ರೈತರ ಸಾಲಮನ್ನಾಕ್ಕೆ  ಒತ್ತಾಯಿಸಿ  ಎಐಕೆಕೆಎಂಎಸ್ ಪ್ರತಿಭಟನೆ

ದಾವಣಗೆರೆ: ರೈತರ ಸಾಲಮನ್ನಾ, ಬರ ಪರಿಹಾರ ವಿತರಣೆ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ(ಎಐಕೆಕೆಎಂಎಸ್) ಪದಾಧಿಕಾರಿಗಳು ಮಂಗಳವಾರ ಹೆಬ್ಬಾಳು ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿದರು.
ರೈತರ ಸಾಲಮನ್ನಾ, ಬರ ಪರಿಹಾರ ವಿತರಣೆ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮಂಗಳವಾರ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ(ಎಐಕೆಕೆಎಂಎಸ್) ಪದಾಧಿಕಾರಿಗಳು ಹೆಬ್ಬಾಳು ಗ್ರಾಮ ಪಂಚಾಯಿತಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.
ಅಖಿಲ ಭಾರತ ಬೇಡಿಕೆ ದಿನಗಳ ಭಾಗವಾಗಿ ಪ್ರತಿಭಟನೆ ನಡೆಸಿದ ಬಳಿಕ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮೂಲಕ ಪ್ರಧಾನಿ ಹಾಗೂ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
ಜಿಲ್ಲಾ ಸಂಘಟಕ ಮಂಜುನಾಥ ರೆಡ್ಡಿ ಮಾತನಾಡಿ, ಇದುವರೆಗಿನ ಸರ್ಕಾರಗಳ ನೀತಿಗಳಿಂದಾಗಿ ರೈತರ ಬದುಕು ದುಸ್ಥಿತಿಗೆ ಬಂದಿದೆ. ಅವರ ಬೆನ್ನೆಲುಬನ್ನೇ ಮುರಿದುಹಾಕಲಾಗಿದೆ. ಸಾಲದ ಸುಳಿಯಲ್ಲಿ ಸಿಲುಕಿಸಿ ಆತ್ಮಹತ್ಯೆಗೆ ಮೊರೆಹೋಗುವಂತೆ ಮಾಡಿವೆ. ರೈತರು ಬಳಸುವ ಗೊಬ್ಬರ, ಬೀಜ, ಕೀಟನಾಶಕ ವ್ಯವಸಾಯಕ್ಕೆ ಬಳಸುವ ಸಲಕರಣೆ ಮತ್ತು ಯಂತ್ರಗಳ ಬೆಲೆಗಳು ಬಾರಿ ದುಬಾರಿಯಾಗಿ ಉತ್ಪಾದನಾ ವೆಚ್ಚ ಗಗನಕ್ಕೇರಿದೆ. ಆದರೆ, ಉತ್ಪನ್ನಗಳ ಬೆಲೆ ಏರಿಕೆ ಇಲ್ಲದೆ ನಷ್ಟಕ್ಕೀಡಾಗುತ್ತಿದ್ದಾರೆ ಎಂದು ದೂರಿದರು.
ರೈತರು ಭೂಮಿ ಮಾರಿಕೊಂಡು ಕೃಷಿ ಕಾರ್ಮಿಕನಾಗುತ್ತಿದ್ದಾರೆ. ಹವಾಮಾನ ವೈಪರೀತ್ಯದಿಂದಾಗಿ ಕೆಲವೊಮ್ಮೆ ಅತಿ, ಅನಾವೃಷ್ಟಿಗೆ ಸಿಲುಕಿ ಕಂಗಾಲಾಗುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಜೀವನಕ್ಕಾಗಿ ನಗರ, ಪಟ್ಟಣಗಳಿಗೆ ವಲಸೆ ಹೋಗಬೇಕಾದ ಪರಿಸ್ಥಿತಿ ಇದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ನ್ಯಾಯೋಚಿತ ಬೇಡಿಕೆ ಈಡೇರಿಸುವಂತಾಗಬೇಕು ಎಂದು ಒತ್ತಾಯಿಸಿದರು.
ಕನಿಷ್ಠ ಬೆಂಬಲ ಬೆಲೆಯನ್ನು ಕಾನೂನುಬದ್ಧ ಮಾಡುವ ಜತೆಗೆ ರೈತರ ಸಾಲಮನ್ನಾ ಮಾಡಬೇಕು. ರೈತರ ಆತ್ಮಹತ್ಯೆಗಳನ್ನು ತಡೆಗಟ್ಟಲು ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ನರೇಗಾ ಯೋಜನೆಯಡಿ ಕೂಲಿಕಾರ್ಮಿಕರಿಗೆ ವರ್ಷಪೂರ್ತಿ ಕೆಲಸ ನೀಡಿ, ದಿನದ ಕೂಲಿಯನ್ನು 600 ರೂ.ಗೆ  ಹೆಚ್ಚಿಸಬೇಕು. ಬೀಜ, ಗೊಬ್ಬರ, ಕೀಟನಾಶಕ ಹಾಗೂ ಇನ್ನಿತರ ವಸ್ತುಗಳನ್ನು ಸಬ್ಸಿಡಿ ದರದಲ್ಲಿ ನೀಡಬೇಕು. ಗುಣಮಟ್ಟ ಪರೀಕ್ಷೆಯನ್ನು ಹಿಂತೆಗೆದು ಹಾಲಿನ ಪ್ರೋತ್ಸಾಹ ಧನವನ್ನು 10 ರೂ.ಗೆ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.
ಸಂಘಟನೆಯ ಜಿಲ್ಲಾಧ್ಯಕ್ಷ ಮಧು ತೊಗಲೇರಿ, ಉಪಾಧ್ಯಕ್ಷ ಬಸವರಾಜಪ್ಪ ನೀರ್ಥಡಿ, ಸಹ ಕಾರ್ಯದರ್ಶಿ ಲೋಕೇಶ್ ನೀರ್ಥಡಿ, ನಾಗರಾಜ್ ರಾಮಗೊಂಡನಹಳ್ಳಿ , ರಾಜು, ಚಂದ್ರಪ್ಪ ಹೆಬ್ಬಾಳು,  ಗೋವಿಂದಪ್ಪ ಹೆಬ್ಬಾಳು, ಗುಡಾಳ್ ರಾಜಪ್ಪ , ಬೀರಲಿಂಗಪ್ಪ ಇತರರು ಇದ್ದರು

Share This Article

ಭಗವಂತ ಶ್ರೀರಾಮನ ಜೀವನದ ಈ 5 ತತ್ವವನ್ನು ಅಳವಡಿಸಿಕೊಳ್ಳಿ | Success Tips

ಭಾರತದಲ್ಲಿ ಶ್ರೀರಾಮನನ್ನು ಅತಿ ಹೆಚ್ಚು ಪೂಜಿಸಲಾಗುತ್ತದೆ. ಲಂಕಾದ ರಾವಣನ ಮೇಲೆ ಶ್ರೀರಾಮನ ವಿಜಯವನ್ನು ಇಂದಿಗೂ ದಸರಾ…

ಅತಿಯಾಗಿ ಯೋಚಿಸುವುದನ್ನು ನಿಲ್ಲಿಸಿ! ಸೈಲೆಂಟ್ ಆಗಿ ನಿಮ್ಮನ್ನು ಕಿಲ್ಲ ಮಾಡುತ್ತೆ Over Thinking ಅಭ್ಯಾಸ…

ಬೆಂಗಳೂರು:  ಇಂದಿನ ಬಿಡುವಿಲ್ಲದ ಜೀವನದಲ್ಲಿ ನಾವೆಲ್ಲರೂ ಸಣ್ಣ ಪುಟ್ಟ ವಿಚಾರಗಳನ್ನು ಹೆಚ್ಚು ಯೋಚಿಸುತ್ತೇವೆ ( Over…

ಹೆಂಗಸರು ಪ್ರತಿದಿನ ಹೂವು ಮುಡಿಯುವುದರಿಂದ ಆಗುವ ಲಾಭಗಳೇನು?…Wearing Flower

ಬೆಂಗಳೂರು:  ಹೆಣ್ಣುಮಕ್ಕಳು ತಲೆಗೆ ಎಣ್ಣೆ ಹಚ್ಚಿ, ತಲೆ ಬಾಚಿಕೊಂಡು, ನೀಟಾಗಿ ಹೆಣೆದು, ಹೂವಿನಿಂದ ( Wearing…