ದಾವಣಗೆರೆ : ಇಡಿ ಹಾಗೂ ಸಿಬಿಐ ಸ್ವತಂತ್ರ ತನಿಖಾ ಸಂಸ್ಥೆಗಳಾಗಿವೆ. ಕೇಂದ್ರ ಸರ್ಕಾರ ಅವುಗಳನ್ನು ದುರ್ಬಳಕೆ ಮಾಡಿಕೊಂಡಿಲ್ಲ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದರು. ಕಾಂಗ್ರೆಸ್‌ನ ಹಿರಿಯ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಅವರು 95ನೇ ಜನ್ಮದಿನವನ್ನು ಆಚರಿಸಿಕೊಂಡ ಹಿನ್ನೆಲೆಯಲ್ಲಿ ಮಂಗಳವಾರ ನಗರದ ಅವರ ನಿವಾಸಕ್ಕೆ ತೆರಳಿ ಶುಭಾಶಯ ಕೋರಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಮಾಜಿ ಸಂಸದ ಡಿ.ಕೆ. ಸುರೇಶ್‌ಗೆ ಇಡಿ ಸಮನ್ಸ್ ವಿಚಾರವಾಗಿ ಪ್ರತಿಕ್ರಿಯಿಸಿ, ತಪ್ಪು ಮಾಡಿದವರ ಮೇಲೆ ಕ್ರಮ ಆಗುತ್ತದೆ. ದಾಖಲೆಗಳ ಆಧಾರದ ಮೇಲೆ ತನಿಖಾ ಸಂಸ್ಥೆಗಳು ಕಾರ್ಯಾಚರಣೆ ನಡೆಸುತ್ತವೆ ಎಂದು ತಿಳಿಸಿದರು. ಇಡಿ ಹಾಗೂ ಸಿಬಿಐ ಸಂಸ್ಥೆಗಳನ್ನು ಕಾಂಗ್ರೆಸ್ ದುರ್ಬಳಕೆ ಮಾಡಿಕೊಂಡಿತ್ತು ಎಂದು ನೆನಪಿಸಿದ ಅವರು, ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತಕ್ಕೆ ರಾಜ್ಯ ಸರ್ಕಾರ ಕಾರಣವಾಗಿದೆ, ಆದರೆ ಅಮಾಯಕ ಪೊಲೀಸರನ್ನು ತಲೆತಂಡ ಮಾಡಿದೆ ಎಂದು ಆರೋಪಿಸಿದರು. ಪೊಲೀಸರನ್ನು ಬಳಕೆ ಮಾಡಿಕೊಂಡು ಮಂಗಳೂರಿನಲ್ಲಿ ಹಿಂದು ಕಾರ್ಯಕರ್ತರಿಗೆ ತೊಂದರೆ ಕೊಡುತ್ತಿದ್ದಾರೆ. ಎಲ್ಲ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡಿದ್ದು ಕಾಂಗ್ರೆಸ್ ಎಂದರು. ರಾಜ್ಯ ಸರ್ಕಾರ ಫಲಾನುಭವಿಗಳಿಗೆ ವೃದ್ಧಾಪ್ಯ ವೇತನ, ಗೃಹಲಕ್ಷ್ಮೀ ಯೋಜನೆಯ ಹಣ ಕೊಟ್ಟಿಲ್ಲ. ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿದೆ. ಯಡಿಯೂರಪ್ಪ ಅವರು ತಂದಿದ್ದ ಯೋಜನೆಗಳನ್ನು ಕಾಂಗ್ರೆಸ್‌ನವರು ತಡೆ ಹಿಡಿದಿದ್ದಾರೆ. ಆಂತರಿಕ ಕಚ್ಚಾಟದಿಂದ ಈ ಸರ್ಕಾರ ಬೀಳುತ್ತದೆ ಎಂದು ಭವಿಷ್ಯ ನುಡಿದರು.
ತನಿಖಾ ಸಂಸ್ಥೆಗಳ ದುರ್ಬಳಕೆ ಆಗಿಲ್ಲ

ಸ್ನಾನದ ನಂತರವೂ ನಿಮ್ಮ ದೇಹವು ಕೆಟ್ಟ ವಾಸನೆಯನ್ನು ಬೀರುತ್ತದೆಯೇ? ಹೀಗೆ ಮಾಡಿ ನೋಡಿ…. life style
life style: ಕೆಲವರಿಗೆ ದೇಹದಿಂದ ವಾಸನೆ ಬರುವುದನ್ನು ನೀವು ಗಮನಿಸಿರಬಹುದು. ಅದು ಚಳಿಯಾಗಿರಬಹುದು, ಮಳೆಯಾಗಿರಬಹುದು, ಸಣ್ಣ…
ವಕ್ರ ದಂತ ಸಮಸ್ಯೆಗೆ ಸೂಕ್ತ ಪರಿಹಾರ ಅಲೈನರ್
ಹಲ್ಲು ಅಡ್ಡಾದಿಡ್ಡಿ ಇದ್ದರೆ ಅಂಥವರು ಮುಜುಗರದಿಂದ ಮನಬಿಚ್ಚಿ ನಗದಿರುವುದೇ ಹೆಚ್ಚು. ಆದರೆ ಈಗ ಅಷ್ಟಕ್ಕೆಲ್ಲ ಚಿಂತೆ…