More

    ಮನೆ ಮನೆಗೆ ಭೇಟಿ, ಗ್ಯಾರಂಟಿ ಕಾರ್ಡ್ ವಿತರಣೆ

    ದಾವಣಗೆರೆ : ಕಾಂಗ್ರೆಸ್‌ನ ಪ್ರಜಾಧ್ವನಿ ಯಾತ್ರೆ ಅಂಗವಾಗಿ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಮನೂರು ಗ್ರಾಮದಲ್ಲಿ ಮಂಗಳವಾರ, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಪಕ್ಷದ ಮುಖಂಡರು ಮನೆ ಮನೆಗೆ ತೆರಳಿ ಗ್ಯಾರಂಟಿ ಕಾರ್ಡುಗಳನ್ನು ವಿತರಿಸಿದರು.
     ಗೃಹಲಕ್ಷ್ಮೀ ಯೋಜನೆಯಡಿ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂ. ನೀಡುವುದು, ಗೃಹಜ್ಯೋತಿ ಯೋಜನೆಯಡಿ ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ಕೊಡುವುದು, ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ ಉಚಿತವಾಗಿ ವಿತರಿಸುವ ಭರವಸೆಯನ್ನು ಜನರಿಗೆ ನೀಡಲಾಯಿತು.
     ನಗರದ ಬಾಪೂಜಿ ಅತಿಥಿಗೃಹದಿಂದ ಪ್ರಜಾಧ್ವನಿ ಯಾತ್ರೆಯ ಬಸ್‌ನಲ್ಲಿ ಶಾಮನೂರು ಗ್ರಾಮಕ್ಕೆ ಬಂದಿಳಿದಾಗ ಕಾರ್ಯಕರ್ತರು, ಅಭಿಮಾನಿಗಳು ಪಟಾಕಿ ಸಿಡಿಸಿ, ಪುಷ್ಪವೃಷ್ಟಿ ಮಾಡಿ ಸ್ವಾಗತ ಕೋರಿದರು. ನಂತರ ಜನರ ಮನೆ ಬಾಗಿಲಿಗೆ ತೆರಳಿ ಅವರಿಗೆ ಗ್ಯಾರಂಟಿ ಕಾರ್ಡುಗಳನ್ನು ನೀಡುವ ಮೂಲಕ, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಆದ್ಯತೆಗಳೇನು ಎಂಬುದನ್ನು ಜನರಿಗೆ ವಿವರಿಸಿದರು. ಮಹಿಳೆಯರು, ಮನೆಯ ಯಜಮಾನರು, ಯುವಕರನ್ನು ಮಾತನಾಡಿಸಿ ಗ್ಯಾರಂಟಿ ಕಾರ್ಡುಗಳ ಬಗ್ಗೆ ತಿಳಿಸಿ ಹೇಳಿದರು.
     ಮಾಜಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್, ಜಮೀರ್ ಅಹಮದ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ವಿಧಾನ ಪರಿಷತ್ ಪ್ರತಿಪಕ್ಷದ ಮುಖ್ಯ ಸಚೇತಕ ಪ್ರಕಾಶ್ ರಾಠೋಡ್ ಇನ್ನಿತರ ನಾಯಕರು ಸಾಥ್ ನೀಡಿದರು.
     ಇದಕ್ಕೂ ಮೊದಲು ಗ್ರಾಮದ ಆಂಜನೇಯ ದೇವಸ್ಥಾನ, ಈಶ್ವರ ದೇವಸ್ಥಾನಗಳಿಗೆ ತೆರಳಿ ದರ್ಶನ ಪಡೆದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts