More

    ನಿರಾಕ್ಷೇಪಣಾ ಪತ್ರ ಪಡೆಯದೇ ಪರವಾನಗಿ

    ದಾವಣಗೆರೆ : ನೂತನವಾಗಿ ನಿರ್ಮಿಸುವ 21 ಮೀಟರ್ ವರೆಗಿನ ಕಟ್ಟಡಗಳಿಗೆ ಅಗ್ನಿಶಾಮಕ ಇಲಾಖೆಯಿಂದ ನಿರಾಕ್ಷೇಪಣಾ ಪತ್ರ ಪಡೆಯದೇ ಪರವಾನಗಿ ನೀಡಬೇಕೆಂದು ಆಗ್ರಹಿಸಿ, ಮಹಾನಗರ ಪಾಲಿಕೆ ಪ್ರತಿಪಕ್ಷ ನಾಯಕ ಪ್ರಸನ್ನ ಕುಮಾರ್ ನೇತೃತ್ವದಲ್ಲಿ ಬುಧವಾರ ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಅವರಿಗೆ ಮನವಿ ಸಲ್ಲಿಸಲಾಯಿತು.
     ಈ ಹಿಂದೆ 15 ಮೀಟರ್ ಮೇಲ್ಪಟ್ಟು ಎತ್ತರವಿರುವ ಕಟ್ಟಡ ನಿರ್ಮಾಣ ಪರವಾನಗಿ ಪಡೆಯಲು, ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಿಂದ ನಿರಾಕ್ಷೇಪಣಾ ಪತ್ರ ಅವಶ್ಯವಿತ್ತು. ಕಳೆದ ಮಾರ್ಚ್‌ನಲ್ಲಿ ಕರ್ನಾಟಕ ಅಗ್ನಿಶಾಮಕ ದಳ ಅಧಿನಿಯಮ 1964 ರ 13ನೇ ಪ್ರಕರಣದ ತಿದ್ದುಪಡಿ ಮಾಡಲಾಯಿತು. ಅದರಂತೆ 21 ಮೀಟರ್ ಮೀರಿದ ಕಟ್ಟಡಗಳನ್ನು ಎತ್ತರದ ಕಟ್ಟಡ ಎಂದು ಪರಿಗಣಿಸಲಾಗಿದೆ.
     ಈ ಆದೇಶದನ್ವಯ 21 ಮೀಟರ್ ಒಳಗಿನ ಎತ್ತರದ ಕಟ್ಟಡಗಳಿಗೆ ನಿರಾಕ್ಷೇಪಣಾ ಪತ್ರದ ಅವಶ್ಯಕತೆ ಇರುವುದಿಲ್ಲ. ಈ ಆದೇಶವನ್ನು ಅಳವಡಿಸದಿರುವ ಬಗ್ಗೆ ಸಾರ್ವಜನಿಕರು ದೂರುತ್ತಿದ್ದಾರೆ. ಪಾಲಿಕೆ ಆಯುಕ್ತರಿಗೂ ಈ ಮಾಹಿತಿಯನ್ನು ನೀಡಿ ಅನುಷ್ಠಾನಗೊಳಿಸಿ ಆದೇಶ ಹೊರಡಿಸಲು ಕೋರಿರುವುದಾಗಿ ತಿಳಿಸಿದರು.
     ದಾವಣಗೆರೆ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರವಾಗಿದೆ. ವರ್ಟಿಕಲ್ ಗ್ರೋತ್‌ಗೆ ಅವಕಾಶ ಕಲ್ಪಿಸಿದರೆ ಇನ್ನೂ ಹೆಚ್ಚಿನ ಅಭಿವೃದ್ಧಿಯಾಗಲಿದೆ. ಪಾಲಿಕೆಗೆ ಆದಾಯ ಹೆಚ್ಚಿಸುವ ಹಾಗೂ ಸಾರ್ವಜನಿಕರಿಗೆ ಅನುಕೂಲ ಮಾಡುವ ದೃಷ್ಟಿಯಿಂದ ಅಗತ್ಯ ಕ್ರಮ ಕೈಗೊಳ್ಳಲು ಆದೇಶ ನೀಡಬೇಕೆಂದು ಒತ್ತಾಯಿಸಲಾಯಿತು.
     ಉಪ ಮೇಯರ್ ಯಶೋದಾ ಹೆಗ್ಗಪ್ಪ, ಪಾಲಿಕೆ ಸದಸ್ಯರಾದ ಕೆ.ಎಂ. ವೀರೇಶ್, ಆರ್. ಶಿವಾನಂದ್, ಪಾಲಿಕೆ ಆಯುಕ್ತೆ ರೇಣುಕಾ ಇದ್ದರು.
     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts