ದಾವಣಗೆರೆ : ವಾಸ್ತವಿಕ ನೆಲೆಯಲ್ಲಿ ನಿಂತು ವೈಜ್ಞಾನಿಕ ಆಲೋಚನೆಗಳೊಂದಿಗೆ ಜನಪರ ಕಾಳಜಿಯ ಸಂಶೋಧನೆಗಳು ಇಂದಿನ ಅಗತ್ಯವಾಗಿವೆ ಎಂದು ಹರಿಹರದ ಕಿರ್ಲೋಸ್ಕರ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನ ನಿರ್ದೇಶಕ ಪ್ರೊ.ಬಿಪ್ಲಬ್ ಕುಮಾರ್ ಬಿಸ್ವಾಲ್ ಅಭಿಪ್ರಾಯಪಟ್ಟರು.
ಐಸಿಎಸ್‌ಎಸ್‌ಆರ್ ದಕ್ಷಿಣ ಪ್ರಾದೇಶಿಕ ಕೇಂದ್ರ ತೆಲಂಗಾಣ, ದಾವಣಗೆರೆ ವಿಶ್ವವಿದ್ಯಾಲಯ ವಾಣಿಜ್ಯಶಾಸ್ತ್ರ ಅಧ್ಯಯನ ವಿಭಾಗ ಮತ್ತು ಕಿರ್ಲೋಸ್ಕರ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಜಂಟಿ ಆಶ್ರಯದಲ್ಲಿ ಬುಧವಾರ ಆಯೋಜಿಸಿದ್ದ, ಸಮಾಜ ವಿಜ್ಞಾನದಲ್ಲಿ ಸಂಶೋಧನಾ ವಿಧಾನ ಕುರಿತು ಏಳು ದಿನಗಳ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಪದವಿಗಾಗಿ ಸಂಶೋಧನೆ ಮಾಡದೆ ಸಮಾಜದ ಹಿತಕ್ಕಾಗಿ, ದೇಶದ ಉನ್ನತ ಭವಿಷ್ಯಕ್ಕಾಗಿ ಪ್ರಾಮಾಣಿಕವಾಗಿ ಆ ಕಾರ್ಯದಲ್ಲಿ ತೊಡಗಬೇಕು. ಮೌಲ್ಯಯುತ ಸಂಶೋಧನೆಗಳಿಗೆ ಮಾತ್ರ ಮನ್ನಣೆಯಿದೆ. ಈ ವಿಚಾರದಲ್ಲಿ ಯಾವುದೆ ರಾಜಿ ಸೂತ್ರ ಅನುಸರಿಸಬಾರದು ಎಂದರು.
ಸಮಾಜ ವಿಜ್ಞಾನದ ಸಂಶೋಧನೆಗೆ ಜಾಗತಿಕ ಮಟ್ಟದಲ್ಲಿ ಭಾರಿ ಮನ್ನಣೆ ಇದೆ. ಸಮಾಜದ ಪ್ರತಿಯೊಂದು ಅಭಿವೃದ್ಧಿಗೂ ಸಂಶೋಧನೆ ಆಧಾರಿತ ಅಂಕಿ ಅಂಶಗಳ ದಾಖಲೆಗಳೇ ಮುಖ್ಯವಾಗಿವೆ. ವೈಜ್ಞಾನಿಕ ರೀತಿಯಲ್ಲಿ ಸಂಶೋಧನೆ ಕೈಗೊಂಡು ದೇಶದ ಬೆಳವಣಿಗೆಗೆ ಪೂರಕವಾದ ಮಾರ್ಗದರ್ಶನ ನೀಡಬೇಕು ಎಂದು ಹೇಳಿದರು.
ಕುಲಪತಿ ಪ್ರೊ.ಬಿ.ಡಿ. ಕುಂಬಾರ ಮಾತನಾಡಿ, ಸಂಶೋಧನಾ ವಿದ್ಯಾರ್ಥಿಗಳಲ್ಲಿ ಕಲಿಯುವ ಆಸಕ್ತಿ ಮತ್ತು ಹೊಸತನ್ನು ಕಂಡುಕೊಳ್ಳುವ ಕುತೂಹಲ ಅತ್ಯವಶ್ಯ. ವಿಜ್ಞಾನ ಮತ್ತು ತಂತ್ರಜ್ಞಾನಗಳಷ್ಟೇ ಸಮಾಜ ವಿಜ್ಞಾನದ ಸಂಶೋಧನೆಗಳಿಗೂ ಮನ್ನಣೆ ಇದೆ. ಆದರೆ ಅದಕ್ಕೆ ತಕ್ಕಂತೆ ಗುಣಮಟ್ಟವೂ ಮುಖ್ಯವಾಗಿದೆ ಎಂದು ತಿಳಿಸಿದರು.
ವಿದ್ಯಾರ್ಥಿಗಳು ನಿಷ್ಠೆ, ಶ್ರದ್ಧೆ ಮತ್ತು ಪ್ರಾಮಾಣಿಕವಾಗಿ ಸಂಶೋಧನಾ ಕಾರ್ಯವನ್ನು ನಿರ್ವಹಿಸಬೇಕು. ವೈಯಕ್ತಿಕ ಹಿತಾಸಕ್ತಿಗಳನ್ನು ಬದಿಗಿಟ್ಟು, ಮೌಲ್ಯಯುತ ಶೋಧನೆಗಳಿಗೆ ಗಮನ ನೀಡಬೇಕು. ಯಾವುದೇ ಮೂಲದಿಂದ ಮಾಹಿತಿ ಪಡೆದರೂ ಅದರ ಮೂಲ ಸಂಶೋಧಕರ ಹೆಸರನ್ನು ಉಲ್ಲೇಖಿಸುವ ಸೌಜನ್ಯವನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ವಾಣಿಜ್ಯ ವಿಭಾಗದ ಡೀನ್ ಪ್ರೊ.ಪಿ. ಲಕ್ಷ್ಮಣ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಣ ವಿಭಾಗದ ಡೀನ್ ಡಾ.ವೆಂಕಟೇಶ್, ತುಮಕೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರೊ.ಜಿ.ಸುದರ್ಶನ ರೆಡ್ಡಿ ಇದ್ದರು. ಕಾರ್ಯಾಗಾರದ ನಿರ್ದೇಶಕ ಡಾ.ಸತ್ಯನಾರಾಯಣ ಸ್ವಾಗತಿಸಿದರು. ಡಾ.ಎ.ಅಸೀಫ್‌ಉಲ್ಲಾ ಕಾರ್ಯಕ್ರಮ ನಿರೂಪಿಸಿದರು.
ಜನಪರ ಕಾಳಜಿಯ ಸಂಶೋಧನೆ ಅಗತ್ಯ
Skin care: ಕಣ್ಣುಗಳ ಕೆಳಗಿರುವ ಚರ್ಮ ಸುಕ್ಕುಗಟ್ಟಿದೆಯೇ? ಹೀಗೆ ಮಾಡಿ..
ಕಣ್ಣುಗಳು(Skin care) ಸೂಕ್ಷ್ಮ ಅಂಗಗಳಾಗಿದ್ದು, ಅವುಗಳ ಕೆಳಗಿರುವ ಚರ್ಮವು ಸಹ ಸೂಕ್ಷ್ಮವಾಗಿರುತ್ತದೆ. ಬಿಸಿಲು, ಪೌಷ್ಠಿಕ ಆಹಾರದ…
Health Tips : ಮೆಟ್ಟಿಲು ಹತ್ತುವಾಗ ಸುಸ್ತಾಗುತ್ತದಾ..! ಈ ಸಲಹೆಗಳನ್ನು ಅನುಸರಿಸಿ
ಬೆಂಗಳೂರು: ಮೆಟ್ಟಿಲು ಹತ್ತುವಾಗ ಉಸಿರಾಟದ ತೊಂದರೆ ಸಾಮಾನ್ಯ. ಈ ಸಮಸ್ಯೆಯು ವಯಸ್ಸಾದಂತೆ ಹೆಚ್ಚಾಗುತ್ತಿದೆ, ಆದರೆ ಇತ್ತೀಚಿನ…
ಎಷ್ಟು ಪ್ರಮಾಣದಲ್ಲಿ ಉಪ್ಪು ಸೇವಿಸಿದ್ರೆ ಆರೋಗ್ಯಕ್ಕೆ ತುಂಬಾ ಡೇಂಜರ್? ಇಲ್ಲಿದೆ ಉಪಯುಕ್ತ ಮಾಹಿತಿ… Salt
ಊಟಕ್ಕೆ ಉಪ್ಪು ( Salt ) ತುಂಬಾನೇ ಅವಶ್ಯಕವಾಗಿದ್ದರೂ ಅದು ಆರೋಗ್ಯ ( Health )…