More

    ಮತದಾನ ಜಾಗೃತಿಗೆ ವ್ಯಾಪಕ ಪ್ರಚಾರ ಕೈಗೊಳ್ಳಲು ಸೂಚನೆ

    ದಾವಣಗೆರೆ : ಚುನಾವಣಾ ಅಯೋಗದ ಸೂಚನೆಯಂತೆ ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ವಿದ್ಯುನ್ಮಾನ ಮತಯಂತ್ರ ಜಾಗೃತಿ ಹಾಗೂ ಮತದಾನ ಕುರಿತಾಗಿ ವ್ಯಾಪಕ ಪ್ರಚಾರ ನಡೆಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಎ. ಚನ್ನಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.
     ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಮತದಾರರ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿ, ಜಿಲ್ಲೆಯ ಎಲ್ಲ ಇಲಾಖೆಯ ಅಧಿಕಾರಿಗಳು ಆಯೋಗದ ನಿರ್ದೇಶನಗಳನ್ನು ಪಾಲಿಸಬೇಕೆಂದು ತಿಳಿಸಿದರು.
     ಎಲ್ಲ ಪೊಲೀಸ್ ಠಾಣೆಗಳಲ್ಲಿ ಮಾದರಿ ಮತಯಂತ್ರ ಇರಿಸಿ ಠಾಣೆಯ ವ್ಯಾಪ್ತಿಗೆ ಒಳಪಡುವ ಸಾರ್ವಜನಿಕರಿಗೆ ಮತಯಂತ್ರ ಬಳಕೆ ವಿದ್ಯುನ್ಮಾನ ಮತಯಂತ್ರದಲ್ಲಿ ಮತ ಚಲಾಯಿಸುವ ಮತ್ತು ಮತದಾನದ ಪ್ರಾಮುಖ್ಯತೆ ಕುರಿತು ಜಾಗೃತಿ ಮೂಡಿಸಬೇಕು ಎಂದು ಹೇಳಿದರು.
     ಪ್ರೌಢಶಾಲಾ ಮಕ್ಕಳಿಗೂ ಮತದಾನದ ಕುರಿತು ಜಾಗೃತಿ ಮೂಡಿಸಿ ಮುಂದಿನ ದಿನಗಳಲ್ಲಿ ಅವರು ಮತ ಚಲಾಯಿಸುವ ಕಡೆಗೆ ಆಸಕ್ತರಾಗಬೇಕು. ಒಂದು ಮತ ಎಷ್ಟು ಪ್ರಾಮುಖ್ಯತೆ ಹೊಂದಿದೆ ಎಂಬುದರ ಬಗ್ಗೆ ಅರಿವು ಮೂಡಿಸಬೇಕು ಎಂದರು.
     ಎಲ್ಲ ಇಲಾಖೆ ಕಚೇರಿಗಳಲ್ಲಿ ಮತದಾನದ ಜಾಗೃತಿ ಘೋಷಣೆಗಳನ್ನು ಕಡ್ಡಾಯವಾಗಿ ಇರಿಸಬೇಕು. ಸಂಬಂಧಿಸಿದ ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತಾದ ಮಾಹಿತಿಗಳನ್ನು ಹಂಚಿಕೊಳ್ಳಬೇಕು. ಅಂಗನವಾಡಿ, ಆಶಾ ಕಾರ್ಯಕರ್ತೆಯರು ಸಾರ್ವಜನಿಕರಲ್ಲಿ ಮತದಾನದ ಕುರಿತು ಮಾಹಿತಿ ನೀಡಬೇಕು ಎಂದು ತಿಳಿಸಿದರು.
     ಕಲಾವಿದರಿಂದ ಮತದಾನದ ಮಹತ್ವ ಮತ್ತು ಪ್ರಯೋಜನಗಳ ಕುರಿತು ಕತೆ, ನಾಟಕ, ಹಾಡು, ಲೇಖನ ಹಾಗೂ ಘೋಷಣೆಗಳನ್ನು ಕೈಗೊಳ್ಳುವಂತೆ ತಿಳಿಸಬೇಕು. ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದು ಹೇಳಿದರು.
     ರೈಲು ನಿಲ್ದಾಣ, ಸ್ಮಾರ್ಟ್‌ಸಿಟಿ  ಫ್ಲೆಕ್ಸೃ್, ಉದ್ಯಾನವನಗಳಲ್ಲಿರುವ ಎಫ್.ಎಂ ರೇಡಿಯೋಗಳಲ್ಲಿ ಘೋಷಣೆಗಳನ್ನ್ನು ಪ್ರಸಾರ ಮಾಡಬೇಕು. ವಿದ್ಯುತ್ ಬಿಲ್, ಆಟೋ ರಿಕ್ಷಾಗಳ ಮೇಲೆ ಘೋಷಣೆಗಳನ್ನು ನೀಡಬೇಕು ಎಂದು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts