More

    ಸಾಧನೆಯಿಂದ ಛಾಪು ಮೂಡಿಸಿದ ಮಹಿಳೆಯರು

    ದಾವಣಗೆರೆ : ಮಹಿಳೆಯರು ಸಾಮಾಜಿಕ, ಶೈಕ್ಷಣಿಕ, ರಾಜಕೀಯವಾಗಿ ಮುಂದುವರಿದು ಸಮಾಜದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿದ್ದಾರೆ ಎಂದು ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶೆ ರಾಜೇಶ್ವರಿ ಎನ್. ಹೆಗಡೆ ಹೇಳಿದರು.
     ಜಿಲ್ಲಾಡಳಿತ ಭವನದಲ್ಲಿ ಬುಧವಾರ, ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಮಹಿಳೆಯರಿಗಾಗಿ ಕಾನೂನು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.
     ಪ್ರಸ್ತುತ ಎಲ್ಲ ಕ್ಷೇತ್ರಗಳಲ್ಲೂ ಮಹಿಳೆಯರು ವಿಶೇಷವಾದ ಸ್ಥಾನಮಾನಗಳಿಗೆ ಪಾತ್ರರಾಗಿದ್ದಾರೆ. ಪ್ರತಿಯೊಂದು ಕ್ಷೇತ್ರದಲ್ಲಿ ಮೀಸಲಾತಿ ಪಡೆದು ಅದರ ಸದುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದರು.
     ಅಂದಿನ ದಿನಗಳಲ್ಲಿ ಮಹಿಳೆಯರನ್ನು ಪುರುಷರಿಗಿಂತ ಹೆಚ್ಚಾಗಿ ದುಡಿಸಿಕೊಂಡು ಕಡಿಮೆ ವೇತನ ನೀಡಿ, ಕೀಳಾಗಿ ಕಾಣಲಾಗುತ್ತಿತ್ತು, ಶೋಷಣೆ ಮಾಡುತ್ತಿದ್ದರು. ಇದರಿಂದ ಬೇಸತ್ತ ಮಹಿಳೆಯರು ಸಂಘಟಿತರಾದರು ಎಂದು ತಿಳಿಸಿದರು.
     ಪುರುಷ ಪ್ರಧಾನ ಸಮಾಜವು ಸ್ತ್ರೀ ಸಮಾನತೆಯನ್ನು ಕಸಿದುಕೊಂಡು ಹೆಚ್ಚು ಶೋಷಣೆಗೆ ಒಳಪಡಿಸಿ, ದೌರ್ಜನ್ಯವೆಸಗಿತು. ಇಂತಹ ದಾರುಣ ಸ್ಥಿತಿಯಲ್ಲಿ ಅಕ್ಕಮಹಾದೇವಿ ಸೇರಿ ಎಲ್ಲ ಶಿವಶರಣೆಯರು ಕ್ರಾಂತಿಯ ಕಹಳೆಯನ್ನು ಊದಿ, ಅಧ್ಯಾತ್ಮದತ್ತ ಹೆಜ್ಜೆ ಹಾಕಿದರು ಎಂದು ಹೇಳಿದರು.
     ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಮಾತನಾಡಿ, ಆಗಿನ ಕಾಲದಲ್ಲಿ ಹೆಣ್ಣು ಮಕ್ಕಳು ಕೇವಲ 10ನೇ ತರಗತಿ ಪೂರೈಸಲು ಆಗುತ್ತಿರಲಿಲ್ಲ, ಆದರೆ ಈಗ ಪರಿಸ್ಥಿತಿ ಬದಲಾಗಿದೆ. ಹಲವಾರು ಕ್ಷೇತ್ರಗಳಲ್ಲಿ ಅವರ ಸಾಧನೆಗಳನ್ನು ನೋಡಬಹುದು ಎಂದು ತಿಳಿಸಿದರು.
     ಮಹಿಳೆಯರು ಕಾನೂನುಗಳನ್ನು ಅರ್ಥ ಮಾಡಿಕೊಳ್ಳುವ ಮೂಲಕ ಅವುಗಳನ್ನು ಸಮರ್ಥವಾಗಿ ಬಳಸಿಕೊಳ್ಳಬೇಕು ಎಂದು ತಿಳಿಸಿದರು.
     ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಎ. ಚನ್ನಪ್ಪ ಮಾತನಾಡಿ, ಮಹಿಳೆಯರು ಸ್ವ-ಸಹಾಯ ಸಂಘಗಳನ್ನು ರಚಿಸಿಕೊಂಡು ಆರ್ಥಿಕವಾಗಿ ಬೆಳವಣಿಗೆ ಹೊಂದುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಅಭಿಪ್ರಾಯಪಟ್ಟರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts