ದಾವಣಗೆರೆ : ಸಿ.ಬಿ.ಎಸ್.ಇ ಪಠ್ಯಕ್ರಮದ ಹತ್ತನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ನಗರದ ಶ್ರೀ ತರಳಬಾಳು ಸೆಂಟ್ರಲ್ ಸ್ಕೂಲ್ನ ವಿದ್ಯಾರ್ಥಿ ಎಚ್.ಪಿ. ಸುಮಿತ್ ಶೇ. 97.40 ಅಂಕಗಳನ್ನು ಪಡೆದು ಜಿಲ್ಲೆಯ ಟಾಪರ್‌ಗಳ ಸಾಲಿಗೆ ಸೇರಿದ್ದಾನೆ. ಶಾಲೆಗೆ ಶೇ. 100ರಷ್ಟು ಫಲಿತಾಂಶ ಲಭಿಸಿದೆ. ಪರೀಕ್ಷೆಗೆ ಹಾಜರಾದ 204 ವಿದ್ಯಾರ್ಥಿಗಳಲ್ಲಿ 63 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 104 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿಗಳ ಸಾಧನೆಯ ಬಗ್ಗೆ ಶ್ರೀ ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಶ್ರೀ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ, ಆಡಳಿತ ಮಂಡಳಿಯವರು, ಪ್ರಾಚಾರ್ಯರು, ಶಿಕ್ಷಕರು ಮತ್ತು ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.
