More

    ಪ್ರಾಯೋಗಿಕ ಕಲಿಕೆಗೆ ಬೇಕು ಆದ್ಯತೆ

    ದಾವಣಗೆರೆ : ಇಂದಿನ ಶಿಕ್ಷಕರು ಬೋಧನೆಗಿಂತ ಪ್ರಾಯೋಗಿಕವಾಗಿ ಕಲಿಸುವ ಕಡೆಗೆ ಹೆಚ್ಚಿನ ಗಮನ ನೀಡಬೇಕೆಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಚಾರ್ಯೆ ಎಸ್. ಗೀತಾ ಹೇಳಿದರು.
    ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕರ ಕಚೇರಿ ಹಾಗೂ ಹುಳುಪಿನಕಟ್ಟೆಯ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ನಗರದ ಮಾಕನೂರು ಮಲ್ಲೇಶಪ್ಪ ಶಿಕ್ಷಣ ಮಹಾವಿದ್ಯಾಲಯದಲ್ಲಿ ಬುಧವಾರ, ತಾಲೂಕು ಮತ್ತು ಜಿಲ್ಲೆಯ ಸರ್ಕಾರಿ ಪ್ರೌಢ ಶಾಲೆಗಳ ವಿಜ್ಞಾನ ಶಿಕ್ಷಕರ ಎರಡು ದಿನಗಳ ಪ್ರಾಯೋಗಿಕ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
    ಶಿಕ್ಷಣಾಧಿಕಾರಿ ಜಿ.ಎಸ್. ರಾಜಶೇಖರಪ್ಪ ಮಾತನಾಡಿ, ವೈಜ್ಞಾನಿಕ ವಿಶ್ಲೇಷಣೆಗಳನ್ನು ಬಳಸಿ ಮಂತ್ರವಾದಿಗಳು ಜನ ಸಾಮಾನ್ಯರಿಗೆ ಮಂಕು ಬಳಿಯುವ ಕಾಲವಿದು. ಪ್ರತಿಯೊಬ್ಬರೂ ವೈಜ್ಞಾನಿಕ ಪರಿಕಲ್ಪನೆಯನ್ನು ಅಳವಡಿಸಿಕೊಳ್ಳುವುದು ಅತ್ಯವಶ್ಯಕ ಎಂದು ತಿಳಿಸಿದರು.
    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಕೆ.ಟಿ. ನಾಗರಾಜ ನಾಯ್ಕ ಮಾತನಾಡಿ, ಶಿಕ್ಷಕರು ಶಾಲೆಯಲ್ಲಿ ಪ್ರಾಯೋಗಿಕವಾಗಿ ವಿಜ್ಞಾನ ಬೋಧನೆ ಮಾಡಬೇಕು. ವಿದ್ಯಾರ್ಥಿಗಳಲ್ಲಿ ಆಸಕ್ತಿ ಮೂಡುವಂತೆ ಮಾಡಬೇಕೆಂದು ಸಲಹೆ ನೀಡಿದರು.
    ನಿವೃತ್ತ ಪ್ರಾಚಾರ್ಯ ಡಿ.ಎಂ. ಪಾರ್ಥಸಾರಥಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ವಿಷಯ ಪರಿವೀಕ್ಷಕರಾದ ಎಂ. ಶಶಿಕಲಾ, ಎಂ. ಸುರೇಶಪ್ಪ, ಕೆ.ಸಿ. ಸುಧಾ ಇದ್ದರು.
    ಲಲಿತ ಪ್ರಾರ್ಥಿಸಿದರು. ಉಪ ನಿರ್ದೇಶಕರ ಕಚೇರಿಯ ವಿಜ್ಞಾನ ವಿಷಯ ಪರಿವೀಕ್ಷಕಿ ಆರ್.ಬಿ. ವಸಂತ್ ಕುಮಾರಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದ ಕ್ಯೂರೇಟರ್ ಪಿ. ಅರುಣ ವಂದಿಸಿದರು. ಕಾವೇರಮ್ಮ ಪ್ರೌಢಶಾಲೆಯ ಶಿಕ್ಷಕ ಎಚ್.ಬಿ. ಭೀಮಪ್ಪ ನಿರೂಪಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts