More

    ಉತ್ಪಾದನೆ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ

    ದಾವಣಗೆರೆ : ಹತ್ತೊಂಬತ್ತನೇ ಶತಮಾನದಲ್ಲಿ ಕೈಗಾರಿಕಾ ಕ್ಷೇತ್ರ ಬೆಳೆದು ಈಗ ಉದ್ಯಮ 4.0 ತಲುಪಿದ್ದು, ಉತ್ಪಾದನೆ ಕ್ಷೇತ್ರದಲ್ಲಿ ಸಾಕಷ್ಟು ಅವಕಾಶಗಳಿವೆ ಎಂದು ಎಚ್‌ಎಎಲ್ ವಿನ್ಯಾಸ ವಿಭಾಗದ ವ್ಯವಸ್ಥಾಪಕ ಡಾ. ಮಾದೇವ ನಾಗರಾಳ ತಿಳಿಸಿದರು.
    ನಗರದ ಜಿಎಂಐಟಿ ಕಾಲೇಜಿನಲ್ಲಿ ಮಂಗಳವಾರ, ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಫಾರ್ಮೆಕ್ ಫೋರಂ ಉದ್ಘಾಟಿಸಿ ಮಾತನಾಡಿದರು.
    ತಂತ್ರಜ್ಞಾನದ ಎಲ್ಲ ಕ್ಷೇತ್ರಗಳಲ್ಲಿ ಬಹುಶಿಸ್ತೀಯ ಶಿಕ್ಷಣ ಜಾರಿಯಲ್ಲಿದ್ದು, ಎಲ್ಲ ತಂತ್ರಜ್ಞಾನಗಳ ಬಗ್ಗೆ ತಿಳಿದು ಬುದ್ಧಿವಂತಿಕೆಯನ್ನು ಪ್ರದರ್ಶಿಸಬೇಕಾಗಿದೆ ಎಂದು ಕಾಲೇಜಿನ ಪ್ರಾಚಾರ್ಯ ಡಾ. ವೈ. ವಿಜಯಕುಮಾರ್ ತಿಳಿಸಿದರು.
    ಮುಂದಿನ ದಿನಗಳಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಅನೇಕ ಉದ್ಯೋಗವಕಾಶಗಳು ಸೃಷ್ಟಿಯಾಗಲಿದ್ದು, ಅದಕ್ಕೆ ತಕ್ಕಂತೆ ವಿದ್ಯಾರ್ಥಿಗಳು ತಯಾರಿ ನಡೆಸುವ ಜವಾಬ್ದಾರಿ ಇದೆ ಎಂದು ಕಾಲೇಜಿನ ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥ ತೇಜಸ್ವಿ ಕಟ್ಟಿಮನಿ ತಿಳಿಸಿದರು.
    ವಿಭಾಗದ ಮುಖ್ಯಸ್ಥ ಸಿ.ವಿ. ಶ್ರೀನಿವಾಸ್ ಮಾತನಾಡಿ, ಫೋರಂ ಅಡಿಯಲ್ಲಿ ಅನೇಕ ತಾಂತ್ರಿಕ ಚಟುವಟಿಕೆಗಳನ್ನು ಹಮ್ಮಿಕೊಂಡು ವಿದ್ಯಾರ್ಥಿಗಳ ಗುಣಮಟ್ಟ ಹೆಚ್ಚಿಸುವ ಕಡೆಗೆ ಗಮನ ಹರಿಸಲಾಗುವುದು ಎಂದು ತಿಳಿಸಿದರು.
    ನಂತರ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಎಲ್ಲರ ಗಮನ ಸೆಳೆದರು.
    ಕಾಲೇಜಿನ ಮೆಕ್ಯಾನಿಕಲ್ ವಿಭಾಗದ ಹಳೆಯ ವಿದ್ಯಾರ್ಥಿ ಆರ್. ಆಕರ್ಶ, ಡಾ ಬಿ.ಎ. ಮುದಸರ್ ಪಾಷಾ, ಎಸ್.ಜಿ. ದಿಲೀಪ್ ಕುಮಾರ್, ವಿದ್ಯಾರ್ಥಿ ಮುಖಂಡರಾದ ಎನ್.ಎಚ್. ಸಾಗರ್, ಎ. ಚಂದು, ಅಧ್ಯಾಪಕರು, ವಿದ್ಯಾರ್ಥಿಗಳು ಇದ್ದರು. ವಿಲಾಸ್ ರಾವ್ ನಿರೂಪಿಸಿದರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts