More

    ದಾವಣಗೆರೆ ದಕ್ಷಿಣದಲ್ಲಿ ಎಸ್ಸೆಸ್ ಭರ್ಜರಿ ರೋಡ್ ಶೋ

    ದಾವಣಗೆರೆ : ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಪರವಾಗಿ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಗುರುವಾರ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ 18, 7, 8 ಮತ್ತು 10ನೇ ವಾರ್ಡ್‌ಗಳಲ್ಲಿ ಭರ್ಜರಿ ರೋಡ್ ಶೋ ನಡೆಸಿದರು.
     ನಂತರ ಶಾಮನೂರು ಶಿವಶಂಕರಪ್ಪ ಮಾತನಾಡಿ, ದೇಶ ಸರ್ವ ಜನಾಂಗದ ಶಾಂತಿಯ ತೋಟ. ಇದನ್ನು ಹಾಳು ಮಾಡುವ ಜನರನ್ನು ದೂರವಿಡಬೇಕಾದರೆ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಬೇಕಿದೆ ಎಂದು ತಿಳಿಸಿದರು.
     ದಾವಣಗೆರೆ ದಕ್ಷಿಣ ಕ್ಷೇತ್ರವು ಸಹ ಭಾರತ ದೇಶ ಇದ್ದಂತೆ. ಇಲ್ಲಿ ಎಲ್ಲ ಜಾತಿ, ಧರ್ಮದವರು ಇದ್ದಾರೆ. ಈ ಭಾಗದಲ್ಲಿ ನಮಗೆ ಬೆಂಬಲ ನೀಡುತ್ತಾ ಬಂದಿದ್ದೀರಿ. ಅದೇ ರೀತಿ ಲೋಕಸಭಾ ಚುನಾವಣೆಯಲ್ಲಿ ಪ್ರಭಾ ಮಲ್ಲಿಕಾರ್ಜುನ್ ಅವರನ್ನು ಗೆಲ್ಲಿಸುವಂತೆ ಮನವಿ ಮಾಡಿದರು.
     ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಮುನ್ನ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ತರುವ ಭರವಸೆ ನೀಡಿತ್ತು. ಅದರಂತೆ ಸರ್ಕಾರ ಬಂದ ತಕ್ಷಣ ಈಡೇರಿಸಿದ್ದೇವೆ. ಈ ಕ್ಷೇತ್ರವೊಂದಕ್ಕೆ ಮಾರ್ಚ್ ಅಂತ್ಯಕ್ಕೆ ಸುಮಾರು 122 ಕೋಟಿ ರೂ. ಹಣವನ್ನು ಫಲಾನುಭವಿಗಳಿಗೆ ವಿತರಿಸಲಾಗಿದೆ ಎಂದರು.
     ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪಂಚ ನ್ಯಾಯ ಪಚ್ಚೀಸ್ ಗ್ಯಾರಂಟಿ ಭರವಸೆಗಳನ್ನು ನೀಡಲಾಗಿದ್ದು, ಯುವ ನ್ಯಾಯದಡಿ ಯುವಕರಿಗೆ ಉದ್ಯೋಗ, ಮಹಿಳಾ ನ್ಯಾಯದಡಿ ಪ್ರತಿ ಮಹಿಳೆಗೆ 1 ಲಕ್ಷ ರೂ., ರೈತ ನ್ಯಾಯದಡಿ ಸ್ವಾಮಿನಾಥನ್ ಆಯೋಗದ ವರದಿಯನ್ನು ಜಾರಿಗೊಳಿಸುವುದು, ನರೇಗಾ ಕೂಲಿ ಹಣವನ್ನು 400 ರೂ.ಗೆ ಹೆಚ್ಚಿಸುವುದು ಸೇರಿ ಹಲವು ಯೋಜನೆಗಳನ್ನು ಪ್ರಣಾಳಿಕೆಯಲ್ಲಿ ಘೋಷಿಸಲಾಗಿದ್ದು, ಅದರಂತೆ ಜಾರಿಗೆ ತರುತ್ತೇವೆ ಎಂದರು.
     ಮಾಜಿ ಸಂಸದ ಕೆ.ಸಿ. ಕೊಂಡಯ್ಯ, ಉದ್ಯಮಿಗಳಾದ ಅಥಣಿ ವೀರಣ್ಣ, ಎಸ್.ಕೆ.ವೀರಣ್ಣ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ, ಮೇಯರ್ ವಿನಾಯಕ ಪೈಲ್ವಾನ್, ಬ್ಲಾಕ್ ಅಧ್ಯಕ್ಷ ಅಯೂಬ್ ಪೈಲ್ವಾನ್, ನಾಯಕ ಸಮಾಜದ ಅಧ್ಯಕ್ಷ ಬಿ.ವೀರಣ್ಣ, ಮಹಾನಗರ ಪಾಲಿಕೆ ಸದಸ್ಯ ಸೋಗಿ ಶಾಂತಕುಮಾರ್, ಮಾಜಿ ಸದಸ್ಯ ಪಿ.ಎನ್.ಚಂದ್ರಶೇಖರ್, ಮಾಜಿ ಮೇಯರ್ ಅನಿತಾಬಾಯಿ, ದೂಡಾ ಮಾಜಿ ಅಧ್ಯಕ್ಷ ಮಾಲತೇಶ್ ರಾವ್ ಸೇರಿ ಅನೇಕ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.
     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts