More

    ಪ್ರಚಾರದ ಗೀಳಿನಿಂದ ಕಾಂಗ್ರೆಸ್ ಸುಳ್ಳು ಆರೋಪ

    ದಾವಣಗೆರೆ: ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಆಡಳಿತದ ಅವಧಿಯಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿವೆ ಎಂಬ ಕಾಂಗ್ರೆಸ್ ಆರೋಪವನ್ನು ಮೇಯರ್ ಆರ್. ಜಯಮ್ಮ ತಳ್ಳಿಹಾಕಿದ್ದು, ಪ್ರಚಾರ ಪಡೆಯುವ ಉದ್ದೇಶದಿಂದ ಸುಳ್ಳು ಆರೋಪ ಮಾಡಲಾಗಿದೆ ಎಂದು ತಿರುಗೇಟು ನೀಡಿದ್ದಾರೆ.
    ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಅವಧಿಯಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದರು. ದಶಕಗಳಷ್ಟು ಹಳೆಯವಾದ ಸಮಸ್ಯೆಗಳಿಗೆ ಮುಕ್ತಿ ದೊರಕಿಸಲಾಗಿದೆ ಎಂದು ಸಮರ್ಥಿಸಿಕೊಂಡರು.
    ಅನುದಾನ ಹಂಚಿಕೆಯಲ್ಲಿ ಆಡಳಿತ ಪಕ್ಷ, ಪ್ರತಿಪಕ್ಷ ಎಂಬ ತಾರತಮ್ಯ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಕಾಂಗ್ರೆಸ್‌ನವರು ಪ್ರತಿನಿಧಿಸುವ ವಾರ್ಡುಗಳಿಗೆ ವಿವಿಧ ಅನುದಾನಗಳಲ್ಲಿ 8.5 ಕೋಟಿ ರೂ.ಗಳನ್ನು ನೀಡಲಾಗಿದೆ ಎಂದು ತಿಳಿಸಿದರು.
    15ನೇ ಹಣಕಾಸು ಯೋಜನೆಯಲ್ಲಿ ತ್ಯಾಜ್ಯ ನಿರ್ವಹಣೆ, ಕುಡಿಯುವ ನೀರಿಗೆ ಮೀಸಲಿರುವ ಹಣವನ್ನು ತೆಗೆದರೆ 10 ಕೋಟಿ ರೂ. ಮಾತ್ರ ಉಳಿಯುತ್ತದೆ. ಅದರಲ್ಲಿ ಕಾಂಗ್ರೆಸ್‌ನವರ ಕೆಲವು ವಾರ್ಡುಗಳಿಗೂ ಪಾಲು ದಕ್ಕಿದೆ. ಬಿಜೆಪಿಯ ಹಲವು ವಾರ್ಡುಗಳಿಗೂ ಸಿಕ್ಕಿಲ್ಲ ಎಂದರು.
    ರೈಲ್ವೆ ಕೆಳ ಸೇತುವೆಯಲ್ಲಿ ಸಂಚಾರ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲಾಗಿದೆ. ಸಾರ್ವಜನಿಕ ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ವಾಟ್ಸಾಪ್ ಸಂಖ್ಯೆಯನ್ನು ನೀಡಲಾಗಿದ್ದು ಅದರ ಮೂಲಕ ಸ್ಪಂದಿಸಲಾಗುತ್ತಿದೆ ಎಂದು ಹೇಳಿದರು.
    ಮಿಯಾವಾಕಿ ಪದ್ಧತಿಯಲ್ಲಿ ನಗರ ಅರಣ್ಯೀಕರಣಕ್ಕೆ ಚಾಲನೆ ನೀಡಲಾಗಿದೆ. ಉಚಿತ ಶವ ಸಂಸ್ಕಾರ ಯೋಜನೆ, 2 ವಿದ್ಯುತ್ ಚಿತಾಗಾರಗಳ ನಿರ್ಮಾಣ, ಕೋವಿಡ್ ಸಮಯದಲ್ಲಿ ಆಹಾರದ ಕಿಟ್‌ಗಳ ವಿತರಣೆ ಮಾಡಲಾಯಿತು ಎಂದು ವಿವರಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts