ದಾವಣಗೆರೆಯಲ್ಲಿ ಪ್ರಶಸ್ತಿ ಪುರಸ್ಕೃತರಿಗೆ ಗೌರವ ಸಮರ್ಪಣೆ

ದಾವಣಗೆರೆ: ಪ್ರಸ್ತುತ ನಿಜವಾದ ಸಾಧಕರನ್ನು ಗುರುತಿಸುವ ಕೆಲಸವಾಗುತ್ತಿಲ್ಲ. ಪ್ರಶಸ್ತಿಗಳಿಗಾಗಿ ಅರ್ಜಿ ಹಾಕಿ ದುಂಬಾಲು ಬೀಳುವ ಪರಿಸ್ಥಿತಿ ಇದೆ ಎಂದು ಆವರಗೊಳ್ಳ ಪುರವರ್ಗ ಹಿರೇಮಠದ ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ ವಿಷಾದಿಸಿದರು.

ನಗರದ ಕುವೆಂಪು ಕನ್ನಡ ಭವನದಲ್ಲಿ ಭಾನುವಾರ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಮತ್ತು ತಾಲೂಕು ಘಟಕಗಳ ಆಶ್ರಯದಲ್ಲಿ ಏರ್ಪಡಿಸಿದ್ದ ಮಹಲಿಂಗ ರಂಗ ಜಿಲ್ಲಾ ಸಾಹಿತ್ಯ ಪ್ರಶಸ್ತಿ ಪುರಸ್ಕೃತರಿಗೆ ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ನೀಡಿದರು.

ಪ್ರಸಕ್ತ ದಿನಗಳಲ್ಲಿ ಪ್ರಶಸ್ತಿ ಪಡೆಯಲು ವಿವಿಧ ಕಸರತ್ತು ನಡೆಸಲಾಗುತ್ತಿದೆ. ಮುಖವಾಡದ ಬದುಕು ನಡೆಸುತ್ತಿರುವವರಿಗೆ ಗೌರವ ಸಿಗುತ್ತಿದೆ. ಲಾಬಿ, ಶಿಾರಸು ಇಲ್ಲದೇ ಪ್ರಶಸ್ತಿ ಇಲ್ಲ ಎಂಬ ಅಭಿಪ್ರಾಯವಿದೆ. ಸಮಾಜಕ್ಕೆ ಕೊಡುಗೆ ನೀಡಿದವರಿಗೆ ಗೌರವಿಸಿದಾಗ ಇವುಗಳಿಗೆ ಸಾರ್ಥಕ ಬರುತ್ತದೆ. ಈ ನಿಟ್ಟಿನಲ್ಲಿ ಕಸಾಪ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.

ಜಗಳೂರು ನಳಂದ ಪದವಿ ಪೂರ್ವ ಕಾಲೇಜು ನಿವೃತ್ತ ಉಪನ್ಯಾಸಕ ಜಿ.ಎಸ್.ಸುಭಾಷ್‌ಚಂದ್ರ ಬೋಸ್ ಮಾತನಾಡಿ, ಮಹಲಿಂಗರಂಗ ಪ್ರಶಸ್ತಿ ಪುರಸ್ಕೃತರಾದ ಯರ‌್ರಿಸ್ವಾಮಿ ಅವರು ಬ್ಯಾಂಕ್ ಅಕಾರಿಯಾಗಿದ್ದರೂ ಸಾಹಿತ್ಯ ಸೇವೆಯಲ್ಲಿ ತೊಡಗಿದ್ದಾರೆ. ಇಂಥವರಿಗೆ ಮಹಲಿಂಗರಂಗ ಪ್ರಶಸ್ತಿ ನೀಡುತ್ತಿರುವುದು ಸಂತಸ ತಂದಿದೆ ಎಂದರು.

ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಪ್ರಕಾಶ ಕುಗ್ವೆ ಹಾಗೂ ಚಿತ್ರಕಲಾ ಕಲಾವಿದರನ್ನು ಗೌರವಿಸಲಾಯಿತು.

Leave a Reply

Your email address will not be published. Required fields are marked *