More

    ಬಿಸಿಯೂಟ ತಯಾರಕರಿಂದ ಜಿ.ಪಂ. ಕಚೇರಿಗೆ ಮುತ್ತಿಗೆ

    ದಾವಣಗೆರೆ : ಬಾಕಿ ವೇತನ ಬಿಡುಗಡೆಗೆ ಆಗ್ರಹಿಸಿ ಬಿಸಿಯೂಟ ತಯಾರಕರು ಗುರುವಾರ ಜಿಲ್ಲಾ ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
    ಎ.ಐ.ಟಿ.ಯು.ಸಿ ಸಂಯೋಜಿತ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಜಿ.ಪಂ. ಆವರಣದಲ್ಲಿ ಪ್ರತಿಭಟನಾ ಸಭೆ ನಡೆಸಿದ ಅವರು, ನಂತರ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಡಾ.ಎ. ಚನ್ನಪ್ಪ ಅವರಿಗೆ ಮನವಿ ಸಲ್ಲಿಸಿದರು.
    ದಾವಣಗೆರೆ, ಜಗಳೂರು, ಹರಿಹರ, ಚನ್ನಗಿರಿ, ಹೊನ್ನಾಳಿ ಮತ್ತು ನ್ಯಾಮತಿ ತಾಲೂಕುಗಳ ಕಿರಿಯ ಪ್ರಾಥಮಿಕ, ಹಿರಿಯ ಪ್ರಾಥಮಿಕ, ಸರ್ಕಾರಿ ಪ್ರೌಢಶಾಲೆ ಹಾಗೂ ಅನುದಾನಿತ ಶಾಲೆಗಳಲ್ಲಿ ಮಧ್ಯಾಹ್ನ ಉಪಾಹಾರ ಯೋಜನೆಯಡಿ ಮುಖ್ಯ ಅಡುಗೆಯವರು, ಸಹಾಯಕ ಅಡುಗೆಯವರು 20 ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.
    ಅತ್ಯಂತ ಕಡಿಮೆ ವೇತನದಲ್ಲಿ ದುಡಿಯುತ್ತಿರುವ ಬಿಸಿಯೂಟ ತಯಾರಕರಿಗೆ ಯಾವುದೇ ಸೌಲಭ್ಯಗಳು ಸಿಕ್ಕಿಲ್ಲ. ಹೀಗಿರುವಾಗ ಮೇ ತಿಂಗಳಿನಿಂದ ಶಾಲೆಗಳು ಆರಂಭವಾಗಿದ್ದು ಇಲ್ಲಿಯವರೆಗೆ 3 ರಿಂದ 4 ತಿಂಗಳ ವೇತನ ಪಾವತಿಯಾಗಿಲ್ಲ ಎಂದು ತಿಳಿಸಿದರು.
    ಏಪ್ರಿಲ್, ಮೇ ತಿಂಗಳ ವೇತನವನ್ನು ಗಣನೆಗೆ ತೆಗೆದುಕೊಂಡಿಲ್ಲ. ಕೆಲವು ಅಡುಗೆಯವರಿಗೆ ಒಂದು ತಿಂಗಳ ವೇತನವೂ ಬಂದಿಲ್ಲ. ಇನ್ನೂ ಕೆಲವರಿಗೆ 6 ತಿಂಗಳಿಂದ ಬಾಕಿಯಿದೆ. ತಾವು ಇದನ್ನೇ ನಂಬಿ ಜೀವನ ಸಾಗಿಸುತ್ತಿದ್ದು ಪರಿಸ್ಥಿತಿ ಬಹಳ ಕಷ್ಟಕರವಾಗಿದೆ ಎಂದು ವಿವರಿಸಿದರು.
    ಸಂಘಟನೆಯ ಜಿಲ್ಲಾಧ್ಯಕ್ಷ ಆವರಗೆರೆ ಚಂದ್ರು ಮಾತನಾಡಿ, ಶಾಲೆಗಳು ಆರಂಭವಾಗಿ 7 ತಿಂಗಳಾಗಿವೆ. ಮುಖ್ಯಮಂತ್ರಿ ಅವರು ಸೂಚನೆ ನೀಡಿದ್ದರೂ ಅಧಿಕಾರಿಗಳು ಪಾಲಿಸುತ್ತಿಲ್ಲ. ಬಾಕಿ ವೇತನವನ್ನು ಕೂಡಲೇ ಸಂಬಂಧಿಸಿದವರ ಬ್ಯಾಂಕ್ ಖಾತೆಗೆ ಜಮಾ ಮಾಡಬೇಕು ಎಂದು ಆಗ್ರಹಿಸಿದರು.
    ಮುಖಂಡರಾದ ಸಿ. ರಮೇಶ್, ಮಹಮ್ಮದ್ ಬಾಷಾ, ಐರಣಿ ಚಂದ್ರು, ರುದ್ರಮ್ಮ, ಜಯ್ಯಮ್ಮ, ಚನ್ನಮ್ಮ, ಲಲಿತಮ್ಮ, ವಿನೋದಮ್ಮ, ಮಂಗಳಗೌರಿ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts