ದಾವಣಗೆರೆ : ಫೆ. 13ರಿಂದ 15ರ ವರೆಗೆ ನ್ಯಾಮತಿ ತಾಲೂಕಿನ ಸೂರಗೊಂಡನಕೊಪ್ಪದಲ್ಲಿ ಸಂತ ಸೇವಾಲಾಲ್ ಅವರ 286ನೇ ಜನ್ಮ ದಿನಾಚರಣೆ ಪ್ರಯುಕ್ತ ಆಯೋಜಿಸಿರುವ ಜಾತ್ರಾ ಮಹೋತ್ಸವಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ವಿಧಾನಸಭೆಯ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಸೂಚನೆ ನೀಡಿದರು. ಜಿಲ್ಲಾಡಳಿತ ಭವನದಲ್ಲಿ ಸೋಮವಾರ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿ, ಊಟ, ವಸತಿ, ನೀರು ಹಾಗೂ ಸಾರಿಗೆ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಬೇಕು. ಕ್ಷೇತ್ರದಲ್ಲಿ ಶಾಶ್ವತ ಮೂಲಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಆಲೋಚಿಸಬೇಕು. ಜಾತ್ರೆಯ ಸಂಪೂರ್ಣ ಜವಾಬ್ದಾರಿಯನ್ನು ಜಿಲ್ಲಾಡಳಿತವೇ ವಹಿಸಿಕೊಂಡರೆ ಅನುಕೂಲ ಎಂದು ಹೇಳಿದರು. ಮೂರು ದಿನ ಭಕ್ತರಿಗೆ ಪ್ರಸಾದದ ವ್ಯವಸ್ಥೆ ಮಾಡಬೇಕು. ಊಟಕ್ಕೆ ಸಂಬಂಧಿಸಿದ ತೀರ್ಮಾನವನ್ನು ಜಿಲ್ಲಾಧಿಕಾರಿ ಕೈಗೊಳ್ಳಲಿ. ನೀರಿಗೆ 50 ಟ್ಯಾಂಕರ್‌ಗಳ ವ್ಯವಸ್ಥೆ ಮಾಡಿಕೊಂಡರೆ ಒಳ್ಳೆಯದು. ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ ಸಲಹೆ ಪಡೆದು ಸ್ಥಳಗಳನ್ನು ಗುರುತಿಸಿ ನೀರಿನ ಸೌಲಭ್ಯ ಕಲ್ಪಿಸಬೇಕು. ಫೆ. 14ರಂದು ಹೆಚ್ಚು ಭಕ್ತರು ಸೇರುವ ನಿರೀಕ್ಷೆ ಇದ್ದು, ಅಧಿಕಾರಿಗಳು ಸಮರೋಪಾದಿಯಲ್ಲಿ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದರು. ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಮಾತನಾಡಿ, ರಾಜ್ಯಮಟ್ಟದ ಯುವಜನ ಮೇಳವನ್ನು ಯಶಸ್ವಿಯಾಗಿ ನಡೆಸಲಾಗಿದೆ. ಜಾತ್ರಾ ಮಹೋತ್ಸವಕ್ಕೂ ಇದೇ ರೀತಿಯ ಸಿದ್ಧತೆ ಕೈಗೊಳ್ಳಲು ಸನ್ನದ್ಧರಾಗಿದ್ದೇವೆ. 50ಕ್ಕೂ ಹೆಚ್ಚು ಸ್ವಯಂ ಸೇವಕರ ಅಗತ್ಯವಿದೆ. ಕೆಲಸ ಮಾಡುವ ಉತ್ಸಾಹ ಹಾಗೂ ಬದ್ಧತೆ ಇರುವ ಸಮುದಾಯದ ಸ್ವಯಂ ಸೇವಕರನ್ನು ನೀಡಿ ಎಂದು ಮನವಿ ಮಾಡಿದರು. ಅಡುಗೆ ತಯಾರಿಸುವ ಸ್ಥಳ ಸೇರಿ ಹಲವೆಡೆ ಸಿ.ಸಿ. ಕ್ಯಾಮರಾ ಕಣ್ಗಾವಲು ವ್ಯವಸ್ಥೆ ಮಾಡಲಾಗುವುದು. ಶ್ರೀಕ್ಷೇತ್ರದಲ್ಲಿ ಮತ್ತೊಮ್ಮೆ ಸಭೆ ನಡೆಸಿ ಅಂತಿಮ ರೂಪುರೇಷ ಸಿದ್ಧಪಡಿಸಲಾಗುವುದು ಎಂದು ಸಭೆಗೆ ಮಾಹಿತಿ ನೀಡಿದರು. ಶಾಸಕ ಬಸವರಾಜು ವಿ.ಶಿವಗಂಗಾ, ಮೇಯರ್ ಕೆ. ಚಮನ್ ಸಾಬ್, ಜಯದೇವ ನಾಯ್ಕ, ಹೀರಾಲಾಲ್, ಶಿವಮೂರ್ತಿ ನಾಯ್ಕ, ಜಿ.ಪಂ. ಸಿಇಒ ಸುರೇಶ್ ಬಿ.ಇಟ್ನಾಳ್, ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್ ಇದ್ದರು. … (ಕೋಟ್) ಜಾತ್ರಾ ಮಹೋತ್ಸವದ ಅಂಗವಾಗಿ ಸೂರಗೊಂಡನ ಕೊಪ್ಪದಲ್ಲಿ ಪೊಲೀಸ್ ಹೊರಠಾಣೆ ಸ್ಥಾಪಿಸಿ, ಸಿ.ಸಿ. ಕ್ಯಾಮರಾ ಕಣ್ಗಾವಲು ವ್ಯವಸ್ಥೆ ರೂಪಿಸಲಾಗುವುದು. 200 ಮೀಟರ್ ದೂರದಲ್ಲಿ ವಾಹನ ಪಾರ್ಕಿಂಗ್‌ಗೆ ಸ್ಥಳ ಗುರುತಿಸಲಾಗಿದೆ. ವಿದ್ಯುತ್ ಚಾಲಿತ ವಾಹನದ ವ್ಯವಸ್ಥೆ ಕಲ್ಪಿಸಿದರೆ ಜನರಿಗೆ ಅನುಕೂಲವಾಗಲಿದೆ. ರಾಜ್ಯ ಮೀಸಲು ಪೊಲೀಸ್ ಪಡೆ ಸ್ಥಳದಲ್ಲಿ ಮೊಕ್ಕಾಂ ಹೂಡಲಿದೆ. ಪೊಲೀಸ್ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ವಸತಿ ವ್ಯವಸ್ಥೆ ಕಲ್ಪಿಸಬೇಕು. ಊಟಕ್ಕೆ ಹೆಚ್ಚುವರಿ ಕೌಂಟರ್ ಇದ್ದರೆ ಜನದಟ್ಟಣೆ ನಿಯಂತ್ರಣ ಸಾಧ್ಯ. ತಾಜ್ಯ ವಿಲೇವಾರಿಗೂ ಒತ್ತು ನೀಡಬೇಕಿದೆ. ಉಮಾ ಪ್ರಶಾಂತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
ಫೆ. 13 ರಿಂದ ಸಂತ ಸೇವಾಲಾಲ್ ಜಯಂತ್ಯುತ್ಸವ

ಹೋಟೆಲ್ ಸ್ಟೈಲ್ ಪನೀರ್ ಅಮೃತಸರಿ ಮಾಡುವ ವಿಧಾನ ಇಲ್ಲಿದೆ; ನೀವೊಮ್ಮೆ ಟ್ರೈ ಮಾಡಿ | Recipe
ಹಲವು ಬಾರಿ ಒಂದೇ ರೀತಿಯ ಆಹಾರ ತಿಂದು ಬೇಸರವಾಗುತ್ತದೆ. ಆಗ ಹೋಟೆಲ್‌ಗೆ ಹೋಗಿ ಊಟ ಮಾಡಲು…
ಚಿನ್ನದ ಮೇಲೆ ಲೋನ್ ತಗೋತ್ತಿದ್ದೀರಾ? ಹಾಗಿದ್ರೆ ಈ ತಪ್ಪುಗಳಿಂದ ಮೊದಲು ದೂರವಿರಿ, ಇಲ್ಲದಿದ್ರೆ ನಷ್ಟ ಖಚಿತ | Gold Loan
Gold Loan: ಮನೆಯಲ್ಲಿದ್ದರೆ ಚಿನ್ನ ಚಿಂತೆಯೂ ಏತಕೇ ಇನ್ನಾ? ಎಂಬ ಮಾತನ್ನು ಇಂದಿಗೂ ನಮ್ಮ ಜನ…
ತಣ್ಣೀರಿನಲ್ಲಿ ಈಜುವುದರಿಂದಾಗುವ ಪ್ರಯೋಜನಗಳನ್ನು ನೀವು ತಿಳಿದುಕೊಳ್ಳಲೇಬೇಕು; ನಿಮಗಾಗಿಯೇ ಈ ಮಾಹಿತಿ | Health Tips
ತಣ್ಣೀರಿನಲ್ಲಿ ಈಜುವುದು ಕೇವಲ ಸಾಹಸ ಕ್ರೀಡೆ ಅಥವಾ ಹವ್ಯಾಸವಲ್ಲ. ಆದರೆ ಇದು ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು…