More

    ವಿದ್ಯಾರ್ಥಿಗಳು ಮೊಬೈಲ್‌ನಿಂದ ದೂರವಿರಲು ಸಲಹೆ

    ದಾವಣಗೆರೆ : ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಸಮೀಪಿಸುತ್ತಿದ್ದು ವಿದ್ಯಾರ್ಥಿಗಳು ಮೊಬೈಲ್‌ನಿಂದ ದೂರವಿದ್ದು ಪಠ್ಯದ ಕಡೆ ಹೆಚ್ಚು ಆಸಕ್ತಿ ವಹಿಸಿ ಅಭ್ಯಾಸ ಮಾಡಬೇಕು ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಸವಾಪಟ್ಟಣ ಯೋಜನಾಧಿಕಾರಿ ನವೀನ್ ಕಿವಿಮಾತು ಹೇಳಿದರು.
    ಬಸವಾಪಟ್ಟಣ ಸಮೀಪದ ಚಿರಡೋಣಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಶುಕ್ರವಾರ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಎಸ್‌ಎಸ್‌ಎಲ್ಸಿ ವ್ಯಾಸಂಗ ಮಾಡುವ ಮಕ್ಕಳಿಗೆ ಉಚಿತ ಟ್ಯೂಷನ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.
    ಕಲಿಕಾಸಕ್ತಿ ಹೆಚ್ಚಿಸುವ ಹಾಗೂ ವಿದ್ಯಾರ್ಥಿಗಳು ಹೆಚ್ಚು ಅಂಕ ಗಳಿಸಿ ತೇರ್ಗಡೆ ಹೊಂದುವ ಸಲುವಾಗಿ ಯೋಜನೆಯಿಂದ ಉಚಿತ ಟ್ಯೂಷನ್ ವ್ಯವಸ್ಥೆಯನ್ನು ಕಲ್ಪಿಸಿಕೊಟ್ಟಿದ್ದು ಮಕ್ಕಳು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
    ಚಿತ್ರದುರ್ಗ ಪ್ರಾದೇಶಿಕ ವಿಭಾಗದ ಮಹಿಳಾ ಜ್ಞಾನ ವಿಕಾಸ ಸಮನ್ವಯಾಧಿಕಾರಿಣಿ ಅನುಷಾ, ಎಸ್‌ಡಿಎಂಸಿ ಅಧ್ಯಕ್ಷ ಎಂ.ಎಸ್. ನಾಗೇಂದ್ರಪ್ಪ, ಒಕ್ಕೂಟದ ಅಧ್ಯಕ್ಷ ಕೆ.ಜಿ. ಚಂದ್ರಪ್ಪ, ಕುಂದೂರಪ್ಪ, ವಲಯ ಮೇಲ್ವಿಚಾರಕಿ ಚಂದ್ರಪ್ರಭಾ, ಮುಖ್ಯ ಶಿಕ್ಷಕ ನಾಗೇಂದ್ರಪ್ಪ, ಮಂಜುನಾಥ ಹಾಗೂ ಪಾಲಕರು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts