ದಾವಣಗೆರೆ : ಕೇರಂ ಆಟವು ಮಿದುಳಿನ ಶಕ್ತಿ ಹೆಚ್ಚಿಸಿ, ಒತ್ತಡಗಳನ್ನು ನಿವಾರಿಸಿ ಮನುಷ್ಯನ ಆಯಸ್ಸನ್ನು ವೃದ್ಧಿ ಮಾಡುತ್ತದೆ ಎಂದು ಜಿಲ್ಲಾ ಕ್ರೀಡಾಪಟುಗಳ ಸಂಘದ ಅಧ್ಯಕ್ಷ ದಿನೇಶ್ ಶೆಟ್ಟಿ ಹೇಳಿದರು. ಹಿರಿಯ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಅವರ 95ನೇ ಜನ್ಮದಿನದ ಅಂಗವಾಗಿ ನಗರದ ಗುರುಭವನದಲ್ಲಿ ಶುಕ್ರವಾರ ಏರ್ಪಡಿಸಿದ್ದ ಜಿಲ್ಲಾಮಟ್ಟದ ಕೇರಂ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು. ಈಗಿನ ಸಮಯದಲ್ಲಿ ಮನುಷ್ಯನ ಜೀವನದಲ್ಲಿ ವಿವಿಧ ರೀತಿಯ ಒತ್ತಡಗಳಿವೆ. ವಿರಾಮ ರಹಿತ ಜೀವನದಲ್ಲಿ ಕ್ರೀಡೆಗಳಲ್ಲಿ ಭಾಗವಹಿಸುವುದು ತುಂಬಾ ವಿರಳವಾಗಿದೆ. ಕ್ರೀಡೆಗಳಲ್ಲಿ ಪಾಲ್ಗೊಂಡರೆ ಮಾನಸಿಕ ಒತ್ತಡ ನಿವಾರಿಸಿ ಉತ್ತಮ ಜೀವನ ನಡೆಸಬಹುದು ಎಂದು ಹೇಳಿದರು. ಈ ಪಂದ್ಯಾವಳಿ ಮೂರು ದಿನಗಳ ಕಾಲ ನಡೆಯಲಿದ್ದು ಇನ್ನೂರಕ್ಕೂ ಹೆಚ್ಚು ಸ್ಪರ್ಧಾಳುಗಳು ಭಾಗವಹಿಸಿದ್ದಾರೆ ಎಂದು ಕಾರ್ಯದರ್ಶಿ ಗಣೇಶ್ ತಿಳಿಸಿದರು. ಮಹಾನಗರ ಪಾಲಿಕೆಯ ಮಾಜಿ ಸದಸ್ಯರಾದ ಎ. ನಾಗರಾಜ್, ಡಿ.ಎನ್. ಜಗದೀಶ್, ಕೆ.ಎಸ್. ವಿಜಯ್ ಕುಮಾರ್, ಸಿರಾಜುದ್ದೀನ್, ಅಮರೇಶ್, ಮಾರುತಿ, ಹನುಮಂತ, ಸತೀಶ್, ಯುವರಾಜ್, ಶಿವಕುಮಾರ್ ಇದ್ದರು
ಮಿದುಳಿನ ಶಕ್ತಿ, ಆಯಸ್ಸು ವೃದ್ಧಿಗೆ ಕೇರಂ ಸಹಕಾರಿ

ಒಂದು ತಿಂಗಳು ಸಕ್ಕರೆ ಮತ್ತು ಉಪ್ಪು ಬಿಟ್ಟರೆ ದೇಹದಲ್ಲಾಗುವ ಬದಲಾವಣೆ ಏನು ಗೊತ್ತಾ? | Sugar
Sugar: ಸಾಮಾನ್ಯವಾಗಿ ಮನುಷ್ಯನ ದೇಹ ಅನಾರೋಗ್ಯಕ್ಕೊಳಗಾದಾಗ ಆಹಾರದಲ್ಲಿ ಸಕ್ಕೆರೆ ಮತ್ತು ಉಪ್ಪುನಂತಹ ಅಂಶಗಳನ್ನು ತ್ಯಜಿಸಬೇಕಾಗುತ್ತದೆ. ಇದರಿಂದ…
ಹೃದ್ರೋಗ ದೂರ, ಮೆದುಳಿನ ಆರೋಗ್ಯಕ್ಕೆ ಬಲ: ಟ್ಯೂನ ಮೀನಿನಲ್ಲಿದೆ ಹಲವು ಆರೋಗ್ಯ ಪ್ರಯೋಜನಗಳು! Tuna Fish Benefits
Tuna Fish Benefits: ಮೀನು ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ಸಾಮಾನ್ಯವಾಗಿ ಹೇಳಲಾಗುತ್ತದೆ. ಮೀನಿನಲ್ಲಿ ಹಲವು…