More

    ಸರ್ಕಾರಿ ಶಾಲೆಯಲ್ಲಿ ತರಗತಿಗೊಬ್ಬರು ಸಸ್!

    ಸರ್ಕಾರಿ ಶಾಲೆಯಲ್ಲಿ ತರಗತಿಗೊಬ್ಬರು ಶಿಕ್ಷಕರಿರಲಿ

    ದಾವಣಗೆರೆ: ಖಾಸಗಿ ಶಾಲೆಗಳಲ್ಲಿನ ದುಬಾರಿ ಶುಲ್ಕದಿಂದ ಮಕ್ಕಳಿಗೆ ಶಿಕ್ಷಣ ಕೊಡಿಸುವುದು ಪಾಲಕರಿಗೆ ಅಸಾಧ್ಯವಾಗಿದೆ. ಸರ್ಕಾರಿ ಶಾಲೆಯಲ್ಲಿ ತಮ್ಮ ಮಕ್ಕಳನ್ನು ಸೇರಿಸಲು ಸರ್ಕಾರದ ಅವೈಜ್ಞಾನಿಕ ನೀತಿಯಿಂದ ಶಿಕ್ಷಕರ ಕೊರತೆಯಾಗಿ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ದೊರೆಯುತ್ತಿಲ್ಲ ಎಂಬ ಕೊರಗು ಪಾಲಕರದ್ದಾಗಿದೆ ಎಂದು ಕಾಂಗ್ರೆಸ್ ಯುವ ಮುಖಂಡ ಹರೀಶ್ ಬಸಾಪುರ ಹೇಳಿದ್ದಾರೆ.

    ಖಾಸಗಿ ಶಾಲೆಗಳಲ್ಲಿ ತರಗತಿಯ ಪ್ರತಿಯೊಂದು ವಿಷಯಕ್ಕೆ ಒಬ್ಬ ಶಿಕ್ಷಕರನ್ನು ನೇಮಿಸುತ್ತಿದ್ದು ಇದರಿಂದ ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆಯುತ್ತಿದೆ. ಆದರೆ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಆಧಾರದಲ್ಲಿ ಶಿಕ್ಷಕರನ್ನು ನೇಮಿಸುತ್ತಿರುವುದರಿಂದ ಸರಿಯಾದ ಶಿಕ್ಷಣ ಸಿಗದೆ ಬಡವರ ಮಕ್ಕಳು ಬೀದಿಗೆ, ಮಧ್ಯಮ ವರ್ಗದವರ ಮಕ್ಕಳನ್ನು ಪಾಲಕರು ಕಷ್ಟವಾದರೂ ಖಾಸಗಿ ಶಾಲೆಗಳಿಗೆ ಸೇರಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
    ಶಾಲೆಯಲ್ಲಿ 10 ಮಕ್ಕಳಿದ್ದರೆ ಒಬ್ಬ ಶಿಕ್ಷಕ, 11 ರಿಂದ 60 ಮಕ್ಕಳಿಗೆ ಇಬ್ಬರು ಶಿಕ್ಷಕರು, 61 ಮಕ್ಕಳಿಗಿಂತ ಹೆಚ್ಚಿದ್ದರೆ ಮೂವರು ಶಿಕ್ಷಕರನ್ನು ನೇಮಿಸುತ್ತಿರುವುದರಿಂದ ಸರ್ಕಾರಿ ಶಾಲೆ ಸ್ಥಿತಿ ಶೋಚನೀಯವಾಗಿದೆ.
    ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸುವ ಬದಲು ಅವುಗಳನ್ನು ಮುಚ್ಚುವ ಹಂತಕ್ಕೆ ಹೋಗುತ್ತಿದ್ದು ನೂತನ ಸರ್ಕಾರ ಇದರ ಬಗ್ಗೆ ಗಮನಹರಿಸಬೇಕಾಗಿದೆ ಎಂದಿದ್ದಾರೆ.
    ಸರ್ಕಾರ ವಿವಿಧ ಇಲಾಖೆಗಳಿಗೆ ಸಾವಿರಾರು ಕೋಟಿ ರೂ. ಅನುದಾನ ನೀಡುತ್ತಿರುವಾಗ ಬಡವರ ಮಕ್ಕಳ ಭವಿಷ್ಯಕ್ಕಾಗಿ ಶಿಕ್ಷಣ ಇಲಾಖೆಗೆ ಹೆಚ್ಚಿನ ಅನುದಾನ ನೀಡಿ ತರಗತಿಗೊಬ್ಬರಂತೆ ಶಿಕ್ಷಕರನ್ನು ನೇಮಿಸಿ ಉತ್ತಮ ಶಿಕ್ಷಣಕ್ಕೆ ಅನುವು ಮಾಡಿಕೊಡಬೇಕಿದೆ ಎಂದು ಆಗ್ರಹಿಸಿದ್ದಾರೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts