16 C
Bangalore
Thursday, December 12, 2019

ಪಿಂಚಣಿ ಪರಿಷ್ಕರಣೆ ಅನಿವಾರ್ಯ

Latest News

ಮಣ್ಣು ಮಾಲಿನ್ಯದಿಂದ ಜೀವಸಂಕುಲಕ್ಕೆ ಸಂಕಟ

ಮಣ್ಣಿನ ಮಾಲಿನ್ಯವನ್ನು ನಿರ್ಲಕ್ಷಿಸುತ್ತಿದ್ದೇವೆ. ಲಕ್ಷಾಂತರ ವರ್ಷಗಳ ನೈಸರ್ಗಿಕ ಪ್ರಕ್ರಿಯೆಯಿಂದ ಮಣ್ಣು ರೂಪುಗೊಳ್ಳುತ್ತದೆ. ಆದರೆ, ಅದಕ್ಕೆ ಹೇಗೆ ಹಾನಿ ಮಾಡುತ್ತಿದ್ದೇವೆ ಎಂದರೆ ಮುಂದಿನ ದಿನಗಳಲ್ಲಿ ದೊಡ್ಡ ಗಂಡಾಂತರ...

ರೌಡಿ ಕಾಲಿಗೆ ಗುಂಡೇಟು

ಬೆಂಗಳೂರು: ಆರು ತಿಂಗಳ ಹಿಂದೆ ಇಬ್ಬರ ಮೇಲೆ ಗುಂಡಿನ ದಾಳಿ ನಡೆಸಿ ತಲೆಮರೆಸಿಕೊಂಡು ತಿರುಗುತ್ತಿದ್ದ ಶಾರ್ಪ್​ಶೂಟರ್ ರೌಡಿಶೀಟರ್ ಕಾಲಿಗೆ ಕೆ.ಜಿ. ಹಳ್ಳಿ ಪೊಲೀಸರು...

ಸುಗಮ ಸಾರಿಗೆಗೆ ಬೇಕು 2 ಲಕ್ಷ ಕೋಟಿ ರೂಪಾಯಿ

ಬೆಂಗಳೂರು: ನಗರದ ಸಂಚಾರದಟ್ಟಣೆ ನಿವಾರಿಸುವ ಜತೆಗೆ ವಾಯುಮಾಲಿನ್ಯ ಸಮಸ್ಯೆ ಉಲ್ಬಣಿಸದಂತೆ ತಡೆಯಲು ಅಗತ್ಯ ಸೌಲಭ್ಯ ಕಲ್ಪಿಸಲು 2.30 ಲಕ್ಷ ಕೋಟಿ ರೂ. ಬೇಕಿದೆ. ಮುಂದಿನ 20...

ವಿಕ್ಟೋರಿಯಾದಲ್ಲಿ 68 ಕೋಟಿ ರೂ ವೆಚ್ಚದ ಕಟ್ಟಡ

ಬೆಂಗಳೂರು: ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಬಿಎಂಸಿಆರ್​ಐ) ಆಸ್ಪತ್ರೆಗಳಲ್ಲಿ ಒಳರೋಗಿಗಳ ಸೇವೆಗಾಗಿ 68.50 ಕೋಟಿ ರೂ. ವೆಚ್ಚದಲ್ಲಿ ಸಾವಿರ ಒಳರೋಗಿಗಳ ದಾಖಲು...

ಪೊಲೀಸರ ಹಸ್ತಕ್ಷೇಪಕ್ಕೆ ಕೋರ್ಟ್ ಕಿಡಿ

ಬೆಂಗಳೂರು: ಸ್ಥಿರಾಸ್ತಿ ವ್ಯಾಜ್ಯವೊಂದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸಲು ಖುದ್ದು ಪೊಲೀಸ್ ಠಾಣೆಗೆ ಹಾಜರಾಗುವಂತೆ ಸೂಚಿಸಿ ವಕೀಲರೊಬ್ಬರಿಗೆ ನೋಟಿಸ್ ನೀಡಿದ ಪ್ರಕರಣದಲ್ಲಿ ವಿಜಯನಗರ ಠಾಣೆ ಇನ್​ಸ್ಪೆಕ್ಟರ್...

ದಾವಣಗೆರೆ: ನಿವೃತ್ತ ನೌಕರರು ಪಿಂಚಣಿ ಪಡೆಯವುದು ಅವರ ನ್ಯಾಯಬದ್ಧ ಹಕ್ಕು. ಕಾಲಮಾನಕ್ಕೆ ತಕ್ಕಂತೆ ಅದನ್ನು ಪರಿಷ್ಕರಣೆ ಮಾಡಬೇಕೆಂದು ಕರ್ನಾಟಕ ರಾಜ್ಯ ಬ್ಯಾಂಕ್ ನಿವೃತ್ತರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಕೆ.ವಿಶ್ವನಾಥನಾಯ್ಕ ಆಗ್ರಹಿಸಿದರು.

ವಿದ್ಯಾನಗರದ ರೋಟರಿ ಕ್ಲಬ್‌ನಲ್ಲಿ ಮಂಗಳವಾರ, ದಾವಣಗೆರೆ- ಚಿತ್ರದುರ್ಗ ಜಿಲ್ಲಾ ಬ್ಯಾಂಕ್ ನಿವೃತ್ತರ ಒಕ್ಕೂಟದಿಂದ ಹಮ್ಮಿಕೊಂಡ ಕರ್ನಾಟಕ ರಾಜ್ಯ ಬ್ಯಾಂಕ್ ನಿವೃತ್ತರ ಒಕ್ಕೂಟದ ಕೇಂದ್ರ ಸಮಿತಿ ಸಭೆಯಲ್ಲಿ ಮಾತನಾಡಿದರು.

ನೌಕರರ ಹಿತ ಕಾಯಲು ಪಿಂಚಣಿ ಅನಿವಾರ್ಯ. ಇದರ ಮೂಲಕ ಅವರ ಇಳಿವಯಸ್ಸಿನಲ್ಲಿ ಸುರಕ್ಷತೆ, ಭದ್ರತೆ, ಗೌರವವನ್ನು ಕಾಪಾಡಬಹುದು. ಸರ್ಕಾರದಲ್ಲಿ ಸಾಕಷ್ಟು ನಿಧಿ ಇದ್ದರೂ ನಮಗೆ ದಕ್ಕುತ್ತಿಲ್ಲ ಎಂದು ಆರೋಪಿಸಿದರು.

ಅಖಿಲ ಭಾರತ ಸಿಂಡಿಕೇಟ್ ಬ್ಯಾಂಕ್ ನಿವೃತ್ತರ ಒಕ್ಕೂಟದ ಖಜಾಂಚಿ ಜಿ.ಅಜಯ್‌ಕುಮಾರ್ ಮಾತನಾಡಿ, ಇತರೆ ಇಲಾಖೆಯ ನಿವೃತ್ತ ನೌಕರರಿಗೆ ಕುಟುಂಬ ಪಿಂಚಣಿ ಪ್ರಮಾಣ ಶೇ 30ರಷ್ಟಿದೆ. ಬ್ಯಾಂಕ್‌ನ ನಿವೃತ್ತ ನೌಕರರಿಗೆ ಶೇ 15ರಷ್ಟಿದೆ. ಇದನ್ನು ಹೆಚ್ಚಿಸುವ ಭರವಸೆ ಈವರೆಗೆ ಈಡೇರಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಅಖಿಲ ಭಾರತ ಸಿಂಡಿಕೇಟ್ ಬ್ಯಾಂಕ್ ನಿವೃತ್ತರ ಒಕ್ಕೂಟ ಪ್ರ. ಕಾರ್ಯದರ್ಶಿ ಯು.ಅಬ್ದುಲ್ ಜಲೀಲ್ ಮಾತನಾಡಿ, ನಿವೃತ್ತಿ ಜೀವನದಲ್ಲಿ ನೌಕರರು ಅನೇಕ ಸಮಸ್ಯೆ ಎದುರಿಸಬೇಕಾಗಲಿದೆ. ಇಂತಹ ಪರಿಸ್ಥಿತಿಯಲ್ಲಿ ವಿಮಾ ಕಂಪನಿಗಳು ವ್ಯಾಪಾರಕ್ಕೆ ಇಳಿದಿವೆ ಎಂದು ಆಕ್ಷೇಪಿಸಿದರು.

ಆರೋಗ್ಯ ವಿಮೆ ಕಂತನ್ನು ಬ್ಯಾಂಕ್‌ಗಳೇ ಭರಿಸಬೇಕು. ದೊಡ್ಡ ಮೊತ್ತದ ಕಂತಿನ ಹಣ ಭರಿಸಲಾಗದು. 1 ಲಕ್ಷ ರೂ., 2 ಲಕ್ಷ ರೂ. ಮೊತ್ತಕ್ಕೆ ವಿಮಾ ಪಾಲಿಸಿ ಮೊತ್ತ ನಿಗದಿ ಮಾಡಬೇಕೆಂದು ಒತ್ತಾಯಿಸಿದರು.

ಕರ್ನಾಟಕ ರಾಜ್ಯ ಕೆನರಾ ಬ್ಯಾಂಕ್ ನಿವೃತ್ತರ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಪಿ.ಪ್ರಸಾದ್ ಗ್ರಾಚ್ಯುಟಿ ಕುರಿತು ಮಾತನಾಡಿದರು. ಕಾರ್ಯಕ್ರಮದಲ್ಲಿ ರಾಜ್ಯ ಬ್ಯಾಂಕ್ ನಿವೃತ್ತರ ಒಕ್ಕೂಟದ ಕಾರ್ಯದರ್ಶಿ ಮಲ್ಲಿಕಾರ್ಜುನ ಮದಿನೂರು, ದಾವಣಗೆರೆ-ಚಿತ್ರದುರ್ಗ ಜಿಲ್ಲಾ ಬ್ಯಾಂಕ್ ನಿವೃತ್ತರ ಒಕ್ಕೂಟದ ಜಿಲ್ಲಾಧ್ಯಕ್ಷ ವಿ.ನಂಜುಂಡೇಶ್ವರ, ಪ್ರ. ಕಾರ್ಯದರ್ಶಿ ಜಿ.ರಂಗಸ್ವಾಮಿ, ದಾವಣಗೆರೆ ಜಿಲ್ಲಾ ಬ್ಯಾಂಕ್ ನೌಕರರ ಪ್ರ.ಕಾರ್ಯದರ್ಶಿ ರಾಘವೇಂದ್ರ ನಾಯರಿ ಇದ್ದರು.

Stay connected

278,741FansLike
587FollowersFollow
624,000SubscribersSubscribe

ವಿಡಿಯೋ ನ್ಯೂಸ್

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...