ದಾವಣಗೆರೆ : ಬೇಸಿಗೆ ರಜೆ ಮುಗಿದಿದ್ದು ಬುಧವಾರದಿಂದ ಶಾಲೆಗಳು ಪುನಾರಂಭಗೊಳ್ಳಲಿವೆ. 2024-25ನೇ ಶೈಕ್ಷಣಿಕ ಸಾಲಿನ ಚಟುವಟಿಕೆಗಳಿಗಾಗಿ ಸಿದ್ಧತೆಗಳು ಭರದಿಂದ ಸಾಗಿವೆ. ಜಿಲ್ಲಾದ್ಯಂತ ಮಂಗಳವಾರ ಕಸ ಹೊಡೆದು, ಧೂಳು ತೆಗೆದು ಶಾಲೆಗಳನ್ನು ಸ್ವಚ್ಛಗೊಳಿಸಲಾಯಿತು.
ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳ ಇಡೀ ಆವರಣ, ತರಗತಿ ಕೊಠಡಿಗಳು, ಬಿಸಿಯೂಟದ ಅಡುಗೆ ಮನೆ ಸೇರಿ ಅಲ್ಲಿನ ಪರಿಸರವನ್ನು ಶುಚಿಗೊಳಿಸುವ ಕಾರ್ಯ ನಡೆಯಿತು. ಕುಡಿಯುವ ನೀರಿನ ತೊಟ್ಟಿಗಳನ್ನು ಶುಚಿಗೊಳಿಸಲಾಯಿತು. ಜೂನಿಯರ್ ಕಾಲೇಜುಗಳಲ್ಲಿ ಸೋಮವಾರವೆ ಸ್ವಚ್ಛತೆ ಮಾಡಲಾಯಿತು.
ಜಿಲ್ಲೆಯಲ್ಲಿ 564 ಕಿರಿಯ, 934 ಹಿರಿಯ ಪ್ರಾಥಮಿಕ ಶಾಲೆಗಳಿವೆ. 517 ಪ್ರೌಢಶಾಲೆಗಳು ಸೇರಿ ಒಟ್ಟು 2014 ಶಾಲೆಗಳಿದ್ದು, ನೂತನ ಶೈಕ್ಷಣಿಕ ವರ್ಷಕ್ಕೆ ಅವುಗಳನ್ನು ಅಣಿಗೊಳಿಸುವ ಕೆಲಸ ನಡೆಯಿತು.
ಶಾಲಾ ಪ್ರಾರಂಭೋತ್ಸವ ಮೇ 31 ರಂದು ನಡೆಯಲಿದೆ. ಆದರೆ ಶಿಕ್ಷಕರು ಬುಧವಾರದಿಂದಲೆ ಶಾಲೆಗಳಿಗೆ ಹೋಗಿ ಚಟುವಟಿಕೆಗಳನ್ನು ಆರಂಭಿಸಲಿದ್ದಾರೆ. ಎಸ್‌ಡಿಎಂಸಿಯ ಸಭೆಗಳನ್ನು ನಡೆಸಿ ಶೈಕ್ಷಣಿಕ ವರ್ಷದ ಸಿದ್ಧತೆಗಳ ಕುರಿತು ಚರ್ಚಿಸಲಾಗುವುದು. ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಮಾಲೋಚನೆ ನಡೆಸಲಾಗುತ್ತದೆ. ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ಕರೆ ತರುವುದು, ಕಟ್ಟಡಗಳ ದುರಸ್ತಿಯಂಥ ವಿಷಯಗಳು ಸಭೆಯಲ್ಲಿ ಚರ್ಚೆಗೆ ಬರುತ್ತವೆ.
ವೇಳಾಪಟ್ಟಿ ಸಿದ್ಧಪಡಿಸುವುದು, ಕಾರ್ಯ ಹಂಚಿಕೆ, ಶಾಲಾ ಪಂಚಾಂಗ, ಸೇತುಬಂಧ ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಿಕೊಳ್ಳುವುದು, ಬಿಸಿಯೂಟದ ಪರಿಕರಗಳು ಮತ್ತು ಧಾನ್ಯಗಳನ್ನು ಸ್ವಚ್ಛಗೊಳಿಸುವುದು ಹೀಗೆ ಶಿಕ್ಷಕರು ಈ ಎರಡು ದಿನಗಳಲ್ಲಿ ಹಲವು ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲಿದ್ದಾರೆ.
ಶಾಲಾ ಪ್ರಾರಂಭೋತ್ಸವವನ್ನು ವಿಶೇಷವಾಗಿ ಆಚರಿಸುವ ಮೂಲಕ ಮಕ್ಕಳನ್ನು ಆಕರ್ಷಿಸಲಾಗುತ್ತದೆ. ಶಾಲೆಯ ಆವರಣವನ್ನು ತಳಿರು ತೋರಣಗಳಿಂದ ಸಿಂಗರಿಸಲಾಗುತ್ತದೆ. ಮಕ್ಕಳಿಗೆ ಸಿಹಿಯೂಟ ನೀಡುವ ಮೂಲಕ ಶುಭ ಹಾರೈಸಲಾಗುತ್ತದೆ. ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಸಮವಸ್ತ್ರಗಳನ್ನೂ ಅಂದೇ ನೀಡಲಾಗುತ್ತದೆ. ಕೆಲವು ಶಾಲೆಗಳಲ್ಲಿ ಮಕ್ಕಳಿಗೆ ಹೂವು ನೀಡಿ ಸ್ವಾಗತಿಸಲಾಗುತ್ತದೆ.
…
(ಕೋಟ್)
ಕ್ಷೇತ್ರ ಶಿಕ್ಷಣಾಧಿಕಾರಿಗಳು ಮುಖ್ಯ ಶಿಕ್ಷಕರ ಸಭೆ ಕರೆದು ಶಾಲೆಗಳ ಪುನಾರಂಭ, ಅದಕ್ಕಾಗಿ ಕೈಗೊಳ್ಳಬೇಕಾದ ಸಿದ್ಧತೆ ಕುರಿತು ಸೂಚನೆಗಳನ್ನು ನೀಡಿದ್ದಾರೆ. ಅದರಂತೆ ಈಗಾಗಲೇ ಸ್ವಚ್ಛತಾ ಕಾರ್ಯಗಳು ಆರಂಭವಾಗಿವೆ. ಸ್ವಚ್ಛತೆಗೆ ಇನ್ನೂ ಎರಡು ದಿನಗಳ ಕಾಲಾವಕಾಶವಿದೆ. 31 ರಂದು ಶಾಲಾ ಆರಂಭೋತ್ಸವ ಮಾಡಲಾಗುವುದು. ವಿದ್ಯಾರ್ಥಿಗಳಿಗೆ ಬೇಕಾದ ಸಮವಸ್ತ್ರಗಳು ಸಂಪೂರ್ಣ ಬಂದಿವೆ. ಶೇ. 90 ರಷ್ಟು ಪಠ್ಯಪುಸ್ತಕಗಳೂ ಸರಬರಾಜಾಗಿವೆ. ಅವುಗಳನ್ನು ಶಾಲೆಗಳಿಗೆ ಕಳಿಸಿಕೊಡಲಾಗಿದೆ.
ಜಿ. ಕೊಟ್ರೇಶ್, ಡಿಡಿಪಿಐ ದಾವಣಗೆರೆ
ಶಾಲೆಗಳ ಪುನಾರಂಭಕ್ಕೆ ಸಿದ್ಧತೆ
ಈ ಕಾಯಿಲೆಯಿಂದ ಬಳಲುತ್ತಿರುವವರು ಸಿಹಿ ಗೆಣಸಿನಿಂದ ದೂರವಿರಿ; ಇಲ್ಲಿದೆ ಹೆಲ್ತಿ ಮಾಹಿತಿ | Health Tips
ಸಿಹಿ ಗೆಣಸು ಯಾರಿಗೆ ಇಷ್ಟವಿರುವುದಿಲ್ಲ ಹೇಳಿ. ರುಚಿಕರವಾದ ಸಿಹಿಗೆಣಸನ್ನು ಶೀತ ಋತುವಿನಲ್ಲಿ ಕಂಡುಬರುವ ಬೇರು ತರಕಾರಿ…
ಗಿಡಗಳನ್ನು ಹಸಿರಾಗಿಡಲು ಕಡಲೆಕಾಯಿ ಸಿಪ್ಪೆ ಪ್ರಯೋಜನಕಾರಿ; ಇಲ್ಲಿದೆ ಬಳಸುವ ವಿಧಾನ | Tips
ಚಳಿಗಾಲದಲ್ಲಿ ಸಸ್ಯಗಳಿಗೆ ಹೆಚ್ಚಿನ ಕಾಳಜಿ ಬೇಕು. ಏಕೆಂದರೆ ತಂಪಾದ ಗಾಳಿ ಮತ್ತು ಇಬ್ಬನಿಯಿಂದ ತೇವಾಂಶವು ಹೆಚ್ಚಾಗುವುದರಿಂದ…
Kurukshetra | ಕುರುಕ್ಷೇತ್ರ ಯುದ್ಧದ ಕೊನೆಯಲ್ಲಿ ರಣಭೂಮಿಗೆ ದ್ರೌಪದಿಯನ್ನು ಶ್ರೀಕೃಷ್ಣ ಕರೆತಂದಿದ್ದೇಕೆ; ಪರಮಾತ್ಮ ಹೇಳಿದ್ದೇನು?
ಕುರುಕ್ಷೇತ್ರ(Kurukshetra) ಯುದ್ಧದಲ್ಲಿ ಎಲ್ಲಾರೂ ಮರಣ ಹೊಂದಲು ಕಾರಣ ಪಾಂಡವರಲ್ಲ ದ್ರೌಪದಿಯ ಕಣ್ಣೀರು. ಕುರುಕ್ಷೇತ್ರ ಯುದ್ಧ ಮುಗಿದ…