More

    ನ. 5 ರಿಂದ ಮೂತ್ರಕೋಶ ಶಸ್ತ್ರಚಿಕಿತ್ಸಾ ತಜ್ಞರ ರಾಜ್ಯ ಸಮಾವೇಶ

    ದಾವಣಗೆರೆ : ಕರ್ನಾಟಕ ಯುರಾಲಜಿ ಅಸೋಸಿಯೇಷನ್ ಮತ್ತು ಎಸ್.ಎಸ್. ವೈದ್ಯಕೀಯ ಕಾಲೇಜಿನ ಸಹಯೋಗದಲ್ಲಿ ಮೂತ್ರಕೋಶ ಶಸ್ತ್ರಚಿಕಿತ್ಸಾ ತಜ್ಞರ ರಾಜ್ಯಮಟ್ಟದ 27ನೇ ವಾರ್ಷಿಕ ಸಮಾವೇಶ ನ. 5 ಮತ್ತು 6 ರಂದು ನಗರದಲ್ಲಿ ನಡೆಯಲಿದೆ.
    ಇಲ್ಲಿನ ಎಸ್.ಎಸ್. ವೈದ್ಯಕೀಯ ಕಾಲೇಜಿನ ಆವರಣದಲ್ಲಿ ಆಯೋಜಿಸಿರುವ ಈ ಸಮಾವೇಶದಲ್ಲಿ 200-250 ತಜ್ಞ ವೈದ್ಯರು ಭಾಗವಹಿಸಲಿದ್ದಾರೆ. ಹೊರ ರಾಜ್ಯ, ವಿದೇಶಗಳಿಂದಲೂ ಕೆಲವರು ಬರಲಿದ್ದಾರೆ ಎಂದು, ಕಾಲೇಜಿನ ವೈದ್ಯಕೀಯ ನಿರ್ದೇಶಕ ಡಾ. ಅರುಣ್ ಕುಮಾರ್ ಅಜ್ಜಪ್ಪ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
    ನ. 4ರಂದು ಸಮಾವೇಶಪೂರ್ವ ಕಾರ್ಯಾಗಾರದಲ್ಲಿ ಪ್ರೊಸ್ಟೇಟ್ ಕಾಯಿಲೆಗೆ ಸಂಬಂಧಿಸಿದ ಲೇಸರ್ ಚಿಕಿತ್ಸೆ ಹಾಗೂ ಹೊಸ ವಿಧಾನಗಳ ಬಗ್ಗೆ ಅಂತಾರಾಷ್ಟ್ರೀಯ, ರಾಷ್ಟ್ರೀಯ ಹಾಗೂ ರಾಜ್ಯಮಟ್ಟದ ಪ್ರಸಿದ್ಧ ಮೂತ್ರಕೋಶ ಶಸ್ತ್ರಚಿಕಿತ್ಸಾ ತಜ್ಞರು ಬೆಳಕು ಚೆಲ್ಲಲಿದ್ದಾರೆ ಎಂದು ಹೇಳಿದರು.
    ಅದೇ ದಿನ ಸಂಜೆ ಕೊಂಡಜ್ಜಿಯ ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಆವರಣದಲ್ಲಿ ಚಿಂತನ ಮಂಥನ ಶಿಬಿರ ಏರ್ಪಡಿಸಲಾಗಿದೆ ಎಂದು ತಿಳಿಸಿದರು.
    ನ. 5ರಂದು ಸಂಜೆ 4.15ಕ್ಕೆ ಎಸ್.ಎಸ್. ವೈದ್ಯಕೀಯ ಕಾಲೇಜಿನಲ್ಲಿ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿವಿ ಕುಲಪತಿ ಡಾ.ಎಂ.ಕೆ. ರಮೇಶ್, ಶಾಸಕ ಡಾ.ಶಾಮನೂರು ಶಿವಶಂಕರಪ್ಪ, ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಭಾಗವಹಿಸುವರು. ಕರ್ನಾಟಕ ಯುರಾಲಜಿ ಅಸೋಸಿಯೇಷನ್ ಅಧ್ಯಕ್ಷ ಡಾ.ನಿಶ್ಚಿತ್ ಡಿಸೋಜ ಅಧ್ಯಕ್ಷತೆ ವಹಿಸಲಿದ್ದಾರೆ. ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಎಸ್. ಪ್ರಸಾದ್ ಉಪಸ್ಥಿತರಿರುವರು ಎಂದರು.
    ಎರಡು ದಿನಗಳ ಸಮಾವೇಶದ ಅವಧಿಯಲ್ಲಿ ಮೂತ್ರಕೋಶ ಶಸ್ತ್ರಚಿಕಿತ್ಸಾ ಕಾಯಿಲೆಗಳ ಬಗ್ಗೆ ವಿಚಾರ ವಿನಿಮಯ, ಪ್ರಬಂಧ ಮಂಡನೆ, ರಸಪ್ರಶ್ನೆ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ತಜ್ಞ ವೈದ್ಯರಿಗೆ ದಾವಣಗೆರೆಯಿಂದ ಕೊಂಡಜ್ಜಿಗೆ ಸೈಕಲ್ ಜಾಥಾ ಹಾಗೂ ದಾವಣಗೆರೆಯಲ್ಲಿ ನಡಿಗೆ, ಮ್ಯಾರಥಾನ್ ಆಯೋಜಿಸಲಾಗಿದೆ ಎಂದು ವಿವರಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts