More

    ಕೊಬ್ಬರಿ ಖರೀದಿ ಕೇಂದ್ರ ತೆರೆಯಲು ಒತ್ತಾಯ

    ದಾವಣಗೆರೆ : ತೋಟಗಾರಿಕೆ ಸಚಿವರ ಜಿಲ್ಲೆಯಲ್ಲಿ ತೆಂಗು ಬೆಳೆಯುವ ಪ್ರದೇಶ ಅಧಿಕವಾಗಿದ್ದು ತಕ್ಷಣವೇ ಖರೀದಿ ಕೇಂದ್ರ ಆರಂಭಿಸಿ, ಬೆಲೆ ಕುಸಿತದಿಂದ ಕಂಗಾಲಾದ ರೈತರ ನೆರವಿಗೆ ಧಾವಿಸಬೇಕು ಎಂದು ಬಿಜೆಪಿ ಮುಖಂಡ ಕೊಳೇನಹಳ್ಳಿ ಬಿ.ಎಂ. ಸತೀಶ್ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
     ಜಿಲ್ಲೆಯಲ್ಲಿ 7893.32 ಹೆಕ್ಟೇರ್ ಪ್ರದೇಶದಲ್ಲಿ ತೆಂಗು ಬೆಳೆ ಇದ್ದು, ವಾರ್ಷಿಕ 9.67 ಕೋಟಿ ತೆಂಗಿನಕಾಯಿಗಳ ಉತ್ಪನ್ನ ಬರುತ್ತಿದೆ. ಕೊಬ್ಬರಿ ಬೆಲೆ ಕುಸಿದಿರುವುದರಿಂದ ರೈತರು ಸಿಕ್ಕ ಬೆಲೆಗೆ ಎಳನೀರು ಮಾರಾಟ ಮಾಡಿ ಕೈ ತೊಳೆದುಕೊಳ್ಳುತ್ತಿದ್ದಾರೆ. ಇದರಿಂದ ತೆಂಗು ಬೆಳೆಗಾರರು ತೀವ್ರ ಆರ್ಥಿಕ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
     ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಕೇಂದ್ರ ಸರ್ಕಾರ ಕ್ವಿಂಟಾಲ್ ಒಂದರ ಕೊಬ್ಬರಿ ಬೆಲೆ 11750 ರೂ. ನಿಗದಿಪಡಿಸಿದೆ. ಇದಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹ ಧನವಾಗಿ 1250 ರೂ. ಕೊಡುವುದಾಗಿ ಘೋಷಣೆ ಮಾಡಿದೆ. ಇದರಿಂದ ಕ್ವಿಂಟಾಲ್ ಒಂದರ ಕೊಬ್ಬರಿಗೆ 13 ಸಾವಿರ ರೂ. ಬೆಲೆ ಸಿಗುತ್ತದೆ. ಆದ್ದರಿಂದ ತಕ್ಷಣವೇ ದಾವಣಗೆರೆ ಎಪಿಎಂಸಿಯಲ್ಲಿ ಕೊಬ್ಬರಿ ಖರೀದಿ ಕೇಂದ್ರ ಆರಂಭ ಮಾಡಬೇಕು ಎಂದು ಸತೀಶ್ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts