ದಾವಣಗೆರೆ : ಮಾಯಕೊಂಡ ಕ್ಷೇತ್ರದ ಹೆಮ್ಮನಬೇತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶಾಸಕ ಕೆ.ಎಸ್. ಬಸವಂತಪ್ಪ ಮಂಗಳವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಾಲೆಯಲ್ಲಿ ಮಕ್ಕಳ ಹಾಜರಿ, ಶಿಕ್ಷಣದ ಗುಣಮಟ್ಟ, ಶೈಕ್ಷಣಿಕ ಪ್ರಗತಿ, ಶಿಕ್ಷಕರ ಹಾಜರಿ ಪುಸ್ತಕ, ಮಧ್ಯಾಹ್ನದ ಬಿಸಿಯೂಟದ ಮೆನು ಹಾಗೂ ಭೋಜನಾಲಯ ಪರಿಶೀಲಿಸಿದರು. ಶಾಲೆಯ ನಾಲ್ವರು ಶಿಕ್ಷಕರಲ್ಲಿ ಇಬ್ಬರು ರಜೆ ಇದ್ದರೂ ರಜೆ ಚೀಟಿ ಬರೆದಿಲ್ಲ. ಇನ್ನಿಬ್ಬರು ಶಿಕ್ಷಕರು ಹಾಜರಿ ಪುಸ್ತಕದಲ್ಲಿ ಸಂಜೆ ಮಾಡುವ ಸಹಿಯನ್ನು ಬೆಳಗ್ಗೆಯೇ ಮಾಡಿದ್ದರು. ಇದನ್ನು ಕಂಡ ಶಾಸಕರು ಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡರು. ಮಧ್ಯಾಹ್ನದ ಬಿಸಿಯೂಟದ ಜತೆಗೆ ಮೊಟ್ಟೆ ಕೊಡುತ್ತಿಲ್ಲ. ವಾರಕ್ಕೆ ಒಂದೇ ಮೊಟ್ಟೆ ಕೊಡುತ್ತಾರೆ. ಇಲ್ಲದಿದ್ದರೆ ಇಲ್ಲ ಎಂದು ಮಕ್ಕಳು ಶಾಸಕರಿಗೆ ತಿಳಿಸಿದರು. ಸರ್ಕಾರ ಗ್ರಾಮೀಣ ಪ್ರದೇಶದ ಬಡ ಮಕ್ಕಳ ಶಿಕ್ಷಣಕ್ಕೆ ಹಲವಾರು ಸೌಲಭ್ಯ ನೀಡುತ್ತಿದೆ. ಆದರೆ, ಸರ್ಕಾರದ ಸೌಲಭ್ಯಗಳನ್ನು ಮಕ್ಕಳಿಗೆ ಸರಿಯಾಗಿ ಕೊಡುವುದಿಲ್ಲ ಎಂದರೆ ಹೇಗೆ ಎಂದು ಪ್ರಶ್ನಿಸಿದರು. ದೂರವಾಣಿ ಮೂಲಕ ಉತ್ತರ ವಲಯದ ಶಿಕ್ಷಣಾಧಿಕಾರಿಯನ್ನು ಸಂಪರ್ಕಿಸಿದ ಶಾಸಕರು, ಶಾಲೆಯ ಸಮಸ್ಯೆ ಬಗ್ಗೆ ವಿವರಿಸಿದರು. ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಮುಂದೆ ಈ ರೀತಿ ಆಗದಂತೆ ಎಚ್ಚರಿಕೆ ನೀಡಬೇಕು ಎಂದು ಸೂಚಿಸಿದರು. ನರೇಗಾದಡಿ ಹೈಟೆಕ್ ಶೌಚಾಲಯ, ಭೋಜನಾಲಯ, ಶಾಲಾ ಕಾಂಪೌಂಡ್, ಆಟದ ಮೈದಾನ ನಿರ್ಮಾಣ ಮಾಡುವಂತೆ ಗ್ರಾಪಂ ಪಿಡಿಒ ಅವರಿಗೆ ದೂರವಾಣಿ ಮೂಲಕ ಸೂಚನೆ ನೀಡಿದರು. ಎಪಿಎಂಸಿ ಮಾಜಿ ಅಧ್ಯಕ್ಷ ಎಸ್.ಕೆ. ಚಂದ್ರಶೇಖರ್, ವಕೀಲ ಮಂಜಪ್ಪ, ಸದಸ್ಯ ದುರುಗಪ್ಪ, ತಿಪ್ಪೇಸ್ವಾಮಿ, ರೇವಣಸಿದ್ದಯ್ಯ, ರಂಗನಾಥ್, ಕರಿಬಸಪ್ಪ, ಬಸವಲಿಂಗಪ್ಪ, ಮುಖ್ಯ ಶಿಕ್ಷಕ ನಾಗರಾಜ್ ಇದ್ದರು. ಬಾಕ್ಸ್.. ಅಂಗನವಾಡಿ ಕೇಂದ್ರಕ್ಕೆ ಭೇಟಿ ಹೆಮ್ಮನಬೇತೂರು ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿದ ಶಾಸಕ ಕೆ.ಎಸ್.ಬಸವಂತಪ್ಪ, ಮಕ್ಕಳ ಹಾಜರಾತಿ, ಪ್ರತಿದಿನ ಮಕ್ಕಳಿಗೆ ಕೊಡುವ ಆಹಾರ ಪದಾರ್ಥ ಪರಿಶೀಲನೆ ನಡೆಸಿದರು. ಮಕ್ಕಳಿಗೆ, ಗರ್ಭಿಣಿಯರು, ಬಾಣಂತಿಯರಿಗೆ ಪೌಷ್ಟಿಕ ಆಹಾರ ನೀಡಬೇಕು. ಯಾವುದೇ ರೀತಿಯ ಸಮಸ್ಯೆ ಆಗದಂತೆ ಗಮನ ಹರಿಸಬೇಕೆಂದು ಕಾರ್ಯಕರ್ತೆಗೆ ಸೂಚಿಸಿದರು.
ಹೆಮ್ಮೆನಬೇತೂರು ಸರ್ಕಾರಿ ಶಾಲೆಗೆ ಶಾಸಕ ಬಸವಂತಪ್ಪ ದಿಢೀರ್ ಭೇಟಿ
Bathing : ನೀರಿನಲ್ಲಿ ಇವುಗಳನ್ನು ಬೆರೆಸಿ ಸ್ನಾನ ಮಾಡಿದ್ರೆ ಸಾಕು ಅದೃಷ್ಟ ಖುಲಾಯಿಸುತ್ತದೆ…
ಬೆಂಗಳೂರು: ಪ್ರತಿದಿನ ಸ್ನಾನ ( Bathing ) ಮಾಡುವ ಅಭ್ಯಾಸವನ್ನು ಸಾಮಾನ್ಯವಾಗಿ ಎಲ್ಲರೂ ರೂಢಿಸಿಕೊಂಡಿರುತ್ತಾರೆ. ನೀವು…
ದೀಪಾವಳಿಗೆ ಮನೆ ಸ್ವಚ್ಛ ಮಾಡ್ತಾ ಇದ್ದೀರಾ? ಮನೆಯಲ್ಲಿ cockroach ಇದ್ರೆ ಹೀಗೆ ಮಾಡಿ…
ಬೆಂಗಳೂರು: ಅನೇಕ ಜನರು ತಮ್ಮ ಮನೆಯಲ್ಲಿ ಜಿರಳೆಗಳ ( cockroach ) ಸಮಸ್ಯೆಯನ್ನು ಎದುರಿಸುತ್ತಾರೆ. ಅವುಗಳನ್ನು…
Crab Sukka : ಭಾನುವಾರದ ಬಾಡೂಟಕ್ಕೆ ಮಾಡಿ ರುಚಿಯಾದ ಏಡಿ ಸುಕ್ಕ..
ಬೆಂಗಳೂರು: ವಾರದ ಕೊನೆಯಲ್ಲಿ ಮಧ್ಯಾಹ್ನದ ಸಮಯಕ್ಕೆ ರುಚಿಯಾದ ಅಡುಗೆ ಏನಾದರು ಮಾಡುವ ಪ್ಲಾನ್ (Plan) ಹಾಕಿಕೊಂಡಿದ್ದೀರಾ?ಆದಿತ್ಯವಾರದಂದು…