More

    ಗುಣಮಟ್ಟದ ಸಂಶೋಧನೆಗೆ ಆದ್ಯತೆ ಅಗತ್ಯ

    ದಾವಣಗೆರೆ : ಜಾಗತಿಕ ಮಟ್ಟದಲ್ಲಿ ಸಂಶೋಧನಾ ಕ್ಷೇತ್ರಕ್ಕೆ ಹೆಚ್ಚಿನ ಬೇಡಿಕೆಯಿದ್ದು, ಯುವ ವಿಜ್ಞಾನಿಗಳು ಅವಕಾಶಗಳನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಮಲೇಷ್ಯಾದ ಮಲಯ ವಿಶ್ವವಿದ್ಯಾಲಯದ ಕಂಪ್ಯೂಟರ್ ಸಿಸ್ಟಂ ಆ್ಯಂಡ್ ಟೆಕ್ನಾಲಜಿ ವಿಭಾಗದ ಪ್ರಾಧ್ಯಾಪಕ ಡಾ.ಪಿ.ಶಿವಕುಮಾರ್ ಸಲಹೆ ನೀಡಿದರು.
     ದಾವಣಗೆರೆ ವಿಶ್ವವಿದ್ಯಾಲಯದ ಕಂಪ್ಯೂಟರ್ ವಿಜ್ಞಾನ ಅಧ್ಯಯನ ವಿಭಾಗದಲ್ಲಿ ಸೋಮವಾರ ಏರ್ಪಡಿಸಿದ್ದ ಸಂಶೋಧನಾ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.
     ಸಂಶೋಧನಾ ರಂಗವು ವಿಶಾಲವಾಗಿದೆ. ಅಪರಿಚಿತ ಕ್ಷೇತ್ರದಲ್ಲಿ ಅಧ್ಯಯನ ನಡೆಸುವುದು ಮುಖ್ಯವಾಗಿದೆ ಎಂದು ತಿಳಿಸಿದರು.
     ಸಂಶೋಧನೆಯಲ್ಲಿ ಸಮಸ್ಯೆಯ ಆಳಕ್ಕೆ ಇಳಿದಷ್ಟೂ ಹೊಸ ವಿಚಾರಗಳು ಹೊರ ಬರುತ್ತವೆ. ವಿಜ್ಞಾನ, ತಂತ್ರಜ್ಞಾನ, ಸಮಾಜ ವಿಜ್ಞಾನ ಅಥವಾ ಇನ್ನಾವುದೇ ಕ್ಷೇತ್ರದಲ್ಲಿ ಸಂಶೋಧನೆ ನಡೆಸುವಾಗ ಸಮಸ್ಯೆಗಳು ಸಮಾಜದ ಅಗತ್ಯಗಳನ್ನು ಈಡೇರಿಸುವಂತಿರಬೇಕು ಎಂದರು.
     ಸಂಶೋಧನೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಅದರ ಫಲಿತಾಂಶಗಳು ವಾಸ್ತವವಾಗಿದ್ದು, ನಿಖರವಾದ ವಿಚಾರಗಳನ್ನು ಪ್ರತಿಪಾದಿಸಬೇಕು. ಆ ಮೂಲಕ ಭಾರತವನ್ನು ಸಂಶೋಧನಾ ಕ್ಷೇತ್ರದಲ್ಲಿ ಗುರುತಿಸಿಕೊಳ್ಳುವಂತೆ ಮಾಡುವುದು ಎಲ್ಲರ ಹೊಣೆ ಎಂದು ಹೇಳಿದರು.
     ಸಂವಾದ ಕಾರ್ಯಕ್ರಮದಲ್ಲಿ ಡಾ.ಶಿವಕುಮಾರ್, ಸಂಶೋಧನಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿದರು. ಇದೇ ಸಂದರ್ಭದಲ್ಲಿ ಡಾ.ಶಿವಕುಮಾರ್ ಅವರನ್ನು ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಡಿ.ಕುಂಬಾರ ಸನ್ಮಾನಿಸಿದರು.
     ಕಂಪ್ಯೂಟರ್ ವಿಜ್ಞಾನ ವಿಭಾಗದ ಅಧ್ಯಕ್ಷ ಡಾ. ಚಂದ್ರಕಾಂತ ನಾಯ್ಕಡಿ, ಸಹ ಪ್ರಾಧ್ಯಾಪಕ ಡಾ.ಎಂ.ಬಸವಣ್ಣ, ಸಂಶೋಧನಾರ್ಥಿಗಳಾದ ಟಿ.ಚಂದ್ರಯ್ಯ, ಪಿ.ಪ್ರಜ್ವಲಕುಮಾರ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts