More

    ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ-ಮಂಡಳಿ ಬೇಡಿಕೆ

    ದಾವಣಗೆರೆ : ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ ಅಥವಾ ಮಂಡಳಿ ರಚಿಸಬೇಕೆಂಬ ಬೇಡಿಕೆ ಸರ್ಕಾರದ ಮುಂದಿದ್ದು ಶೀಘ್ರವೇ ಅದು ಕಾರ್ಯರೂಪಕ್ಕೆ ಬರುವ ನಿರೀಕ್ಷೆಯಿದೆ ಎಂದು, ಕ್ರಿಶ್ಚಿಯನ್ ಅಭಿವೃದ್ಧಿ ಕೌನ್ಸಿಲ್ ಅಧ್ಯಕ್ಷ ಜೆ. ಕೆನಡಿ ಶಾಂತಕುಮಾರ್ ಹೇಳಿದರು.
    ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಹಿಂದೆ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಇದ್ದಾಗ ಕೌನ್ಸಿಲ್ ರಚನೆಯಾಗಿತ್ತು. ನಿಗಮ ಅಥವಾ ಮಂಡಳಿ ಮಾಡಬೇಕು ಎಂಬ ಪ್ರಯತ್ನ ನಡೆದು ಶೇ. 60ರಷ್ಟು ಕೆಲಸ ಆಗಿತ್ತು. ಆದರೆ ನಂತರ ಅಧಿಕಾರಕ್ಕೆ ಬಂದ ಪಕ್ಷಗಳು ಅದನ್ನು ನಿರ್ಲಕ್ಷಿಸಿದವು ಎಂದು ಆರೋಪಿಸಿದರು.
    ಕ್ರಿಶ್ಚಿಯನ್ ಸಮುದಾಯದ ಸ್ಥಿತಿಗತಿ ಅರಿಯುವ ಉದ್ದೇಶದಿಂದ ಕುಲಶಾಸ್ತ್ರ ಅಧ್ಯಯನದ ಅಗತ್ಯವಿದ್ದು ಈ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಅವರ ಗಮನಕ್ಕೆ ತಂದಿರುವುದಾಗಿ ತಿಳಿಸಿದರು.
    ರಾಜ್ಯ ಸರ್ಕಾರ ಜಾರಿಗೆ ತರಲು ಹೊರಟಿರುವುದು ಮತಾಂತರ ನಿಷೇಧ ಕಾಯ್ದೆ ಅಲ್ಲ, ಅದು ಧಾರ್ಮಿಕ ಸಂರಕ್ಷಣಾ ಕಾಯ್ದೆಯಾಗಿದೆ. ಅದನ್ನು ಸರಿಯಾಗಿ ಅರ್ಥ ಮಾಡಿಕೊಳ್ಳದ ಪ್ರತಿಪಕ್ಷಗಳು ಆರೋಪ ಮಾಡುತ್ತಿವೆ ಎಂದು ದೂರಿದರು.
    ಕಾಂಗ್ರೆಸ್ ಅನ್ನು ಢೋಂಗಿ ಜಾತ್ಯತೀತ ಪಕ್ಷ ಎಂದು ಕರೆದ ಅವರು, ಬಿಜೆಪಿಯಲ್ಲಿ ತುಷ್ಟೀಕರಣ ನೀತಿಯಿಲ್ಲ, ಸಮುದಾಯವನ್ನು ಬೇರು ಮಟ್ಟದಲ್ಲಿ ಗಟ್ಟಿಗೊಳಿಸಲು ಪಕ್ಷ ಬದ್ಧವಾಗಿದೆ ಎಂದು ತಿಳಿಸಿದರು.
    ಸಿದ್ದರಾಮಯ್ಯ ಸಿಎಂ ಆಗಿದ್ದ ಅವಧಿಯಲ್ಲಿ ಜಾತಿ ಆಧಾರಿತ ಜನಗಣತಿ ನಡೆದಿತ್ತು. ಅದು ವೈಜ್ಞಾನಿಕವಾಗಿರಲಿಲ್ಲ, ಆ ಬಗ್ಗೆ ಗೊಂದಲಗಳಿವೆ. ನಮ್ಮ ಸಮುದಾಯದ ಜನಸಂಖ್ಯೆ ಎಷ್ಟಿದೆ ಎಂಬ ಸ್ಪಷ್ಟತೆ ಸಿಕ್ಕಿಲ್ಲ ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts