More

    ಪಿ.ಎಂ. ಸ್ವನಿಧಿ ಸೆ ಸಮೃದ್ಧಿ ಮಾಸಾಚರಣೆ

    ದಾವಣಗೆರೆ : ಪಿ.ಎಂ. ಸ್ವನಿಧಿ ಸೆ ಸಮೃದ್ಧಿ ಮಾಸಾಚರಣೆಯನ್ನು ಶನಿವಾರದಿಂದ ಅ. 15 ರ ವರೆಗೆ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ತಿಳಿಸಿದ್ದಾರೆ.
     ಈ ಒಂದು ತಿಂಗಳ ಅವಧಿಯಲ್ಲಿ ಜಿಲ್ಲೆಯ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಬೀದಿ ಬದಿ ವ್ಯಾಪಾರಿಗಳ ನೋಂದಣಿ ಕಾರ್ಯ ನಡೆಯಲಿದೆ ಎಂದು ಹೇಳಿದ್ದಾರೆ.
     ತಳ್ಳುಗಾಡಿ ವ್ಯಾಪಾರಿಗಳು, ಮನೆ ಮನೆಗೆ ದಿನಪತ್ರಿಕೆ ಹಾಕುವವರು, ಹಾಲು ಹಾಕುವವರು, ಬಾರ್ ಬೆಂಡಿಂಗ್ ಕೆಲಸ ಮಾಡುವವರು, ಚಿಂದಿ ಆಯುವವರು, ಚಪ್ಪಲಿ ರಿಪೇರಿ, ಬೆತ್ತ ಬಿದಿರಿನ ಕೆಲಸ ಮಾಡುವವರು, ಪಂಕ್ಚರ್ ಹಾಕುವವರು, ಇಸ್ತ್ರಿ ಮಾಡುವವರು, ಎಳನೀರು ವ್ಯಾಪಾರ ಮಾಡುವವರು, ಕೇಟರಿಂಗ್ ಮಾಡುವವರು, ಕರಕುಶಲ ಕೆಲಸಗಾರರು, ಇನ್ನಿತರೆ ಸಣ್ಣ ಪುಟ್ಟ ಕೆಲಸ ಮಾಡುವ ಕಾರ್ಮಿಕರು ಕೇಂದ್ರ ಸರ್ಕಾರದ ಪಿ.ಎಂ. ಸ್ವನಿಧಿ ಯೋಜನೆಯ ಮೂಲಕ ಆರ್ಥಿಕ ಸಹಾಯ ಪಡೆಯಬಹುದಾಗಿದೆ ಎಂದಿದ್ದಾರೆ.
     ಮೊದಲ ಹಂತದಲ್ಲಿ 10 ಸಾವಿರ ರೂ, ಎರಡನೇ ಹಂತದಲ್ಲಿ 20 ಸಾವಿರ ರೂ, ಮೂರನೇ ಹಂತದಲ್ಲಿ 50 ಸಾವಿರ ರೂ. ಹಾಗೂ ನಾಲ್ಕನೇ ಹಂತದಲ್ಲಿ ಮುದ್ರಾ ಯೋಜನೆಯಡಿ 10 ಲಕ್ಷ ರೂ.ಗಳ ವರೆಗೆ ಸಾಲ ನೀಡಲಾಗುವುದು. ಯಾವುದೇ ಗ್ಯಾರಂಟಿ ಇಲ್ಲದೇ ಹಣ ಮಂಜೂರಾಗುತ್ತದೆ. ಬಡ್ಡಿಯ ದರದಲ್ಲಿ ಶೇ. 7 ರಷ್ಟು ಹಣವನ್ನು ಕೇಂದ್ರ ಸರ್ಕಾರವೇ ಬ್ಯಾಂಕ್‌ಗೆ ಭರಿಸುತ್ತದೆ ಎಂದು ಹೇಳಿದ್ದಾರೆ.
     ಪ್ರತಿ ಬ್ಯಾಂಕ್‌ನ ಶಾಖಾ ಮಟ್ಟದಲ್ಲಿ ಸಾಲ ಮೇಳ ಆಯೋಜನೆ ಮಾಡಲು ಕೇಂದ್ರ ಸರ್ಕಾರದಿಂದ ಸೂಚನೆ ನೀಡಲಾಗಿದೆ. ನೋಂದಾಯಿಸಿದ ಅರ್ಹ ಫಲಾನುಭವಿಗಳಿಗೆ ಗುರುತಿನ ಚೀಟಿ ಮತ್ತು ಮಾರಾಟ ಪ್ರಮಾಣಪತ್ರ ವಿತರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
     …

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts