More

    ಶಿಷ್ಟಾಚಾರ, ಸುರಕ್ಷತಾ ಕ್ರಮಗಳಲ್ಲಿ ಬೇಡ ಲೋಪ

    ದಾವಣಗೆರೆ: ಮಾರ್ಚ್ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರು ನಗರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಶಿಷ್ಟಾಚಾರ ಹಾಗೂ ಸುರಕ್ಷತಾ ಕ್ರಮಗಳಲ್ಲಿ ಯಾವುದೇ ಲೋಪವಾಗದಂತೆ ಗರಿಷ್ಠ ಎಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಸೂಚನೆ ನೀಡಿದರು.
     ಜಿಲ್ಲಾಡಳಿತ ಭವನದಲ್ಲಿ ಸೋಮವಾರ, ಪ್ರಧಾನಿ ಭೇಟಿಯ ಹಿನ್ನೆಲೆಯಲ್ಲಿ ಪೂರ್ವಸಿದ್ಧತೆ ಕುರಿತು ಅಧಿಕಾರಿಗಳೊಂದಿಗೆ ಸುದೀರ್ಘವಾಗಿ ಚರ್ಚಿಸಿದರು.
     ಖಾಸಗಿ ಕಾರ್ಯಕ್ರಮ ನಿಮಿತ್ತ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಅಧಿಕಾರಿಗಳು ತಮಗೆ ವಹಿಸಿದ ಜವಾಬ್ದಾರಿಯನ್ನು ನಿರ್ವಹಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
     ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಹಾಗೂ ರಾಜ್ಯದ ಸಚಿವರು, ಹಿರಿಯ ಅಧಿಕಾರಿಗಳು, ಎಸ್.ಪಿ.ಜಿ. ತಂಡ ಸೇರಿ ಗಣ್ಯರು ಆಗಮಿಸಲಿದ್ದಾರೆ. ವಸತಿ, ವಾಹನ, ಊಟದ ವ್ಯವಸ್ಥೆ ಕೈಗೊಳ್ಳಬೇಕು ಎಂದರು.
     ನಗರದ ಜಿ.ಎಂ.ಐ.ಟಿ  ಕಾಲೇಜಿನ ಪಕ್ಕದಲ್ಲಿ 400 ಎಕರೆ ಜಾಗದಲ್ಲಿ ಸಮಾವೇಶ ನಡೆಯಲಿದ್ದು ಕಾರ್ಯಕ್ರಮ ಸುಗಮ ನಿರ್ವಹಣೆ  ಮತ್ತು ಯಶಸ್ಸಿಗೆ ವಿವಿಧ ತಂಡಗಳನ್ನು ರಚಿಸಲಾಗಿದೆ. ಆಯಾ ಅಧಿಕಾರಿಗಳಿಗೆ ನೀಡಲಾಗಿರುವ ಜವಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಹೇಳಿದರು.
     ವೇದಿಕೆ, ಹೆಲಿಪ್ಯಾಡ್ ನಿರ್ಮಾಣ, ಪಾರ್ಕಿಂಗ್, ಗಣ್ಯರ ಆಸನದ ವ್ಯವಸ್ಥೆ, ಸ್ವಚ್ಛತೆ, ಭದ್ರತೆ ಹೀಗೆ ಎಲ್ಲವೂ ಅಚ್ಚುಕಟ್ಟಾಗಿರಬೇಕು ಎಂದು ಸೂಚಿಸಿದರು.
     ಮುನ್ನೆಚ್ಚರಿಕೆಯಾಗಿ ಕಾರ್ಯಕ್ರಮ ಸ್ಥಳದಲ್ಲಿ ಆಂಬುಲೆನ್ಸ್, ತಾತ್ಕಾಲಿಕ ಆಸ್ಪತ್ರೆ ಮತ್ತು ತುರ್ತು ಚಿಕಿತ್ಸೆಗೆ ನಗರದ ಎಸ್.ಎಸ್ ಆಸ್ಪತ್ರೆಯಲ್ಲಿ ಐ.ಸಿ.ಯು ಸ್ಥಾಪಿಸಬೇಕು. ಅಗ್ನಿಶಾಮಕ ವಾಹನ ಇರಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts