More

    ಗ್ರಾಮೀಣರ ಬದುಕಿಗೆ ಬೆಳಕಾದ ಕೃಷಿ, ಹೈನುಗಾರಿಕೆ

    ದಾವಣಗೆರೆ : ಕೃಷಿ ಮತ್ತು ಹೈನುಗಾರಿಕೆ ಗ್ರಾಮೀಣ ಜನರ ಜೀವನಕ್ಕೆ ಬೆಳಕಾಗಿವೆ ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಹೇಳಿದರು.
     ಅವರು ಜಿಲ್ಲಾಡಳಿತ ಭವನದಲ್ಲಿ ಬುಧವಾರ ಎಂ.ಬಿ.ಕೆ, ಕೃಷಿ-ಸಖಿ, ಪಶು ಸಖಿ ಅವರಿಗೆ ಸೌರಶಕ್ತಿ ಆಧಾರಿತ ಜೀವನೋಪಾಯ ಯಂತ್ರಗಳ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
     ಉದ್ಯೋಗಂ ಪುರುಷ ಲಕ್ಷಣಂ ಎಂಬ ಗಾದೆಯು ‘ಉದ್ಯೋಗಂ ಸ್ತ್ರೀ-ಪುರುಷ ಲಕ್ಷಣಂ’ ಎಂದು ಬದಲಾವಣೆ ಆಗಬೇಕಿದೆ. ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ಮಹಿಳೆಯರಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ಶಿಕ್ಷಣದಲ್ಲಿ ಕೌಶಲದೊಂದಿಗೆ ಅಭಿವೃದ್ಧಿ ಹಾಗೂ ಇತರೆ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕು ಎಂದರು.
     ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ. ಇಟ್ನಾಳ್ ಮಾತನಾಡಿ, ಸಣ್ಣ, ಅತಿ ಸಣ್ಣ ರೈತರಿಗೆ ಪಶು ಸಂಗೋಪನೆ ಬಗ್ಗೆ ಮಾಹಿತಿ ನೀಡಲು ಪಶು ಸಖಿಗಳು, ಪಶು ವೈದ್ಯಾಧಿಕಾರಿಗಳಿಗೆ ಸಹಕಾರ ನೀಡಬೇಕು. ಗ್ರಾಮೀಣ ಭಾಗದ ರೈತರಿಗೆ ಸರ್ಕಾರದ ವಿವಿಧ ಸೌಲಭ್ಯಗಳನ್ನು ಕೊಡಿಸುವ ನಿಟ್ಟಿನಲ್ಲಿ ಕೆಲಸ ನಿರ್ವಹಿಸಬೇಕು. ಪ್ರಾಥಮಿಕ ಚಿಕಿತ್ಸೆ, ಪಶುಗಳ ಪೋಷಣೆ ಮತ್ತು ಪೌಷ್ಟಿಕ ಆಹಾರ, ಹೆಚ್ಚುವರಿ ಹಾಲಿನ ಉತ್ಪಾದನೆಯ ಬಗ್ಗೆ ತಿಳಿದುಕೊಳ್ಳಬೇಕು ಎಂದು ಹೇಳಿದರು.
     ಸೆಲ್ಕೋ ಇಂಡಿಯಾದ ಡಿಜಿಎಂ ಪ್ರಸನ್ನಕುಮಾರ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts