blank

ಹಿರಿಯರಿಗೆ ತೋರಬೇಕು ಗೌರವ

blank

ದಾವಣಗೆರೆ :  ಹಳೇ ಬೇರು, ಹೊಸ ಚಿಗುರು ಎಂಬಂತೆ ಹಿರಿಯರನ್ನು ಗೌರವಿಸಿ ವಿಧೇಯರಾಗಿರಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಮಹಾವೀರ ಮ. ಕರೆಣ್ಣವರ ಹೇಳಿದರು.  ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಹಿರಿಯ ನಾಗರಿಕರ ಸಂಘ ಹಾಗೂ ಜಿಲ್ಲಾ ಸರ್ಕಾರಿ ನಿವೃತ್ತ ನೌಕರರ ಸಂಘದ ಸಹಯೋಗದಲ್ಲಿ ನಗರದ ಸರ್ಕಾರಿ ನೌಕರರ ಭವನದಲ್ಲಿ ಮಂಗಳವಾರ, ವಿಶ್ವ ಹಿರಿಯ ನಾಗರಿಕರ ನಿಂದನೆ ಜಾಗೃತಿ ದಿನದ ಪ್ರಯುಕ್ತ, ಹಿರಿಯ ನಾಗರಿಕರ ಹಕ್ಕುಗಳ ಮತ್ತು ಸೌಲಭ್ಯಗಳ ಕುರಿತು ಹಾಗೂ ಅವರ ಮೇಲೆ ನಡೆಯುವ ದೌರ್ಜನ್ಯಗಳ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.  ಹಿರಿಯ ನಾಗರಿಕರು ಆಪತ್ತಿನ ಪರಿಸ್ಥಿತಿಯಲ್ಲಿ ಹಿರಿಯ ನಾಗರಿಕರ ಇಲಾಖೆ, ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ, ಕಾನೂನು ಸೇವಾ ಪ್ರಾಧಿಕಾರದ ಸಹಾಯದೊಂದಿಗೆ ನ್ಯಾಯವನ್ನು ಪಡೆಯಬಹುದು. ಹಿರಿಯ ನಾಗರಿಕರು ಈ ದೇಶದ ಸಂಪತ್ತು ಎಂದು ತಿಳಿಸಿದರು.  ವಕೀಲರ ಸಂಘದ ಅಧ್ಯಕ್ಷ ಎಲ್.ಎಚ್. ಅರುಣ ಕುಮಾರ್ ಮಾತನಾಡಿ ಹಿರಿಯ ನಾಗರಿಕರಿಗೆ ನಿಂದನೆ,, ಹಲ್ಲೆಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿವೆ. ಇವತ್ತಿನ ಮಕ್ಕಳಿಗೆ ತಾಯಿ, ತಂದೆ ಆಸ್ತಿ, ಅಂತಸ್ತುಗಳನ್ನು ಮಾಡಿಕೊಟ್ಟಿಲ್ಲವೆಂದು ನಿಂದನೆ, ದೌರ್ಜನ್ಯ ನಡೆಯುತ್ತಿವೆ. ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿರುವುದರಿಂದ ಮಕ್ಕಳಿಗೆ ವಿವಾಹವಾಗದೇ, ಖಿನ್ನತೆಗೆ ಒಳಗಾಗಿ ತಂದೆ, ತಾಯಂದಿರಿಗೆ ನಿಂದನೆ ಮಾತುಗಳನ್ನಾಡುತ್ತಿದ್ದಾರೆ. ನಿಂದನೆಗೆ ಒಳಗಾಗುವ ಹಿರಿಯ ನಾಗರಿಕರು ಕಾನೂನಿನ ಸೇವೆ ಪಡೆಯಬೇಕು ಎಂದರು.  ಜಿಲ್ಲಾ ಹಿರಿಯ ನಾಗರಿಕರ ಸಂಘದ ಅಧ್ಯಕ್ಷ ಎಸ್. ಗುರುಮೂರ್ತಿ ಮಾತನಾಡಿ, ಮಕ್ಕಳು ಅನೇಕ ರೀತಿಯ ದೌರ್ಜನ್ಯ ಎಸಗಿದ್ದರೂ ನಾವೇ ಸಹಿಸಿಕೊಳ್ಳುವುದು. ಮಕ್ಕಳು ಮಾಡುವ ತಪ್ಪನ್ನು ಸರಿಪಡಿಸಿಕೊಳ್ಳುವ ರೀತಿಯ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.  ಜಿಲ್ಲಾ ಸರ್ಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಡಾ.ವೀರಯ್ಯ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ಕೆ.ಕೆ ಪ್ರಕಾಶ್, ಜಿಲ್ಲಾ ಸಂಯೋಜಕ ಡಿ. ನಾಗರಾಜ ಇದ್ದರು.

Share This Article

ಚಿಕ್ಕ ಮಕ್ಕಳು ಹಗಲಲ್ಲಿ ಅಧಿಕ ನಿದ್ರಿಸಲು ಇದೇ ಕಾರಣವಂತೆ! ವೈದ್ಯರು ಹೇಳೊದೇನು? | Children Sleep

Children Sleep: ಸಾಮಾನ್ಯವಾಗಿ ಹುಟ್ಟಿನಿಂದ 6 ತಿಂಗಳವರೆಗೆ, ಮಕ್ಕಳು ಯಾವಾಗ ಮಲಗುತ್ತಾರೆ ಮತ್ತು ಯಾವಾಗ ಎಚ್ಚರಗೊಳ್ಳುತ್ತಾರೆ…

ಇವುಗಳ ಜೊತೆ ಮುಲ್ತಾನಿ ಮೆಟ್ಟಿ ಫೇಸ್‌ ಪ್ಯಾಕ್‌ ಮಾಡಿ ಮುಖಕ್ಕೆ ಹಚ್ಚಿ, ರಿಸಲ್ಟ್‌ ನೀವೇ ನೋಡಿ! Skin Care

Skin Care : ತ್ವಚೆಯ ಆರೈಕೆಯಲ್ಲಿ ನಾವು ನೈಸರ್ಗಿಕವಾಗಿ ಬಳಸುವ ಮುಲ್ತಾನಿ ಮಿಟ್ಟಿ ಕೂಡ ಒಂದು.…