More

    ಗಣರಾಜ್ಯೋತ್ಸವದ ಅಮೃತ ವರ್ಷ  ಸಿದ್ಧತೆ ಕೈಗೊಳ್ಳಲು ಡಿಸಿ ಸೂಚನೆ

    ದಾವಣಗೆರೆ : ಜ. 26 ರಂದು ಗಣರಾಜ್ಯೋತ್ಸವದ ಅಮೃತ ವರ್ಷವನ್ನು ಅರ್ಥಪೂರ್ಣವಾಗಿ ಆಚರಿಸಲು ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಸೂಚನೆ ನೀಡಿದರು.
     ಜಿಲ್ಲಾಡಳಿತ ಭವನದಲ್ಲಿ ಬುಧವಾರ ಗಣರಾಜ್ಯೋತ್ಸವ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದರು.
     ಇದು ರಾಷ್ಟ್ರೀಯ ಹಬ್ಬವಾಗಿದ್ದು, ಗಣರಾಜ್ಯಕ್ಕಾಗಿ ಶ್ರಮಿಸಿದ ಎಲ್ಲ ಮಹನೀಯರನ್ನು ಸ್ಮರಿಸುವ ದಿನವಾಗಿದೆ. ಅವರ ಶ್ರಮ, ತ್ಯಾಗ, ಬಲಿದಾನಗಳಿಗೆ ಗೌರವ ಸಮರ್ಪಿಸಬೇಕು ಎಂದು ಹೇಳಿದರು.
     ಜ. 26 ರಂದು ಬೆಳಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಜಿಲ್ಲಾ ಕ್ರೀಡಾಂಗಣದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸುವರು. ಎಲ್ಲ ಇಲಾಖಾ ಮುಖ್ಯಸ್ಥರು ತಮ್ಮ ಕಚೇರಿಗಳಲ್ಲಿ ರಾಷ್ಟ್ರ ಧ್ವಜಾರೋಹಣ ಮಾಡಿ ಬೆಳಗ್ಗೆ 9 ಗಂಟೆಯೊಳಗಾಗಿ ಜಿಲ್ಲಾ ಕ್ರೀಡಾಂಗಣದಲ್ಲಿ ಹಾಜರಿರಬೇಕು. ಅಂದು ಸರ್ಕಾರಿ ರಜೆ ಎಂದು ಅಧಿಕಾರಿಗಳು ಮತ್ತು ಸಿಬ್ಬಂದಿ ಗೈರು ಹಾಜರಾಗಬಾರದು ಎಂದು ತಾಕೀತು ಮಾಡಿದರು.
     ಕ್ರೀಡಾಂಗಣದಲ್ಲಿ ಹತ್ತು ಸಾವಿರಕ್ಕಿಂತಲೂ ಹೆಚ್ಚು ಜನರು ಭಾಗವಹಿಸಬೇಕು. ವಿದ್ಯಾರ್ಥಿಗಳು ಜಾಸ್ತಿ ಸಂಖ್ಯೆಯಲ್ಲಿರಬೇಕು. ಕಾರ್ಯಕ್ರಮದಲ್ಲಿ ಭಾಗವಹಿಸುವ ಮಕ್ಕಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಿ, ಸಾಂಸ್ಕೃತಿಕ ಕಾರ್ಯಕ್ರಮ ನೀಡುವ ಮತ್ತು ಪರೇಡ್‌ನಲ್ಲಿ ಭಾಗವಹಿಸುವ ಮಕ್ಕಳಿಗೆ ಅಗತ್ಯ ಸೌಲಭ್ಯಗಳನ್ನು ಸಂಬಂಧಿಸಿದ ಇಲಾಖೆಗಳು ಒದಗಿಸಬೇಕು ಎಂದು ಸೂಚಿಸಿದರು.
     ಪ್ಲಾೃಸ್ಟಿಕ್ ಧ್ವಜ, ಹೂಗುಚ್ಛ ಮತ್ತು ನೀರಿನ ಬಾಟಲಿಗಳನ್ನು ತರುವಂತಿಲ್ಲ. ಇಡೀ ಕಾರ್ಯಕ್ರಮದ ಮೇಲುಸ್ತುವಾರಿಯನ್ನು ಅಪರ ಜಿಲ್ಲಾಧಿಕಾರಿ, ಉಪ ವಿಭಾಗಾಧಿಕಾರಿ, ತಹಸೀಲ್ದಾರರು, ಡಿವೈಎಸ್ಪಿ, ಮಹಾನಗರ ಪಾಲಿಕೆ ಆಯುಕ್ತರು ನೋಡಿಕೊಳ್ಳಬೇಕು ಎಂದರು.
     ಎಲ್ಲ ಸರ್ಕಾರಿ ಇಲಾಖೆಗಳಲ್ಲಿ ರಾಷ್ಟ್ರಧ್ವಜ ಸಂಹಿತೆಯನ್ನು ಕಾಪಾಡಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆಯವರು ಎಲ್ಲ ಶಾಲೆಗಳಲ್ಲಿ ಬೆಳಗ್ಗೆ 7.30 ಕ್ಕೆ ರಾಷ್ಟ್ರ ಧ್ವಜಾರೋಹಣ ನೆರವೇರಿಸಬೇಕು ಎಂದು ತಿಳಿಸಿದರು.
     …
     * ದೀಪಾಲಂಕಾರ
     ಎಲ್ಲ ಸರ್ಕಾರಿ ಕಚೇರಿ ಕಟ್ಟಡಗಳಿಗೆ, ನಗರದ ಪ್ರಮುಖ ವೃತ್ತಗಳಿಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ದೀಪಾಲಂಕಾರ ಮಾಡಿಸಬೇಕು. ಧ್ವಜ ಸಂಹಿತೆ ಕಾಪಾಡಬೇಕು ಎಂದು ಡಿಸಿ ವೆಂಕಟೇಶ್ ಹೇಳಿದರು.
     ಮಹಾನಗರ ಪಾಲಿಕೆಯಿಂದ ವೇದಿಕೆ ನಿರ್ಮಾಣ, ಆಸನ, ಶಾಮಿಯಾನ, ಧ್ವನಿ ವರ್ಧಕ, ಕಾರ್ಪೆಟ್ ವ್ಯವಸ್ಥೆ ಮಾಡಬೇಕು. ತೋಟಗಾರಿಕೆ ಇಲಾಖೆಯವರು ವೇದಿಕೆ ಮುಂಭಾಗ ಹೂವಿನ ಅಲಂಕಾರ ಮಾಡಬೇಕು. ಎಲ್ಲ ಇಲಾಖೆಗಳ ಅಧಿಕಾರಿಗಳು ತಮಗೆ ವಹಿಸಿರುವ ಜವಾಬ್ದಾರಿಯನ್ನು ಶಿಸ್ತಿನಿಂದ ನಿರ್ವಹಿಸುವ ಮೂಲಕ ಗಣರಾಜ್ಯೋತ್ಸವವನ್ನು ಯಶಸ್ವಿಗೊಳಿಸಬೇಕು ಎಂದರು.
     ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ. ಇಟ್ನಾಳ್, ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್, ಹೆಚ್ಚುವರಿ ಎಸ್ಪಿ ವಿಜಯಕುಮಾರ್ ಎಂ. ಸಂತೋಷ್ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.
     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts