More

    ಸರ್ಕಾರಿ ಯೋಜನೆಗಳ ಪ್ರಚಾರದಿಂದ ಬಡವರಿಗೆ ಅನುಕೂಲ

    ದಾವಣಗೆರೆ : ಕೇಂದ್ರ ಸರ್ಕಾರದ ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಪ್ರಚುರಪಡಿಸುವುದರಿಂದ ಜನಸಾಮಾನ್ಯರಿಗೆ ಮತ್ತು ಬಡವರಿಗೆ ಅನುಕೂಲವಾಗಲಿದೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ತಿಳಿಸಿದರು.
     ಭಾರತ ಸರ್ಕಾರದ ವಾರ್ತಾ ಶಾಖೆ(ಪಿ.ಐ.ಬಿ) ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದೊಂದಿಗೆ ನಗರದ ಅಪೂರ್ವ ಹೋಟೆಲ್ ಸಭಾಂಗಣದಲ್ಲಿ ಗುರುವಾರ, ಕೇಂದ್ರ ಸರ್ಕಾರದ ಯೋಜನೆಗಳ ಕುರಿತು ಜಿಲ್ಲಾ ಮಾಧ್ಯಮ ಪ್ರತಿನಿಧಿಗಳಿಗೆ ವಾರ್ತಾಲಾಪ ಕಾರ್ಯಾಗಾರ ಮತ್ತು ಸಂವಾದ ಉದ್ಘಾಟಿಸಿ ಮಾತನಾಡಿದರು.
     ಕೇಂದ್ರ ಸರ್ಕಾರ ಜನ್‌ಧನ್, ಪ್ರಧಾನ ಮಂತ್ರಿ ಜೀವನ್ ಸುರಕ್ಷಾ ಬಿಮಾ, ಜಲಜೀವನ್ ಮಿಷನ್, ಆಯುಷ್ಮಾನ್ ಭಾರತ್, ಉಜ್ವಲ್ ಸೇರಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಜನ್‌ಧನ್ ಯೋಜನೆಯ ಮೂಲಕ ಪ್ರತಿಯೊಬ್ಬರೂ ಬ್ಯಾಂಕ್ ಖಾತೆಯನ್ನು ಶೂನ್ಯ ಠೇವಣಿಯಲ್ಲಿ ಆರಂಭಿಸಲು ಅವಕಾಶ ಕಲ್ಪಿಸಿಕೊಟ್ಟಿದ್ದರಿಂದ ಬಡವರಿಗೆ ಸಹಾಯವಾಗಿದೆ ಎಂದರು.
     ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆ ಆರೋಗ್ಯ ಸಂರಕ್ಷಣೆಗೆ ನೆರವಾಗಿದೆ. ಫಸಲ್ಬಿಮಾ ಯೋಜನೆಯಿಂದ ರೈತರಿಗೆ ಸಾಕಷ್ಟು ಅನುಕೂಲವಾಗಿದೆ. ಈ ಯೋಜನೆಗಳು ಗ್ರಾಮೀಣ ಜನರಿಗೆ ತಲುಪುವಂತೆ ಮಾಡಲು ಹೆಚ್ಚು ಪ್ರಚಾರ ಮಾಡಬೇಕಿದ್ದು ಮಾಧ್ಯಮಗಳ ಸಹಕಾರ ಮುಖ್ಯವಾಗಿದೆ ಎಂದು ತಿಳಿಸಿದರು.
     ಮಾಧ್ಯಮ ಕ್ಷೇತ್ರವು ಬೆಲೆ ಕಟ್ಟಲಾಗದ ಆಸ್ತಿಯಾಗಿದ್ದು, ಅಂತಹ ಗೌರವ, ಘನತೆ ಮಾಧ್ಯಮದವರಿಗಿದೆ. ಸಮಾಜದಲ್ಲಿ ಯಾರೇ ತಪ್ಪು ಮಾಡಿದರೂ ಅದನ್ನು ಸರಿಪಡಿಸುವ ಕೆಲಸವನ್ನು ಮಾಧ್ಯಮಗಳ ಮುಖಾಂತರ ಮಾಡಬೇಕು, ತಪ್ಪನ್ನು ತಿದ್ದುವುದು ಆರೋಗ್ಯಕರ ಬೆಳವಣಿಗೆ ಎಂದು ಹೇಳಿದರು.
     ವರದಿಗಾರರು ಕೇವಲ ನಗರಕ್ಕೆ ಸೀಮಿತವಾಗಿರದೆ, ಗ್ರಾಮೀಣ ಪ್ರದೇಶಗಳಲ್ಲಿನ ಕುಂದು ಕೊರತೆಗಳನ್ನು ವರದಿ ಮಾಡುವ ಮೂಲಕ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಮತ್ತು ಜನರ ನಡುವೆ ಸಂಪರ್ಕ ಸೇತುವೆಯಾಗಿ ಕಾರ್ಯ ನಿರ್ವಹಿಸಬೇಕು ಎಂದರು.
     ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟಿನ ಜಿಲ್ಲಾ ಆರೋಗ್ಯ ಸಂಯೋಜಕರಾದ ಡಾ. ನಂದಿನಿ ಮತ್ತು ಡಾ. ಪೂರ್ಣಿಮಾ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯ ಕುರಿತು, ಜಿಲ್ಲಾ ವ್ಯವಸ್ಥಾಪಕ ಜಗದೀಶ ಜಲ್ಜೀವನ್ ಮಿಷನ್ ಯೋಜನೆ ಬಗ್ಗೆ, ಜಿಲ್ಲಾ ಹಣಕಾಸು ಸುರಕ್ಷತಾ ಕೌನ್ಸಿಲರ್ ಹಾಗೂ ಆರ್ಥಿಕ ಸಲಹೆಗಾರ ರಾಜೀವ ಪಾಟೀಲ್ ಪ್ರಧಾನಮಂತ್ರಿ ಜನ್‌ಧನ್ ಯೋಜನೆ ಹಾಗೂ ಮುದ್ರಾ ಯೋಜನೆ ಕುರಿತು, ಜಿಲ್ಲಾ ವಸತಿ ನೋಡಲ್ ಅಧಿಕಾರಿ ತಿಮ್ಮೇಶ್, ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಕುರಿತು, ಕೃಷಿ ಇಲಾಖೆಯ ಪವನ್ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಕುರಿತು ಸಂಕ್ಷಿಪ್ತ ಮಾಹಿತಿ ನೀಡಿದರು.
     ಉಪ ವಿಭಾಗಾಧಿಕಾರಿ ಎನ್. ದುರ್ಗಶ್ರೀ, ಕೇಂದ್ರ ವಾರ್ತಾ ಶಾಖೆ ಬೆಂಗಳೂರಿನ ಉಪ ನಿರ್ದೇಶಕ ಎಸ್. ಪ್ರಕಾಶ್, ಬೆಂಗಳೂರು ಮಾಧ್ಯಮ ಮತ್ತು ಸಂವಹನಾಧಿಕಾರಿ ಪಿ.ಜಿ. ಪಾಟೀಲ್, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಮಲ್ಲಾನಾಯ್ಕ, ಜಿಲ್ಲಾ ವಾರ್ತಾಧಿಕಾರಿ ಬಿ. ಧನಂಜಯಪ್ಪ, ವರದಿಗಾರರ ಕೂಟದ ಅಧ್ಯಕ್ಷ ಕೆ. ಏಕಾಂತಪ್ಪ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಇ.ಎಂ. ಮಂಜುನಾಥ್ ಇದ್ದರು. ಕೇಂದ್ರ ಕ್ಷೇತ್ರ ಪ್ರಚಾರಾಧಿಕಾರಿ ಲಕ್ಷ್ಮೀಕಾಂತ್ ಸ್ವಾಗತಿಸಿದರು.
     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts