ದಾವಣಗೆರೆ ಚಿತ್ರಸಂತೆ 3ಕ್ಕೆ

blank

ದಾವಣಗೆರೆ : ಚಿತ್ರಕಲಾ ಪರಿಷತ್‌ನಿಂದ ನಗರದ ಎವಿಕೆ ಕಾಲೇಜು ರಸ್ತೆಯಲ್ಲಿ ಮಾ.3ರಂದು ದಾವಣಗೆರೆ ಚಿತ್ರಸಂತೆ ಹಮ್ಮಿಕೊಳ್ಳಲಾಗಿದೆ ಎಂದು ಪರಿಷತ್ ಕಾರ್ಯದರ್ಶಿ ಡಿ. ಶೇಷಾಚಲ ಹೇಳಿದರು.
  ಚಿತ್ರ ಕಲಾವಿದರಿಗೆ ಸಹಾಯ ಒದಗಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
 ಭಾನುವಾರ ಬೆಳಗ್ಗೆ 8ರಿಂದ ಸಂಜೆ 7ರ ವರೆಗೆ ಕಲಾಕೃತಿಗಳ ಪ್ರದರ್ಶನ ಮಾರಾಟ ನಡೆಯಲಿದ್ದು, ರಾಜ್ಯದ ವಿವಿಧ ಜಿಲ್ಲೆ, ಮಹಾರಾಷ್ಟ್ರ, ತಮಿಳುನಾಡು, ಆಂಧ್ರಪ್ರದೇಶ, ಒಡಿಶಾ ಹಾಗೂ ರಾಜಸ್ಥಾನ ರಾಜ್ಯಗಳ ಸುಮಾರು 150ಕ್ಕೂ ಹೆಚ್ಚು ಕಲಾವಿದರು ತಮ್ಮ ಚಿತ್ರಕಲೆ ಪ್ರದರ್ಶಿಸಲಿದ್ದಾರೆ ಎಂದರು.
 ಚಿತ್ರಸಂತೆಯಲ್ಲಿ ಭಾಗವಹಿಸುವ ಎಲ್ಲ ಕಲಾವಿದರಿಗೆ ಪ್ರಮಾಣಪತ್ರ ನೀಡಲಾಗುವುದು. ಪ್ರತಿಭಾವಂತ ಕಲಾವಿದರು ಹಾಗೂ ಉತ್ತಮ ಮಳಿಗೆ ನಿರ್ಮಿಸಿದವರಿಗೆ ನಗದು ಬಹುಮಾನ ನೀಡಲಾಗುವುದು ಎಂದು ಹೇಳಿದರು.
 3ರಂದು ಬೆಳಗ್ಗೆ 10.30ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಉದ್ಘಾಟಿಸುವರು, ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ, ಡಿ.ಜಿ. ಶಾಂತನಗೌಡ, ಬಿ. ದೇವೇಂದ್ರಪ್ಪ, ಕೆ.ಎಸ್. ಬಸವಂತಪ್ಪ, ಪಾಲಿಕೆ ಮಹಾಪೌರ ವಿನಾಯಕ ಪೈಲ್ವಾನ್, ಡಿಸಿ ಡಾ.ಎಂ.ವಿ. ವೆಂಕಟೇಶ್, ಎಸ್‌ಪಿ ಉಮಾ ಪ್ರಶಾಂತ್ ಭಾಗವಹಿಸುವರು ಎಂದು ತಿಳಿಸಿದರು.
 ಸಂಜೆ 5.15ಕ್ಕೆ ನಡೆಯುವ ಸಮಾರೋಪದಲ್ಲಿ ಸಂಸದ ಜಿ.ಎಂ.ಸಿದ್ದೇಶ್ವರ್, ಶಾಸಕರಾದ ಬಿ.ಪಿ. ಹರೀಶ್, ಬಸವರಾಜ ಶಿವಗಂಗಾ, ಮಾಜಿ ಶಾಸಕ ಎಚ್.ಎಸ್. ಶಿವಶಂಕರ್, ಪಾಲಿಕೆ ಸದಸ್ಯ ಬಿ.ಜೆ. ಅಜಯ್‌ಕುಮಾರ್, ಜಿಪಂ ಸಿಇಒ ಸುರೇಶ್ ಇಟ್ನಾಳ್ ಪಾಲ್ಗೊಳ್ಳಲಿದ್ದಾರೆ ಎಂದರು.
 ಪರಿಷತ್ ಅಧ್ಯಕ್ಷ ಡಿ.ಸಿ. ಶ್ರೀನಿವಾಸ್, ಸದಾನಂದ ಹೆಗಡೆ, ಶಾಂತಯ್ಯ ಪರಡಿಮಠ್, ವಿಜಯಕುಮಾರ್ ಜಾಧವ್, ಗಣೇಶ್ ಆಚಾರ್ ಇದ್ದರು.

Share This Article

ಚಳಿಗಾಲದಲ್ಲಿ ಈ ಒಂದು ಹಣ್ಣನ್ನು ತಿಂದರೆ ಸಾಕು.. ರೋಗಗಳೇ ಬರುವುದಿಲ್ಲ..fruits

fruits : ಚಳಿಗಾಲ ಬಂದಿದೆ ಎಂದರೆ ಕೆಮ್ಮು, ನೆಗಡಿ, ಜ್ವರ, ಗಂಟಲು ನೋವು, ಕೀಲು ನೋವು…

ಮಕರ ರಾಶಿಗೆ ಬುಧ ಪ್ರವೇಶ: ಈ 5 ರಾಶಿಯವರಿಗೆ ರಾಜಯೋಗ, ಖುಲಾಯಿಸಲಿದೆ ಅದೃಷ್ಟ! Zodiac Sign

Zodiac Sign : ಜ್ಯೋತಿಷ್ಯದ ಆಧಾರದ ಮೇಲೆ, ಒಬ್ಬರು ಜನಿಸಿದ ರಾಶಿ, ನಕ್ಷತ್ರ ಹಾಗೂ ಗ್ರಹಗಳ…

ಪೇನ್​ ಕಿಲ್ಲರ್ ಮಾತ್ರೆ​ vs ಜೆಲ್​… ಎರಡರಲ್ಲಿ ಯಾವುದು ಉತ್ತಮ? ಇಲ್ಲಿದೆ ಉಪಯುಕ್ತ ಮಾಹಿತಿ… Painkiller Tablet vs Gel

Painkiller Tablet vs Gel : ದೇಹವು ಗಾಯಗೊಂಡಾಗ ಅಥವಾ ಉಳುಕಿದಾಗ ನೋವು ಅನುಭವಿಸುವುದು ಸಹಜ.…