ದಾವಣಗೆರೆ : ಸಮಾಜದ ಮುನ್ನಡೆಗಾಗಿ ಕಲೆ ಮತ್ತು ಸಂಸ್ಕೃತಿಯನ್ನು ಮಕ್ಕಳಿಗೆ ಕಲಿಸಿಕೊಡಬೇಕು. ಅದಕ್ಕೆ ಸಾಂಸ್ಕೃತಿಕ ಕಾರ್ಯಕ್ರಮಗಳು ಸಹಕಾರಿ ಆಗುತ್ತವೆ ಎಂದು ದಾವಣಗೆರೆ- ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ (ದೂಡಾ) ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ ಸಲಹೆ ನೀಡಿದರು. ನಗರದ ಚಿಂದೋಡಿ ಲೀಲಾ ಸಭಾಂಗಣದಲ್ಲಿ ಶಿವಸಿಂಪಿ ಸಮಾಜದ ವತಿಯಿಂದ ಶನಿವಾರ ಏರ್ಪಡಿಸಿದ್ದ ನೂತನ ಪದಾಧಿಕಾರಿಗಳ ಪದಗ್ರಹಣ, ಕನ್ನಡ ರಾಜ್ಯೋತ್ಸವ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು. ದೂಡಾ ವತಿಯಿಂದ ಸಮುದಾಯಕ್ಕೆ ನಿವೇಶನ ಒದಗಿಸಲಾಗಿದೆ. ಈ ಸ್ಥಳದಲ್ಲಿ ಕಟ್ಟಡ ನಿರ್ಮಾಣಕ್ಕೆ ಸಹಕಾರ ನೀಡಲಾಗುವುದು. ಈ ಕುರಿತು ಶಾಸಕ ಶಾಮನೂರು ಶಿವಶಂಕರಪ್ಪ ಅವರ ಗಮನ ಸೆಳೆಯಲಾಗುವುದು ಎಂದು ಭರವಸೆ ನೀಡಿದರು. ನಾಗರಿಕ ಸೌಲಭ್ಯ ನಿವೇಶನಕ್ಕೆ ನಿಗದಿಪಡಿಸಿದ ದರ ಪಾವತಿ ಕಷ್ಟವಾಗಿದ್ದು, ರಿಯಾಯಿತಿ ಕಲ್ಪಿಸಿದರೆ ಅನುಕೂಲ ಎಂದು ಸಮುದಾಯದ ಪ್ರಮುಖರು ಮನವಿ ಮಾಡಿದರು. ಬನಹಟ್ಟಿಯ ಮಹಾಂತ ದೇವರು ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಶಿವಸಿಂಪಿ ಸಮಾಜದ ನೂತನ ಅಧ್ಯಕ್ಷ ಚಿಂದೋಡಿ ಎಲ್. ಚಂದ್ರಧರ್, ಪ್ರಧಾನ ಕಾರ್ಯದರ್ಶಿ ಬಿ.ವಿ.ಮಹೇಶ್ವರ, ಖಜಾಂಚಿ ಎಚ್.ಎನ್. ನಾಗರಾಜ್, ಬಾಪೂಜಿ ಬ್ಯಾಂಕ್ ಪ್ರಧಾನ ವ್ಯವಸ್ಥಾಪಕ ಬಸವರಾಜ ಉತ್ತಂಗಿ, ನಗರಸಭೆಯ ಮಾಜಿ ಸದಸ್ಯೆ ಗೀತಾ ಮುರುಗೇಶ್, ನಟ ಸಂತೋಷ್, ಗುರುಬಸಪ್ಪ ಬೂಸ್ನೂರು, ಜಗದೀಶ್ ಬಾವಿಕಟ್ಟಿ ಇದ್ದರು.
ಮಕ್ಕಳಿಗೆ ಕಲೆ, ಸಂಸ್ಕೃತಿ ಪರಿಚಯ ಅಗತ್ಯ
ಕೇವಲ 10 ನಿಮಿಷದಲ್ಲಿ ಮನೆಯಲ್ಲೇ ಮಾಡಿ ಬ್ರೆಡ್ ಪಿಜ್ಜಾ; ಇಲ್ಲಿದೆ ಸಿಂಪಲ್ ವಿಧಾನ | Recipe
ಮನೆಯಲ್ಲಿದ್ದಾಗ ಕೆಲವೊಮ್ಮೆ ಬಹಳ ಹಸಿವಾಗುತ್ತಿರುತ್ತದೆ ಆದರೆ ಆ ಸಮಯದಲ್ಲಿ ಏನು ತಿನ್ನಬೇಕು ಎಂಬುದೆ ನಮಗೆ ತಿಳಿಯುವುದಿಲ್ಲ.…
ಊಟದ ಬಳಿಕ ಬೆಲ್ಲದ ಸೇವನೆಯಿಂದಾಗುವ ಪ್ರಯೋಜನ ಗೊತ್ತಾ?; ತಿಳಿದ್ರೆ ನೀವು ಮಿಸ್ ಮಾಡೋದೆ ಇಲ್ಲ | Health Tips
ಭಾರತದಲ್ಲಿ ಬೆಲ್ಲವನ್ನು ಸಾಮಾನ್ಯವಾಗಿ ಊಟದ ನಂತರ ತಿನ್ನಲಾಗುತ್ತದೆ. ನಿಮ್ಮ ಹಸಿವನ್ನು ನೀಗಿಸಲು ಇದನ್ನು ಸಿಹಿಯಾಗಿ ಸೇವಿಸಬಹುದು.…
ಟೊಮೆಟೊ ಸೇವನೆ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆಯೇ; ಈ ಬಗ್ಗೆ ತಜ್ಞರು ಹೇಳೋದೇನು? | Health Tips
ಕ್ಯಾನ್ಸರ್ ಚಿಕಿತ್ಸೆಯು ಇನ್ನೂ ಅತ್ಯಂತ ದುಬಾರಿ ಮತ್ತು ಅಸಾಧ್ಯವಾಗಿದೆ. ಇತ್ತೀಚೆಗೆ ಯುವಕರನ್ನೂ ಕಾಡುತ್ತಿರುವ ರೋಗ ಕ್ಯಾನ್ಸರ್.…