ದಾವಣಗೆರೆ : ಬಸವ ಜಯಂತಿಯನ್ನು ಯಶಸ್ವಿಗೊಳಿಸಿದ ಕಾರ್ಯಕರ್ತರಿಗೆ ಗೌರವಿಸುವ ಸಮಾರಂಭವನ್ನು ಬುಧವಾರ ಸಂಜೆ 5 ಗಂಟೆಗೆ ನಗರದ ಶಿವಯೋಗಿ ಮಂದಿರದಲ್ಲಿ ಏರ್ಪಡಿಸಲಾಗಿದೆ ಎಂದು ವಿರಕ್ತ ಮಠದ ಡಾ. ಬಸವಪ್ರಭು ಸ್ವಾಮೀಜಿ ತಿಳಿಸಿದ್ದಾರೆ. ನಗರದ ಬಸವ ಭಕ್ತರು ಒಂದಾಗಿ ಮೇ 1 ರಂದು ಶ್ರೀ ಶಿವಯೋಗಿ ಮಂದಿರದಲ್ಲಿ ಬಸವ ಜಯಂತಿಯನ್ನು ಯಶಸ್ವಿಯಾಗಿ ಆಚರಿಸಿದರು. ಅದಕ್ಕೆ ಪೂರ್ವಭಾವಿಯಾಗಿ ಏ. 24 ರಿಂದ 30ರ ವರೆಗೆ ಪ್ರತಿ ದಿನ ಒಂದೊಂದು ಬಡಾವಣೆಯಲ್ಲಿ ಬಸವ ಪ್ರಭಾತ್ ಫೇರಿ, ಬಸವ ಜಯಂತಿ ಕಾರ್ಯಕ್ರಮವು ಅರ್ಥಪೂರ್ಣವಾಗಿ, ಅದ್ದೂರಿಯಾಯಿತು. ಸಮಾರಂಭ ಯಶಸ್ವಿಯಾಗಲು ದುಡಿದ ಪ್ರತಿಯೊಬ್ಬ ಕಾರ್ಯಕರ್ತರಿಗೆ, ಸೇವೆ ಸಲ್ಲಿಸಿದ ದಾಸೋಹಿಗಳು, ದಾನಿಗಳಿಗೆ ಗೌರವ ಸಲ್ಲಿಸಬೇಕು ಎಂಬುದು ನಮ್ಮ ಶ್ರೀಮಠದ ಸದಾಶಯವಾಗಿದೆ ಎಂದು ಸ್ವಾಮೀಜಿ ಹೇಳಿದ್ದಾರೆ.
ಬಸವ ಜಯಂತಿ ಯಶಸ್ವಿ ಆಚರಣೆ ಕಾರ್ಯಕರ್ತರಿಗೆ ಗೌರವ

ಸ್ನಾನದ ನಂತರವೂ ನಿಮ್ಮ ದೇಹವು ಕೆಟ್ಟ ವಾಸನೆಯನ್ನು ಬೀರುತ್ತದೆಯೇ? ಹೀಗೆ ಮಾಡಿ ನೋಡಿ…. life style
life style: ಕೆಲವರಿಗೆ ದೇಹದಿಂದ ವಾಸನೆ ಬರುವುದನ್ನು ನೀವು ಗಮನಿಸಿರಬಹುದು. ಅದು ಚಳಿಯಾಗಿರಬಹುದು, ಮಳೆಯಾಗಿರಬಹುದು, ಸಣ್ಣ…
ವಕ್ರ ದಂತ ಸಮಸ್ಯೆಗೆ ಸೂಕ್ತ ಪರಿಹಾರ ಅಲೈನರ್
ಹಲ್ಲು ಅಡ್ಡಾದಿಡ್ಡಿ ಇದ್ದರೆ ಅಂಥವರು ಮುಜುಗರದಿಂದ ಮನಬಿಚ್ಚಿ ನಗದಿರುವುದೇ ಹೆಚ್ಚು. ಆದರೆ ಈಗ ಅಷ್ಟಕ್ಕೆಲ್ಲ ಚಿಂತೆ…