾರ್ ಹೇಳಿದರು.  ಸ್ಮರಣೋತ್ಸವ ಪ್ರಯುಕ್ತ ಬೆಳಗ್ಗೆ 7.30ಕ್ಕೆ ಆಶ್ರಮದಿಂದ ಆಂಜನೇಯ ಮಿಲ್‌ವರೆಗೆ ಉಭಯ ಗುರುಗಳ ಭಾವಚಿತ್ರದ ಮೆರವಣಿಗೆ ನಡೆಯಲಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.  ಬೆಳಗ್ಗೆ 10 ಗಂಟೆಗೆ ನಡೆಯುವ ಧರ್ಮಸಭೆಯಲ್ಲಿ ಆವರಗೊಳ್ಳದ ಓಂಕಾರ ಶಿವಾಚಾರ್ಯ ಶ್ರೀ, ಗದಗಿನ ಡಾ. ಕಲ್ಲಯ್ಯಜ್ಜ, ಶಿವಮೊಗ್ಗದ ಆರ್.ಬಿ.ಸಂಗಮೇಶ್ವರ ಗವಾಯಿಗಳು ಸಾನ್ನಿಧ್ಯ, ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅಧ್ಯಕ್ಷತೆ ವಹಿಸುವರು. ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.  ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್, ಪುಣ್ಯಾಶ್ರಮದ ಅಧ್ಯಕ್ಷ ಡಾ. ಅಥಣಿ ಎಸ್. ವೀರಣ್ಣ, ಮಾಜಿ ಸಚಿವ ಎಸ್.ಎ.ರವೀಂದ್ರನಾಥ್, ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ ಡಾ.ಎ.ಎಚ್.ಶಿವಯೋಗಿಸ್ವಾಮಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.  ಮಧ್ಯಾಹ್ನ 2 ಗಂಟೆಗೆ ವಿವಿಧ ಜಿಲ್ಲೆಗಳ ಕಲಾವಿದರಿಂದ ಸಂಗೀತ ಕಾರ್ಯಕ್ರಮ ನಡೆಯಲಿದ್ದು, ಶಿವಮೊಗ್ಗದ ಆರ್.ಬಿ.ಸಂಗಮೇಶ್ವರ ಗವಾಯಿಗಳು ಉದ್ಘಾಟಿಸಲಿದ್ದಾರೆ ಎಂದು ಹೇಳಿದರು.  ಜಾಲಿಮರದ ಕರಿಬಸಪ್ಪ, ಬಸವನಗೌಡ್ರು ಸುದ್ದಿಗೋಷ್ಠಿಯಲ್ಲಿದ್ದರು.  …    

Share This Article

ಅತಿಯಾಗಿ ಯೋಚಿಸುವುದನ್ನು ನಿಲ್ಲಿಸಿ! ಸೈಲೆಂಟ್ ಆಗಿ ನಿಮ್ಮನ್ನು ಕಿಲ್ಲ ಮಾಡುತ್ತೆ Over Thinking ಅಭ್ಯಾಸ…

ಬೆಂಗಳೂರು:  ಇಂದಿನ ಬಿಡುವಿಲ್ಲದ ಜೀವನದಲ್ಲಿ ನಾವೆಲ್ಲರೂ ಸಣ್ಣ ಪುಟ್ಟ ವಿಚಾರಗಳನ್ನು ಹೆಚ್ಚು ಯೋಚಿಸುತ್ತೇವೆ ( Over…

ಹೆಂಗಸರು ಪ್ರತಿದಿನ ಹೂವು ಮುಡಿಯುವುದರಿಂದ ಆಗುವ ಲಾಭಗಳೇನು?…Wearing Flower

ಬೆಂಗಳೂರು:  ಹೆಣ್ಣುಮಕ್ಕಳು ತಲೆಗೆ ಎಣ್ಣೆ ಹಚ್ಚಿ, ತಲೆ ಬಾಚಿಕೊಂಡು, ನೀಟಾಗಿ ಹೆಣೆದು, ಹೂವಿನಿಂದ ( Wearing…

ನೀವಿದನ್ನು ನಿತ್ಯವೂ ಚಾಚೂ ತಪ್ಪದೇ ಅನುಸರಿಸಿದರೆ ನೀವು ಖಂಡಿತ ಶ್ರೀಮಂತರಾಗ್ತೀರಿ! Rich Person

ಇಂದು ಪ್ರತಿಯೊಬ್ಬರು ಶ್ರೀಮಂತರಾಗಲು ( Rich Person ) ಬಯಸುತ್ತಾರೆ. ತಾವು ದುಡಿದ ಹಣವನ್ನು ಸರಿಯಾದ…