ಜಲಮೂಲಗಳ ಸ್ವಚ್ಛತೆ ಕಾಪಾಡಲು ಮನವಿ

blank

ದಾವಣಗೆರೆ : ರಾಜ್ಯದ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಚರಂಡಿ ನೀರನ್ನು ಕೆರೆ, ಹಳ್ಳ ಮುಂತಾದ ಜಲಮೂಲಗಳಿಗೆ ಬಿಟ್ಟು ಶುದ್ಧ ನೀರನ್ನು ಮಲಿನಗೊಳಿಸುವುದನ್ನು ನಿಲ್ಲಿಸಬೇಕು ಎಂದು, ನೆಲ, ಜಲ ಹಾಗೂ ಪರಿಸರ ಸಂರಕ್ಷಣಾ ಆಂದೋಲನ ಒಕ್ಕೂಟವು ಸರ್ಕಾರಕ್ಕೆ ಮನವಿ ಮಾಡಿದೆ.  ಒಕ್ಕೂಟದ ಪದಾಧಿಕಾರಿಗಳು ಇತ್ತೀಚೆಗೆ ಬೆಂಗಳೂರಿನಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರನ್ನು ಭೇಟಿ ಮಾಡಿ ಈ ಕುರಿತು ಮನವಿ ಸಲ್ಲಿಸಿದರು.  ರಾಜ್ಯದ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಲ್ಲಿ ಸ್ವಚ್ಛ ನೀರನ್ನು ಬಳಸಿ, ಚರಂಡಿ ನೀರನ್ನು ಪಕ್ಕದ ಹೊಳೆ, ಹಳ್ಳ, ಕೆರೆ ಇನ್ನಿತರ ಜಲಮೂಲಗಳಿಗೆ ಬಿಡಲಾಗುತ್ತಿದೆ.  ಗ್ರಾಮೀಣ ಪ್ರದೇಶದಲ್ಲೂ ಇದೇ ಸ್ಥಿತಿ ಇದೆ. ಇದು ಅತ್ಯಂತ ದುರ್ದೈವದ ಸಂಗತಿಯಾಗಿದೆ ಎಂದು ತಿಳಿಸಿದರು.  ಆದ್ದರಿಂದ ಸಂಬಂಧಿಸಿದ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿ, 30 ದಿನಗಳ ಒಳಗೆ ಅಗತ್ಯ ಕ್ರಮ ಕೈಗೊಂಡು ನೀರಿನ ಸ್ವಚ್ಛತೆ ಕಾಪಾಡಬೇಕು. ಇಲ್ಲದಿದ್ದರೆ ಒಕ್ಕೂಟದ ವತಿಯಿಂದ ಜಿಲ್ಲಾ ಕೇಂದ್ರಗಳಲ್ಲಿ ಧರಣಿ ಕೂಡಲಾಗುವುದು ಎಂದು ಎಚ್ಚರಿಕೆ ನೀಡಿದರು.  ರೈತ ಮುಖಂಡರಾದ ಕುರುಬೂರು ಶಾಂತಕುಮಾರ್, ಬಲ್ಲೂರು ರವಿಕುಮಾರ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಎಚ್. ಅರುಣ್ ಕುಮಾರ್ ಇತರರು ಇದ್ದರು.

blank
Share This Article
blank

ತೂಕ ಇಳಿಸಿಕೊಳ್ಳಬೇಕೆಂದರೆ ಸಂಜೆ 7 ಗಂಟೆಯ ಮೊದಲು ಮಾತ್ರ ಊಟ ಮಾಡಿ! dinner

dinner :  ಇತ್ತೀಚಿನ ದಿನಗಳಲ್ಲಿ ಅನೇಕ ಜನರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಇದಕ್ಕಾಗಿ ಅವರು ವ್ಯಾಯಾಮ…

ಹೊಳೆಯುವ ಚರ್ಮಕ್ಕಾಗಿ ಬಾಳೆಹಣ್ಣಿನ ಸಿಪ್ಪೆ! banana peel ಬಳಸುವ ಸರಳ ಮಾರ್ಗಗಳು ಇಲ್ಲಿವೆ…

 banana peel : ಬಾಳೆಹಣ್ಣನ್ನು ತಿನ್ನಲು ಇಷ್ಟಪಡುತ್ತಾರೆ. ಅನೇಕ ಜನರು ಬಾಳೆಹಣ್ಣಿನಿಂದ ವಿವಿಧ ರುಚಿಕರವಾದ ಸಿಹಿತಿಂಡಿಗಳನ್ನು ಸಹ…

blank