ದಾವಣಗೆರೆ : ಕರ್ನಾಟಕ ಲೇಖಕಿಯರ ಸಂಘದ ಜಿಲ್ಲಾ ಶಾಖೆಯ 5ನೇ ವಾರ್ಷಿಕೋತ್ಸವ ಮತ್ತು ಕೃತಿಗಳ ಬಿಡುಗಡೆ ಸಮಾರಂಭ ನಗರದ ರೋಟರಿ ಬಾಲ ಭವನದಲ್ಲಿ ಶುಕ್ರವಾರ ಬೆಳಗ್ಗೆ 10.30 ಕ್ಕೆ ನಡೆಯಲಿದೆ ಎಂದು ಸಂಘದ ಜಿಲ್ಲಾಧ್ಯಕ್ಷೆ ವೀಣಾ ಕೃಷ್ಣಮೂರ್ತಿ ಹೇಳಿದರು. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ. ವಾಮದೇವಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಸಂಘದ ಜಿಲ್ಲಾ ಸದಸ್ಯರ ಸಂಕಲನ ಕೃತಿ ‘ವನಿತೆ-ಕಥೆ-ಕವಿತೆ’ ಹಾಗೂ ಮಂಜುಳಾ ಮಂಜಪ್ಪ ಅವರ ‘ನುಡಿಬಾಣ-ಸತ್ಯದರ್ಶನ’ ಪುಸ್ತಕ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು. ಚಿತ್ರದುರ್ಗದ ಸಾಹಿತಿ ಶೈಲಾ ಜಯಕುಮಾರ್, ಎಸ್.ಎಸ್. ಆಸ್ಪತ್ರೆಯ ಪೆಥಾಲಜಿ ವಿಭಾಗದ ಮುಖ್ಯಸ್ಥೆ ಡಾ. ಶಶಿಕಲಾ ಕೃಷ್ಣಮೂರ್ತಿ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಸುಮತಿ ಜಯಪ್ಪ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ತಿಳಿಸಿದರು. ದೇಶಭಕ್ತಿ ಗೀತೆ, ಭಾವಗೀತೆಗಳ ಗಾಯನ, ಕವನ ವಾಚನ, ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು. ಜಿಲ್ಲಾ ಸಂಘದ ಉಪಾಧ್ಯಕ್ಷೆ ಎಸ್.ಎಂ. ಮಲ್ಲಮ್ಮ, ಉಮಾದೇವಿ, ಶೈಲಜಾ, ಮಂಜುಳಾ ಸುದ್ದಿಗೋಷ್ಠಿಯಲ್ಲಿದ್ದರು.
ಲೇಖಕಿಯರ ಸಂಘದ ವಾರ್ಷಿಕೋತ್ಸವ ನಾಳೆ

ಹೃದ್ರೋಗ ದೂರ, ಮೆದುಳಿನ ಆರೋಗ್ಯಕ್ಕೆ ಬಲ: ಟ್ಯೂನ ಮೀನಿನಲ್ಲಿದೆ ಹಲವು ಆರೋಗ್ಯ ಪ್ರಯೋಜನಗಳು! Tuna Fish Benefits
Tuna Fish Benefits: ಮೀನು ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ಸಾಮಾನ್ಯವಾಗಿ ಹೇಳಲಾಗುತ್ತದೆ. ಮೀನಿನಲ್ಲಿ ಹಲವು…
ಯುವಜನರಲ್ಲಿ ಹೃದಯಾಘಾತ ಹೆಚ್ಚಾಗಲು ಪ್ರಮುಖ ಕಾರಣಗಳಿವು… ತಕ್ಷಣ ಎಚ್ಚೆತ್ತುಕೊಳ್ಳದಿದ್ರೆ ಅಪಾಯ ಫಿಕ್ಸ್! Cardiac Arrest
Cardiac Arrest : ಒಂದು ಕಾಲದಲ್ಲಿ ವಯಸ್ಸಾದವರಲ್ಲಿ ಮಾತ್ರ ಕಂಡುಬರುತ್ತಿದ್ದ ಹೃದಯ ಸಂಬಂಧಿ ಸಮಸ್ಯೆಗಳು ಈಗ…