26.8 C
Bangalore
Friday, December 13, 2019

ಅಭಿವೃದ್ಧಿ ಕಾಮಗಾರಿಗಳಲ್ಲಿ ದೂರದೃಷ್ಟಿ ಕೊರತೆ!

Latest News

ಶಬರಿಮಲೆ ವಿಚಾರದಲ್ಲಿ ಸದ್ಯ ಯಾವುದೇ ಆದೇಶವನ್ನು ಹೊರಡಿಸಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್​

ನವದೆಹಲಿ: ಪೊಲೀಸ್​ ರಕ್ಷಣೆಯೊಂದಿಗೆ ಶಬರಿಮಲೆ ಅಯ್ಯಪ್ಪನ ಸನ್ನಿಧಿಯನ್ನು ಮಹಿಳೆಯರು ಸುರಕ್ಷಿತವಾಗಿ ಪ್ರವೇಶಿಸಲು ಕೇರಳ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಇಬ್ಬರು ಮಹಿಳಾ ಕಾರ್ಯಕರ್ತರು ಸಲ್ಲಿಸಿದ್ದ...

ತುಮಕೂರು ಸ್ಮಾರ್ಟ್‌ಸಿಟಿ ಜೆಎಂಡಿ ಎತ್ತಂಗಡಿ!

ತುಮಕೂರು: ಸ್ಮಾರ್ಟ್‌ಸಿಟಿ ಲಿಮಿಟೆಡ್ ಜಂಟಿ ವ್ಯವಸ್ಥಾಪಕ ನಿರ್ದೇಶಕ ವಿ.ಅಜಯ್ ಅವರನ್ನು ಎತ್ತಂಗಡಿ ಮಾಡಲಾಗಿದೆ. 3 ತಿಂಗಳ ಹಿಂದೇ ಸ್ಮಾರ್ಟ್‌ಸಿಟಿ ಎಂಡಿ ಜವಾಬ್ದಾರಿ ಹೊಣೆ ಹೊತ್ತಿದ್ದ ಮಹಾನಗರ...

ಕುಪ್ಪೂರು ಶ್ರೀ ಮರುಳಸಿದ್ದೇಶ್ವರ ಜಾತ್ರೆಗೆ ಸಿಎಂ ಯಡಿಯೂರಪ್ಪ ಚಾಲನೆ

ಚಿಕ್ಕನಾಯಕನಹಳ್ಳಿ: ಸುಕ್ಷೇತ್ರ ಕುಪ್ಪೂರು ಶ್ರೀಮರುಳಸಿದ್ದೇಶ್ವರ ಗದ್ದುಗೆ ಜಾತ್ರೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಗುರುವಾರ ಚಾಲನೆ ನೀಡಿದ್ದು, ನಾಡಿನ ವಿವಿಧೆಡೆಯಿಂದ ಸಾವಿರಾರು ಭಕ್ತರು ಜಾತ್ರೆಗೆ ಬಂದಿದ್ದರು. ಶ್ರೀಮಠದ ಆವರಣದಲ್ಲಿ ಗುರುವಾರ...

ಬಲರಾಮ್ ಕುಣಿಗಲ್ ಬಿಜೆಪಿ ಅಧ್ಯಕ್ಷ

ಕುಣಿಗಲ್: ತಾಲೂಕು ಬಿಜೆಪಿ ನೂತನ ಅಧ್ಯಕ್ಷರಾಗಿ ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎಸ್.ಬಲರಾಮ್ ಗುರುವಾರ ಅವಿರೋಧ ಆಯ್ಕೆಯಾದರು. ಪಟ್ಟಣದ ದಿಶಾ ಪಾರ್ಟಿ ಹಾಲ್‌ನಲ್ಲಿ ರಾಜ್ಯ ಬಿಜೆಪಿ...

ಭಾರತದ ಪ್ರಗತಿಗೆ ಬೇಕು ವೈಜ್ಞಾನಿಕ ಶಿಕ್ಷಣ: ಡಾ.ಡಿ.ವಿ.ಗೋಪಿನಾಥ್

ದಾವಣಗೆರೆ: ಭಾರತದ ಪ್ರಗತಿಗೆ ವೈಜ್ಞಾನಿಕ ಶಿಕ್ಷಣ ಅತ್ಯವಶ್ಯ ಎಂದು ಮುಂಬೈನ ಭಾಭಾ ಅಣು ಸಂಶೋಧನಾ ಕೇಂದ್ರದ ಜೀವ ವೈದ್ಯಕೀಯ ವಿಭಾಗದ ನಿವೃತ್ತ ನಿರ್ದೇಶಕ ಡಾ.ಡಿ.ವಿ.ಗೋಪಿನಾಥ್ ಹೇಳಿದರು. ಪಾರ್ವತಮ್ಮ...

ದಾವಣಗೆರೆ: ಸ್ಮಾರ್ಟ್‌ಸಿಟಿ ದಾವಣಗೆರೆ ನಗರದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆದಿವೆ ಎಂಬ ಸಮಾಧಾನ ಒಂದು ಕಡೆಯಾದರೆ, ಕೆಲವು ಕಾಮಗಾರಿಗಳಲ್ಲಿ ದೂರದೃಷ್ಟಿಯ ಕೊರತೆ ಎದ್ದುಕಾಣುತ್ತದೆ.

ನಗರದ ಹದಡಿ ರಸ್ತೆಯ ಅಂಚಿನಲ್ಲಿ ಬೈಪಾಸ್ ಬಳಿಯ ಸೇತುವೆಯನ್ನು ಕೂಡುವ, ಸುಮಾರು 300 ಮೀ.ಗಳಷ್ಟಿರುವ ರಸ್ತೆ ಬಹಳ ಚಿಕ್ಕದಾಗಿದ್ದು ವಾಹನ ಸಂಚಾರ ದೃಷ್ಟಿಯಿಂದ ಇಕ್ಕಟ್ಟಾಗಿದೆ ಎಂಬ ಮಾತು ಸಾರ್ವಜನಿಕರಿಂದ ಕೇಳಿಬಂದಿದೆ.

ಹದಡಿ ರಸ್ತೆಯು ವಿಶಾಲವಾಗಿದ್ದು ಡಬಲ್ ರೋಡ್ ಆಗಿದೆ. ಆದರೆ, ಬೈಪಾಸ್ ಸಮೀಪಿಸುತ್ತಿದ್ದಂತೆಯೆ ಅಲ್ಲಿ ರಸ್ತೆ ಕಿರಿದಾಗಿದೆ. ಅದರಲ್ಲೇ ಎರಡೂ ಬದಿಯಲ್ಲಿ ಫುಟ್‌ಪಾತ್ ಮತ್ತು ಚರಂಡಿ ನಿರ್ಮಾಣ ಕಾರ್ಯ ನಡೆಯುತ್ತಿದೆ.

ಪ್ರತಿ ನಿತ್ಯ ಈ ರಸ್ತೆಯಲ್ಲಿ ಸಾವಿರಾರು ವಾಹನಗಳು ಸಂಚರಿಸುತ್ತವೆ. ಬೈಪಾಸ್‌ನ ಮತ್ತೊಂದು ಬದಿಯಲ್ಲೂ ಬಡಾವಣೆಗಳಾಗಿದ್ದು ಜನಸಂಚಾರ ಹೆಚ್ಚಿದೆ. ರಸ್ತೆ ಇಕ್ಕಟ್ಟಾಗಿದ್ದು ಅಪಘಾತಗಳಿಗೂ ಆಹ್ವಾನ ನೀಡುವಂತಿದೆ. ಈಗಿರುವ ರಸ್ತೆಯನ್ನು ವಿಸ್ತರಿಸುವ ಅಗತ್ಯವಿದೆ. ಎಡ ಭಾಗದಲ್ಲಿರುವ ದಿಬ್ಬವನ್ನು ತೆಗೆದು ಅಗಲೀಕರಣ ಮಾಡಿದರೆ ಸಂಚಾರ ಸುಗಮವಾಗುತ್ತದೆ.

ಸದ್ಯದಲ್ಲೇ ರಾಷ್ಟ್ರೀಯ ಹೆದ್ದಾರಿ 6 ಪಥಗಳಾಗಿ ವಿಸ್ತರಣೆಯಾಗಲಿದೆ. ಆಗ ಅಲ್ಲಿರುವ ಸೇತುವೆಯನ್ನೂ ಅಗಲ ಮಾಡಲೇಬೇಕಾಗುತ್ತದೆ. ಅದಕ್ಕೆ ಅನುಗುಣವಾಗಿ ಇರುವಂತೆ ಈ ರಸ್ತೆಯನ್ನು ವಿಸ್ತರಿಸಬೇಕು ಎಂಬ ಆಗ್ರಹ ಕೇಳಿಬಂದಿದೆ.

ಡಿಸಿಎಂ ಟೌನ್‌ಷಿಪ್ ಬಳಿಯ ಅಂಡರ್‌ಬ್ರಿಡ್ಜ್‌ನ ಅವ್ಯವಸ್ಥೆಯಿಂದ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಈ ರಸ್ತೆಯೂ ಅದೇ ರೀತಿಯಾಗುವುದು ಬೇಡ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಬಿಜೆಪಿ ಮುಖಂಡ ಮಹಾಬಲೇಶ್ವರ ಗೌಡ ಮಾತನಾಡಿ, ಯಾವುದೇ ಯೋಜನೆಯಿರಲಿ ಭವಿಷ್ಯದ ದೃಷ್ಟಿ ಇಟ್ಟುಕೊಂಡು ರೂಪಿಸಬೇಕು. ಮತ್ತೆ ಮತ್ತೆ ಸಾರ್ವಜನಿಕರ ಹಣ ಪೋಲಾಗದಂತೆ ನೋಡಿಕೊಳ್ಳಬೇಕು. ಮುಂದಿನ 10 ವರ್ಷಗಳ ಕಲ್ಪನೆ ಇಟ್ಟುಕೊಂಡು ಈ ರಸ್ತೆಯನ್ನು ವಿಸ್ತರಿಸಲಿ ಎಂದು ಒತ್ತಾಯಿಸಿದರು.

Stay connected

278,748FansLike
588FollowersFollow
626,000SubscribersSubscribe

ವಿಡಿಯೋ ನ್ಯೂಸ್

VIDEO| ಬರೋಬ್ಬರಿ 20 ಕೆ.ಜಿ. ತೂಕದ ಹೆಬ್ಬಾವು ಸೆರೆಹಿಡಿದ ಮಹಿಳೆ:...

ತಿರುವನಂತಪುರ: ಮಹಿಳೆಯೊಬ್ಬರು ಸುಮಾರು 20 ಕೆ.ಜಿ. ತೂಗುವ ಬೃಹದಾಕಾರದ ಹೆಬ್ಬಾವನ್ನು ಸೆರೆಹಿಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಮೆಚ್ಚುಗೆ ಮಹಾಪೂರ ಹರಿದುಬಂದಿದೆ. ವಿಡಿಯೋದಲ್ಲಿರುವ ಮಹಿಳೆಯನ್ನು ಕೊಚ್ಚಿ ಮೂಲದ ವನ್ಯಜೀವಿ ಸಂರಕ್ಷಕಿ...

ಅತ್ಯಾಚಾರ ಪ್ರಕರಣ ಕುರಿತು ರಾಹುಲ್​ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ಗದ್ದಲ:...

ನವದೆಹಲಿ: ಅತ್ಯಾಚಾರ ಪ್ರಕರಣ ಕುರಿತು ಗುರುವಾರ ಜಾರ್ಖಂಡ್​ ಸಮಾವೇಶದಲ್ಲಿ ಕಾಂಗ್ರೆಸ್​ ಮಾಜಿ ಅಧ್ಯಕ್ಷ ಹಾಗೂ ವಯನಾಡಿನ ಹಾಲಿ ಸಂಸದ ರಾಹುಲ್​ ಗಾಂಧಿ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ....

VIDEO: 8 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಲು 40 ಅಡಿ...

ತ್ರಿಶೂರ್​: ಇಲ್ಲೋರ್ವ ಯುವಕ ಬಾವಿಯಲ್ಲಿ ಬಿದ್ದಿದ್ದ ಹೆಬ್ಬಾವನ್ನು ರಕ್ಷಿಸಲು ಹಗ್ಗದ ಮೂಲಕ ಕೆಳಗೆ ಇಳಿದು ಬಳಿಕ ಅಪಾಯಕ್ಕೆ ಸಿಲುಕಿದ ವಿಡಿಯೋವೊಂದು ವೈರಲ್​ ಆಗಿದೆ. ಈ ಘಟನೆ ನಡೆದಿದ್ದು ಕೇರಳದ ತ್ರಿಶೂಲ್​ನಲ್ಲಿ ಎನ್ನಲಾಗಿದೆ. ವಿಡಿಯೋದಲ್ಲಿ ಇರುವ...

VIDEO| ಲಕ್ಷ್ಯದ ಜೊತೆಯಲಿ ಅನಿರುದ್ಧ್; ಡೈಲಾಗ್​ ಟೀಸರ್​ ಬಿಡುಗಡೆ

ಬೆಂಗಳೂರು: ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆಮನ ಗೆದ್ದಿರುವ ನಟ ಅನಿರುದ್ಧ್ ಈಗ ‘ಲಕ್ಷ್ಯ’ಗೆ ಜತೆಯಾಗಿದ್ದಾರೆ. ಅಂದರೆ ‘ಲಕ್ಷ್ಯ’ ಸಿನಿಮಾದ ಡೈಲಾಗ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅವರು ಚಿತ್ರತಂಡದ ಜತೆ...

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....