ದಾವಣಗೆರೆ : ದಿ. ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಅವರ ನೆನಪಿಗೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನ. 27 ರಿಂದ ಡಿ. 1 ರವರೆಗೆ ರಾಷ್ಟ್ರಮಟ್ಟದ ಹೊನಲು ಬೆಳಕಿನ ಲೀಗ್ ಕಂ ನಾಕೌಟ್ ಟೆನಿಸ್‌ಬಾಲ್ ಕ್ರಿಕೆಟ್ ಟೂರ್ನಿ ಹಮ್ಮಿಕೊಳ್ಳಲಾಗಿದೆ. ದಾವಣಗೆರೆ ಇಲೆವೆನ್ಸ್ ಕ್ರಿಕೆಟ್ ಕ್ಲಬ್ ಹಾಗೂ ಜಿಲ್ಲಾ ಕ್ರೀಡಾಪಟುಗಳ ಸಾಂಸ್ಕೃತಿಕ ಸಂಘದ ಸಹಯೋಗದಲ್ಲಿ 17 ನೇ ವರ್ಷದ ಪಂದ್ಯಾವಳಿ ಏರ್ಪಡಿಸಲಾಗಿದೆ ಎಂದು ಸಂಘದ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಟೂರ್ನಿಯಲ್ಲಿ ಶ್ರೀಲಂಕಾ, ಗುಜರಾತ್, ತಮಿಳುನಾಡು, ಮಹಾರಾಷ್ಟ್ರ ಹಾಗೂ ರಾಜ್ಯದ ಬೆಂಗಳೂರು, ಮೈಸೂರು, ಮಂಗಳೂರು, ಉಡುಪಿ, ತುಮಕೂರು, ಶಿವಮೊಗ್ಗ, ಹುಬ್ಬಳ್ಳಿ ಸೇರಿ ಒಟ್ಟು 50 ತಂಡಗಳು ಭಾಗವಹಿಸಲಿವೆ. ಪ್ರಥಮ ಬಹುಮಾನ 5,05,555 ರೂ. ಹಾಗೂ ಶಾಮನೂರು ಡೈಮಂಡ್ ಕಪ್ , ದ್ವಿತೀಯ 3,05,555 ರೂ. ಹಾಗೂ ಶಿವಗಂಗಾ ಕಪ್, ತೃತೀಯ 1,55,555 ರೂ. ಹಾಗೂ ಆಕರ್ಷಕ ಟ್ರೋಫಿ ನೀಡಲಾಗುವುದು. ಉತ್ತಮ ಆಲ್‌ರೌಂಡರ್‌ಗೆ ಹೀರೋ ಹೊಂಡಾ ಬೈಕ್ ಕೊಡಲಾಗುವುದು ಎಂದು ಹೇಳಿದರು. ಭಾಗವಹಿಸುವ 750 ಆಟಗಾರರಿಗೆ ಟೀ ಶರ್ಟ್ ನೀಡಲಿದ್ದು, ಊಟ ಮತ್ತು ವಸತಿ ಸೌಲಭ್ಯ ಕಲ್ಪಿಸಲಾಗಿದೆ. ಕ್ರೀಡಾಭಿಮಾನಿಗಳು ಪಂದ್ಯ ವೀಕ್ಷಿಸಲು ಗ್ಯಾಲರಿಯ ವ್ಯವಸ್ಥೆ ಮಾಡಲಾಗುವುದು. ಟೂರ್ನಿಯಲ್ಲಿ ಮೂರನೇ ತೀರ್ಪುಗಾರರು ಇರಲಿದ್ದು, ಎಲ್ಲ ಪಂದ್ಯಗಳು ಯೂಟ್ಯೂಬ್‌ನಲ್ಲಿ ನೇರ ಪ್ರಸಾರವಾಗಲಿವೆ. ಟೂರ್ನಿಗೆ ಅಂದಾಜು 30 ರಿಂದ 35 ಲಕ್ಷ ರೂ. ವೆಚ್ಚ ಆಗಲಿದೆ ಎಂದರು. ಟೂರ್ನಿಯಲ್ಲಿ ವಿಶೇಷವಾಗಿ ಪೊಲೀಸ್ ತಂಡ, ಪತ್ರಕರ್ತರ ತಂಡ, ವರ್ತಕರ ತಂಡ, ಜಿಲ್ಲಾಧಿಕಾರಿಗಳ ತಂಡ, ಮಹಾನಗರ ಪಾಲಿಕೆ ಸದಸ್ಯರ ತಂಡ, ವಕೀಲರ ತಂಡ ಸೇರಿ ಒಟ್ಟು 8 ತಂಡಗಳ ಅಫಿಷಿಯಲ್ ಕಪ್ ಪಂದ್ಯಾವಳಿ ನಡೆಸಲಾಗುವುದು ಎಂದು ತಿಳಿಸಿದರು.
ಶಾಮನೂರು ಡೈಮಂಡ್, ಶಿವಗಂಗಾ ಕಪ್
ಋತುಸ್ರಾವದ ಸಮಯದಲ್ಲಿ ಮೊಸರು ಸೇವಸಬಹುದೇ.. ಬೇಡವೇ; ಗೊಂದಲಕ್ಕೆ ಇಲ್ಲಿದೆ ಪರಿಹಾರ | Health Tips
ಮೊಸರು ಅಥವಾ ಉಪ್ಪಿನಕಾಯಿ ತಿನ್ನುವುದರಿಂದ ಋತುಸ್ರಾವದ ಸಮಯದಲ್ಲಿ ಸಮಸ್ಯೆಯಾಗುತ್ತದೆ ಎಂಬ ನಂಬಿಕೆಯಿದೆ. ಆದರೆ ಯಾವುದೇ ಆಹಾರವು…
ಉಸಿರಾಟದ ವ್ಯಾಯಾಮ ಗೊರಕೆ ಸಮಸ್ಯೆಗೆ ಪರಿಹಾರ; ಇದು ಸುಳ್ಳೋ-ಸತ್ಯವೋ.. ವೈದ್ಯರು ಹೇಳೋದೇನು? | Health Tips
ನಿದ್ರಿಸುವಾಗ ಗೊರಕೆ ಹೊಡೆಯುವ ವ್ಯಕ್ತಿಗೆ ಮಾತ್ರವಲ್ಲದೆ ಸುತ್ತಮುತ್ತಲಿನವರಿಗೂ ತೊಂದರೆಯ ಅನುಭವವಾಗುತ್ತದೆ. ಸಾಮಾನ್ಯವಾಗಿ ಇದನ್ನು ಲಘುವಾಗಿ ತೆಗೆದುಕೊಳ್ಳಲಾಗುತ್ತದೆ.…
Vastu Tips : ರಾತ್ರಿ ಮಲಗುವ ಮುನ್ನ ಈ ತಪ್ಪುಗಳನ್ನು ಮಾಡಬೇಡಿ!ಸಾಲದ ಸುಳಿಗೆ ಸಿಲುಕುತ್ತೀರಿ..!
Vastu Tips: ದೃಷ್ಟ ಚೆನ್ನಾಗಿದ್ದರೆ ಕೆಲವರು ರಾತ್ರೋರಾತ್ರಿ ಲಕ್ಷಾಧಿಪತಿಗಳಾಗುತ್ತಾರೆ. ಕೆಲವರು ಐಷಾರಾಮಿ ಜೀವನ ನಡೆಸಲು ಕಷ್ಟಪಡುತ್ತಾರೆ. ಅವರು…