More

    ವಿಧಾನಸಭಾ ಚುನಾವಣೆಗೆ ಜಿಲ್ಲಾಡಳಿತ ಸನ್ನದ್ಧ

    ದಾವಣಗೆರೆ: ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಜಿಲ್ಲಾಡಳಿತ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಹೇಳಿದರು.
     ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಸಿದ್ಧತೆಗಳ ವಿವರವನ್ನು ನೀಡಿದರು.
     ಏ. 13ರಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗುವುದು. ಏ. 20ಕ್ಕೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. 21ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. 24ಕ್ಕೆ ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಕೊನೆಯ ದಿನ. ಮೇ 10ರಂದು ಮತದಾನ ನಡೆಯಲಿದೆ. 13ರಂದು ಮತಗಳ ಎಣಿಕೆ ಕಾರ್ಯ ನಡೆಯಲಿದೆ. ಮೇ 15ರೊಳಗೆ ಚುನಾವಣೆ ಮುಕ್ತಾಯವಾಗಲಿದೆ ಎಂದು ವಿವರಿಸಿದರು.
     ಮತದಾರರ ನೋಂದಣಿ ಹಾಗೂ ಮತದಾನದ ಮಹತ್ವದ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸಲು ಸ್ವೀಪ್ ಚಟುವಟಿಕೆಗಳನ್ನು ಕೈಗೊಳ್ಳಲಾಗುವುದು. 18ರಿಂದ 19 ವರ್ಷದ ಯುವಕ ಯುವತಿಯರ ನೋಂದಣಿ ಪ್ರಕ್ರಿಯೆ ಹೆಚ್ಚಿಸುವ ನಿಟ್ಟಿನಲ್ಲಿ ಕಾಲೇಜು, ವಿವಿಗಳಲ್ಲಿ ಕ್ಯಾಂಪಸ್ ರಾಯಭಾರಿಗಳನ್ನು ನೇಮಿಸಲಾಗಿದೆ. ಇದುವರೆಗೆ 18 ವರ್ಷ ಮೇಲ್ಪಟ್ಟ 30,091 ಯುವ ಮತದಾರರ ನೋಂದಣಿ ಮಾಡಲಾಗಿದೆ ಎಂದು ತಿಳಿಸಿದರು.
     ಚುನಾವಣೆಯನ್ನು ಶಾಂತಿಯುತವಾಗಿ ನಡೆಸುವ ನಿಟ್ಟಿನಲ್ಲಿ ಪೊಲೀಸ್ ಬಂದೋಬಸ್ತ್‌ಗೆ ಕ್ರಮ ತೆಗೆದುಕೊಳ್ಳಲಾಗುವುದು. ಜಿಲ್ಲೆಯಾದ್ಯಂತ ಪರವಾನಗಿ ಹೊಂದಿರುವ ಶಸ್ತ್ರಾಸ್ತ್ರಗಳನ್ನು ಸಂಬಂಧಿಸಿದ ಪೊಲೀಸ್ ಠಾಣೆಯಲ್ಲಿ ಠೇವಣಿ ಇರಿಸಲು ಆದೇಶ ಹೊರಡಿಸಲಾಗಿದೆ ಎಂದರು.
     ಆಯೋಗವು ಅಂಗವಿಕಲ, 80 ವರ್ಷ ಮೇಲ್ಪಟ್ಟ ಮತ್ತು ಕೋವಿಡ್ ಬಾಧಿತ ವ್ಯಕ್ತಿಗಳಿಗೆ ಮನೆಯಿಂದಲೇ ಅಂಚೆ ಮತಪತ್ರ ಮೂಲಕ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.
     ಜಿ.ಪಂ. ಸಿಇಒ ಡಾ.ಎ. ಚನ್ನಪ್ಪ, ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್, ಹೆಚ್ಚುವರಿ ಎಸ್ಪಿ ಆರ್.ಬಿ. ಬಸರಗಿ ಸುದ್ದಿಗೋಷ್ಠಿಯಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts