ದಾವಣಗೆರೆ : ಸಮಾಜ ಪರಿವರ್ತನೆ ಮಾಡಬಲ್ಲ ಗುರುತರ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಧಾರವಾಡದ ವಿಶ್ರಾಂತ ಕ್ಷೇತ್ರ ಶಿಕ್ಷಣಾಧಿಕಾರಿ ಟಿ. ಅಂಬಣ್ಣ ಹೇಳಿದರು. ಜ್ಞಾನಜ್ಯೋತಿ ವನಿತಾ ಶಿಕ್ಷಕಿಯರ ವೇದಿಕೆಯಿಂದ ನಗರದ ಪಿ.ಜೆ.ಬಡಾವಣೆಯ ವನಿತಾ ಸಮಾಜದಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದರು. ಶಿಕ್ಷಕರು ಉತ್ತಮ ಸಮಾಜ ಮತ್ತು ರಾಷ್ಟ್ರ ನಿರ್ಮಾತೃಗಳಾಗಿದ್ದು, ಸಂಪೂರ್ಣ ಸಮರ್ಪಣಾ ಭಾವದಿಂದ ವೃತ್ತಿಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು. ಇಂದಿನ ದಿನಗಳಲ್ಲಿ ಶಿಕ್ಷಕ ವೃತ್ತಿ ಬಹಳ ಕಠಿಣವಾಗಿದೆ. ಜವಾಬ್ದಾರಿಗಳ ಜತೆಗೆ ಮಕ್ಕಳಲ್ಲಿ ಮೌಲ್ಯ ಬಿತ್ತಿ ಉತ್ತಮ ನಾಗರಿಕರನ್ನಾಗಿ ಮಾಡಬೇಕು. ಮಕ್ಕಳ ವ್ಯಕ್ತಿತ್ವ ವಿಕಾಸಗೊಳಿಸಲು ಶ್ರಮಿಸಬೇಕು ಎಂದರು. ವೇದಿಕೆಯ ಅಧ್ಯಕ್ಷೆ ಹಾಗೂ ಈಶ್ವರಮ್ಮ ಶಾಲೆಯ ಉಪ ಪ್ರಾಚಾರ್ಯೆ ಜಿ.ಎಸ್. ಶಶಿರೇಖಾ ಮಾತನಾಡಿ, ಆದರ್ಶ ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಯಾವ ರೀತಿ ಮೌಲ್ಯ ಬಿತ್ತಬೇಕೆಂಬ ಕುರಿತು ಮಾಹಿತಿ ನೀಡಿದರು. ಮೌಲ್ಯ ಶಿಕ್ಷಣ ನೀಡುವುದರಿಂದ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಸಹಾಯಕವಾಗುತ್ತದೆ ಎಂದು ತಿಳಿಸಿದರು. ಉತ್ತಮ ಶಿಕ್ಷಕಿ ಪ್ರಶಸ್ತಿ ಪಡೆದ ಸೇಂಟ್ ಪಾಲ್ಸ್ ಕಾನ್ವೆಂಟ್ ಶಾಲೆಯ ಸಹ ಶಿಕ್ಷಕಿ ಇಮ್ಮಡಿ ರಾಧಾ ಮಾಲತಿ, ಗಣಿತಶಾಸ್ತ್ರದಲ್ಲಿ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ಪಡೆದ ಈಶ್ವರಮ್ಮ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಸಹ ಶಿಕ್ಷಕಿ ಎಚ್.ಎಂ. ಆಶಾಲತಾ ಅವರನ್ನು ಗೌರವಿಸಲಾಯಿತು. ವನಿತಾ ಸಮಾಜದ ಸದಸ್ಯರಾದ ವಾಗ್ದೇವಿ, ನಿಲಗುಂದ ಜಯಮ್ಮ, ಗೌರಮ್ಮ, ಮಲ್ಲಮ್ಮ ನಾಗರಾಜ್, ಎ.ಎಚ್.ನಂದಾ ಇದ್ದರು.
ಸಮಾಜ ಪರಿವರ್ತಿಸುವ ಜವಾಬ್ದಾರಿ ಶಿಕ್ಷಕರದು
You Might Also Like
ನಿಮ್ಮ ಅಂಗೈನಲ್ಲಿ ಈ ಚಿಹ್ನೆ ಇದೆಯಾ ನೋಡಿ… ಇದ್ರೆ ಎಂದಿಗೂ ಹಣಕಾಸಿನ ಸಮಸ್ಯೆಗಳು ಎದುರಾಗಲ್ಲ | Palmistry
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Honey: ಜೇನಿನೊಂದಿಗೆ ಈ ಆರು ಆಹಾರ ಬೆರೆಸಿ ತಿನ್ನಬೇಡಿ..ಹಾಗೆ ಮಾಡಿದರೆ ವಿಷವಾಗುತ್ತದೆ!
ಜೇನು(Honey) ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಆದರೆ ಕೆಲವು ಪದಾರ್ಥಗಳೊಂದಿಗೆ ಬೆರೆಸಿ ಸೇವಿಸಬಾರದು. ಈ 6 ಪದಾರ್ಥಗಳೊಂದಿಗೆ…
ಅಕ್ಕಿ ತೊಳೆದ ನೀರನ್ನು ಚೆಲ್ಲಬೇಡಿ.. ಈ ನೀರಿನಿಂದ ದೇಹದ ತೂಕ ಇಳಿಸಿಕೊಳ್ಳಬಹುದು! Interesting information
ಬೆಂಗಳೂರು: ಅಕ್ಕಿ ತೊಳೆದರೆ ಬರುವ ನೀರನ್ನು ( rice washed water) ಅನೇಕರು ಬಿಸಾಡುತ್ತಾರೆ. ಆದರೆ…