More

  ಎಸ್‌ಎಸ್‌ಎಲ್ಸಿ ಪರೀಕ್ಷೆ ಸುಗಮ

  ದಾವಣಗೆರೆ: ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಸೋಮವಾರ ಆರಂಭವಾಗಿದ್ದು ಮೊದಲ ದಿನ ನಡೆದ ಪ್ರಥಮ ಭಾಷೆ ಪರೀಕ್ಷೆಗೆ 20856 ವಿದ್ಯಾರ್ಥಿಗಳು ಹಾಜರಾಗಿದ್ದರು.
   ಜಿಲ್ಲೆಯ 82 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದು 10277 ಬಾಲಕರು, 10729 ಬಾಲಕಿಯರು ಸೇರಿ ಒಟ್ಟು 21006 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿದ್ದರು. ಅದರಲ್ಲಿ 10,188 ಬಾಲಕರು, 10668 ಬಾಲಕಿಯರು ಹಾಜರಾಗಿದ್ದರು. 150 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು.
   ಬೆಳಗ್ಗೆ ಪರೀಕ್ಷಾ ಕೇಂದ್ರಗಳಿಗೆ ಬಂದ ವಿದ್ಯಾರ್ಥಿಗಳು ಸೂಚನಾ ಫಲಕದಲ್ಲಿ ತಮ್ಮ ನೋಂದಣಿ ಸಂಖ್ಯೆ ಮತ್ತು ಕೊಠಡಿ ಸಂಖ್ಯೆಯನ್ನು ನೋಡಿಕೊಂಡು ಒಳಗೆ ಪ್ರವೇಶಿಸಿದರು. ಅಲ್ಲಿನ ಸಿಬ್ಬಂದಿ ಅವರಿಗೆ ನೆರವಾದರು.
   ಪರೀಕ್ಷೆ ಬರೆಯಲು ಬರುವ ವಿದ್ಯಾರ್ಥಿಗಳಿಗಾಗಿ ಕೇಂದ್ರಗಳಲ್ಲಿ ಕುಡಿಯುವ ನೀರು, ಶೌಚಗೃಹದ ವ್ಯವಸ್ಥೆ ಮಾಡಲಾಗಿತ್ತು. ಮಧ್ಯಾಹ್ನ ಬಿಸಿಯೂಟ ನೀಡಲಾಯಿತು. 79 ಕೇಂದ್ರಗಳಲ್ಲಿ ವೆಬ್‌ಕಾಸ್ಟ್ ಮಾಡಲಾಯಿತು. ಆರೋಗ್ಯ ಇಲಾಖೆ ಸಿಬ್ಬಂದಿ, ಪೊಲೀಸರು ಕಾರ್ಯ ನಿರ್ವಹಿಸಿದರು.
   ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಎಂ.ವಿ. ವೆಂಕಟೇಶ್ ಹಾಗೂ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೆ. ಕೊಟ್ರೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts