ಸಮಗ್ರ ವ್ಯಕ್ತಿತ್ವ ವಿಕಾಸದ ಶಿಕ್ಷಣ ಅಗತ್ಯ

Latest News

ನಿವೇಶನ ನೀಡಲು ಮೀನಮೇಷ

ಶೃಂಗೇರಿ: ತಾಲೂಕು ಕಚೇರಿ ದನದ ದೊಡ್ಡಿಯಾಗಿದೆ. ಬಡವರಿಗೆ ನಿವೇಶನ ನೀಡಲು ಜಾಗವೇ ಇಲ್ಲ ಎನ್ನುವ ಅಧಿಕಾರಿಗಳು ಮಾನವೀಯತೆ ಮರೆಯುತ್ತಿದ್ದಾರೆ. ಹಾಗಿದ್ದರೆ ಕಚೇರಿಗೆ ಬೀಗ...

ಶಾಸಕರ ಅನುದಾನದಲ್ಲಿ ಶುದ್ಧ ಗಂಗಾ ಘಟಕ

ಅಜ್ಜಂಪುರ: ಚುನಾವಣೆ ವೇಳೆ ಸಾಕಷ್ಟು ನಿರೀಕ್ಷೆ ಇರಿಸಿಕೊಂಡು ಗ್ರಾಮೀಣ ಮತದಾರರು ನನ್ನ ಕೈಹಿಡಿದಿದ್ದಾರೆ. ಅವರ ಋಣ ತೀರಿಸುವ ಹೊಣೆ ನನ್ನ ಮೇಲಿರುವುದರಿಂದ ಗ್ರಾಮೀಣ...

ಸಚಿವ, ಅಧಿಕಾರಿಗಳನ್ನು ಸೇವೆಯಿಂದ ವಜಾಗೊಳಿಸಿ

ಚಿಕ್ಕಮಗಳೂರು: ಡಾ. ಅಂಬೇಡ್ಕರ್ ಒಬ್ಬರೇ ಸಂವಿಧಾನ ಬರೆದಿಲ್ಲ ಎಂದು ಸುತ್ತೋಲೆ ಹೊರಡಿಸುವ ಮೂಲಕ ರಾಜ್ಯ ಶಿಕ್ಷಣ ಇಲಾಖೆ ಅಂಬೇಡ್ಕರ್ ಅವರನ್ನು ಅಪಮಾನಿಸಿದೆ ಎಂದು...

ಇನ್ನು ನಾಲ್ಕೈದು ದಿನಗಳಲ್ಲಿ ಮಹಾರಾಷ್ಟ್ರದಲ್ಲಿ ಶಿವಸೇನೆ-ಕಾಂಗ್ರೆಸ್​-ಎನ್​ಸಿಪಿ ಮೈತ್ರಿ ಸರ್ಕಾರ ರಚನೆ; ಇಂದು ಸಂಜೆ ನಡೆದ ಸಭೆಯಲ್ಲಿ ಮಹತ್ವದ ನಿರ್ಧಾರ

ಮುಂಬೈ: ಇಂದು ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್​ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ 50 ನಿಮಿಷ ಮಾತುಕತೆ ನಡೆಸಿದ್ದಾರೆ. ಅದಾದ ಬಳಿಕ ಎನ್​ಸಿಪಿ ಹಾಗೂ...

ಕಲ್ಲು ಪಾಚಿ ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿ ಬಂಧನ

ಪಿರಿಯಾಪಟ್ಟಣ : ಪಟ್ಟಣ ವ್ಯಾಪ್ತಿಯ ತಾತನಹಳ್ಳಿ ಗೇಟ್ ಸಮೀಪ ಗುರುವಾರ ಅರಣ್ಯ ಪ್ರದೇಶಗಳಲ್ಲಿ ದೊರಕುವ ಕಲ್ಲು ಪಾಚಿಯನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ...

ದಾವಣಗೆರೆ: ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಾಸ ಹಾಗೂ ಸಾಮರ್ಥ್ಯ ವೃದ್ಧಿ ಮಾಡುವ ಶಿಕ್ಷಣ ಇಂದಿನ ಅಗತ್ಯವಾಗಿದೆ ಎಂದು ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ಚೇರ್ಮನ್ ಹಾಗೂ ವ್ಯವಸ್ಥಾಪಕ ನಿರ್ದೇಶಕ ರಾಘವೇಂದ್ರ ಔರಾದಕರ್ ಹೇಳಿದರು.

ದಾವಣಗೆರೆ ವಿಶ್ವವಿದ್ಯಾಲಯದ ಜ್ಞಾನಸೌಧದಲ್ಲಿ ಬುಧವಾರ ಆಯೋಜಿಸಿದ್ದ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಕೇವಲ ಸಾಕ್ಷರರನ್ನಾಗಿ ಮಾಡುವುದು ಶಿಕ್ಷಣದ ಉದ್ದೇಶವಾಗದೇ ವಿದ್ಯಾವಂತರನ್ನು ಸೃಷ್ಟಿಸಬೇಕಿದೆ ಎಂದರು.

ವಿದ್ಯಾರ್ಥಿಗಳು ಪುಸ್ತಕದ ಹುಳುಗಳಾಗದೇ ಮೂಲ ವಿಷಯದ ಜ್ಞಾನ ಸಂಪಾದಿಸಬೇಕು. ಅಂಕಗಳೇ ಮುಖ್ಯವಲ್ಲ, ಕೆಲವೊಮ್ಮೆ ವಿಫಲರಾದರೂ ಅದೊಂದು ಅನುಭವ ಎಂದು ಭಾವಿಸಿ ಮುನ್ನುಗ್ಗಬೇಕು ಎಂದು ಕಿವಿಮಾತು ಹೇಳಿದರು.

ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು. ಪ್ರಶ್ನಿಸುವ ಗುಣವನ್ನು ಮೈಗೂಡಿಸಿಕೊಳ್ಳಬೇಕು. ಪ್ರತಿಯೊಂದು ವಿಷಯದ ಬಗ್ಗೆ ಆಳವಾಗಿ ತಿಳಿದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಇಂದಿನ ಸ್ಪರ್ಧಾತ್ಮಕ ಪ್ರಪಂಚದಲ್ಲಿ ಸಂವಹನ ಕೌಶಲ ವೃದ್ಧಿಸಿಕೊಳ್ಳಬೇಕು. ಬದ್ಧತೆ ಮತ್ತು ಶಿಸ್ತು ಬಹಳ ಮುಖ್ಯ. ನೈತಿಕತೆಯ ಮಾರ್ಗದಲ್ಲಿ ನಾವು ಸಾಗಬೇಕು. ಯಶಸ್ಸಿನ ಮೆಟ್ಟಿಲುಗಳನ್ನು ಹಂತ ಹಂತವಾಗಿ ಹತ್ತಬೇಕು. ನಮ್ಮೊಳಗೆ ಅಂಥದೊಂದು ಸತ್ವ ಇದ್ದಾಗ ಮಾತ್ರ ಎತ್ತರಕ್ಕೆ ಬೆಳೆಯಲು ಸಾಧ್ಯ ಎಂದು ತಿಳಿಸಿದರು.

ವಿದ್ಯಾರ್ಥಿಗಳು ಸಮಾಜದಲ್ಲಿ ನಡೆಯುತ್ತಿರುವ ದೈನಂದಿನ ವಿದ್ಯಮಾನಗಳ ಬಗ್ಗೆ ಅರಿವು ಹೊಂದಿರಬೇಕು. ಸಕಾರಾತ್ಮಕ ಆಲೋಚನೆಗಳನ್ನು ಮಾಡಬೇಕು ಎಂದು ಹೇಳಿದರು.

ವಿವಿಯ ಹಣಕಾಸು ಅಧಿಕಾರಿ ಜೆ.ಕೆ.ರಾಜು ಇದ್ದರು. ಕುಲಸಚಿವ ಪ್ರೊ.ಪಿ.ಕಣ್ಣನ್ ಸ್ವಾಗತಿಸಿದರು. ಮೌಲ್ಯಮಾಪನ ಕುಲಸಚಿವ ಬಸವರಾಜ ಬಣಕಾರ್ ವಂದಿಸಿದರು.

ಮೈಕ್ರೋಬಯಾಲಜಿ ವಿಷಯದ ಪ್ರಾಧ್ಯಾಪಕ ಪ್ರೊ.ಶಿಶುಪಾಲ್ ಅವರು ವಿವಿ ಬೆಳೆದು ಬಂದ ದಾರಿ ಮತ್ತು ದಶಮಾನೋತ್ಸವದ ವರದಿ ವಾಚಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ರಾಜ್‌ಕುಮಾರ್ ನಿರೂಪಿಸಿದರು. ವಿವಿಧ ನಿಕಾಯಗಳ ಡೀನ್‌ಗಳಾದ ಪ್ರೊ.ಕೆ.ಬಿ.ರಂಗಪ್ಪ, ಪ್ರೊ.ಕೆ.ಲಕ್ಷ್ಮಣ್, ಪ್ರೊ. ಗಾಯತ್ರಿ ದೇವರಾಜ್, ಸಿಂಡಿಕೇಟ್ ಸದಸ್ಯರು ಭಾಗವಹಿಸಿದ್ದರು.

ಕಾಯಕ ಜೀವಿಗಳಾಗಿ: ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಮಾಡುವ ಕೆಲಸಗಳು ಸತ್ಯಶುದ್ಧ ಕಾಯಕದಂತೆ ಇರಬೇಕು ಎಂದು ಕುಲಪತಿ ಪ್ರೊ.ಎಸ್.ವಿ.ಹಲಸೆ ಹೇಳಿದರು. ಸರಿಯಾಗಿ ಪಾಠ ಮಾಡುವುದು ಶಿಕ್ಷಕರ ಕಾಯಕವಾದರೆ, ಅದನ್ನು ಮನಸಿಟ್ಟು ಕೇಳುವುದು ವಿದ್ಯಾರ್ಥಿಗಳ ಕಾಯಕ. ಹಾಗಾದಾಗ ಸಾಧನೆ ಹಾದಿ ಸುಲಭ. ವಿದ್ಯಾರ್ಥಿಗಳು ಮೊಬೈಲ್ ಬಳಕೆ ಕಡಿಮೆ ಮಾಡಬೇಕು. ಜೀವನದಲ್ಲಿ ಗುರಿ ಇರಬೇಕು, ನಮಗೆ ನಾವೇ ಗುರುವಾಗಬೇಕು ಎಂದು ತಿಳಿಸಿದರು.

ಸಹೋದರ ವಿವಿಗಳು: ಕುವೆಂಪು ವಿವಿ ಮತ್ತು ದಾವಣಗೆರೆ ವಿವಿಗಳು ಸಹೋದರ ವಿಶ್ವವಿದ್ಯಾಲಯಗಳಾಗಿದ್ದು, ಪರಸ್ಪರ ಹೊಂದಾಣಿಕೆಯಿಂದ ಕೆಲಸ ಮಾಡಿ ಎರಡೂ ಸಂಸ್ಥೆಗಳನ್ನು ಎತ್ತರಕ್ಕೆ ಬೆಳೆಸೋಣ ಎಂದು ಕುವೆಂಪು ವಿವಿಯ ನೂತನ ಕುಲಪತಿ ಪ್ರೊ.ಬಿ.ಪಿ.ವೀರಭದ್ರಪ್ಪ ಹೇಳಿದರು.

ಉಭಯ ವಿವಿಗಳ ನಡುವೆ ಒಪ್ಪಂದಗಳನ್ನು ಮಾಡಿಕೊಂಡು ಪರಸ್ಪರ ಪೂರಕವಾಗಿ ಕೆಲಸ ಮಾಡೋಣ. ಅದಕ್ಕೆ ಬೇಕಾದ ಬೆಂಬಲವನ್ನು ತಾವು ನೀಡುವುದಾಗಿ ಭರವಸೆ ನೀಡಿದರು.

ದೇಶದ 800 ವಿವಿಗಳ ಪೈಕಿ ಕುವೆಂಪು ವಿಶ್ವವಿದ್ಯಾಲಯ 73ನೇ ಸ್ಥಾನದಲ್ಲಿದೆ. ಆ ವಿವಿಯ ವಿಜ್ಞಾನ ವಿಭಾಗವು ದೇಶದಲ್ಲೇ 43ನೇ ಸ್ಥಾನದಲ್ಲಿದೆ. ಅಲ್ಲಿ ಆಗಿರುವ ಸಾಧನೆಯನ್ನು ಇಲ್ಲಿಯವರೂ ಮಾಡುವಂತಾಗಬೇಕು ಎಂದು ಹಾರೈಸಿದರು.

ವಿಶ್ವದ ವಿವಿಧ ವಿವಿಗಳಿಗೆ ಭೇಟಿ ನೀಡುತ್ತೇನೆ. ಅಲ್ಲಿನ ಶಿಕ್ಷಣ ತಜ್ಞರು, ವಿದ್ವಾಂಸರನ್ನು ಕುವೆಂಪು ವಿವಿ ಮತ್ತು ದಾವಣಗೆರೆ ವಿವಿಗಳಿಗೆ ಕರೆಸುವುದಾಗಿ ತಿಳಿಸಿದರು.

ತಾವು ದಾವಣಗೆರೆ ವಿವಿಯ ಮಣ್ಣಿನ ಮಗ. ನನಗಿರುವ ಅನುಭವವನ್ನು ಧಾರೆಯೆರೆದು ಕುವೆಂಪು ವಿವಿಯನ್ನು ರಾಮರಾಜ್ಯವಾಗಿಸಲು ಪ್ರಯತ್ನಿಸುತ್ತೇನೆ ಎಂದು ಭರವಸೆ ನೀಡಿದರು.

ದೆಹಲಿ, ಮುಂಬೈ, ಚೆನ್ನೈ ಸ್ಕೂಲ್ ಆಫ್ ಎಕನಾಮಿಕ್ಸ್ ಮಾದರಿಯಲ್ಲಿ ಕುವೆಂಪು ವಿವಿಯಲ್ಲಿ ಸಹ್ಯಾದ್ರಿ ಸ್ಕೂಲ್ ಆಫ್ ಎಕನಾಮಿಕ್ಸ್‌ನ್ನು ಮಾಡುವ ಉದ್ದೇಶವಿದೆ ಎಂದು ತಿಳಿಸಿದರು.

- Advertisement -

Stay connected

278,636FansLike
573FollowersFollow
611,000SubscribersSubscribe

ವಿಡಿಯೋ ನ್ಯೂಸ್

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ...

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​ ಬೆಲ್ಟ್​ ಹಾಕಿಕೊಂಡಿರುವುದಿಲ್ಲ...ಅದರೊಟ್ಟಿಗೆ ಬೇಕಾಬಿಟ್ಟಿ ಚಾಲನೆ ಬೇರೆ....

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ ಹೆಸರಿನಲ್ಲಿ ವೈರಲ್​ ಆಗಿದ್ದ ವಿಡಿಯೋದ ಅಸಲಿಯತ್ತು...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...

VIDEO| ಮೀಮ್ಸ್​ ವಿಡಿಯೋ ಹರಿಬಿಡುವ ಮೂಲಕ ಸೋದರ ರಮೇಶ್​ ಜಾರಕಿಹೊಳಿಗೆ...

ಬೆಳಗಾವಿ: ಗೋಕಾಕ್​ ಕ್ಷೇತ್ರದ ಉಪಚುನಾವಣೆಯ ಕದನ ತೀವ್ರ ಕುತೂಹಲ ಮೂಡಿಸಿದೆ. ಸಹೋದರರ ನಡುವಿನ ಜಿದ್ದಾಜಿದ್ದಿಯೇ ಅದಕ್ಕೆ ನೇರ ಕಾರಣವಾಗಿದೆ. ಕಾಂಗ್ರೆಸ್​ಗೆ ಗುಡ್​ಬೈ ಹೇಳಿ ಬಿಜೆಪಿ ಸೇರಿಕೊಂಡಿರುವ ಸೋದರ ರಮೇಶ್​ ಜಾರಕಿ...

VIDEO| ಶಾಸಕ ತನ್ವೀರ್​ ಸೇಠ್​ ಹಲ್ಲೆ ಪ್ರಕರಣ: ಪೊಲೀಸ್​ ವಿಚಾರಣೆ...

ಮೈಸೂರು: ಕಾಂಗ್ರೆಸ್​ ಶಾಸಕ ಹಾಗೂ ಮಾಜಿ ಸಚಿವ ತನ್ವೀರ್‌ ಸೇಠ್ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದ ಪೊಲೀಸ್​ ವಿಚಾರಣೆಯ ವೇಳೆ ಸ್ಪೋಟಕ ಮಾಹಿತಿಗಳು ಬಹಿರಂಗವಾಗುತ್ತಿದೆ. ತನ್ವೀರ್‌ ಸೇಠ್ ಹತ್ಯೆಗೆ ಈ ಹಿಂದೆ...

VIDEO: ಗೋಕಾಕ್​ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಲಖನ್​, ಸತೀಶ್​ ನಾಮಪತ್ರ ಸಲ್ಲಿಕೆ;...

ಗೋಕಾಕ್​: ಡಿಸೆಂಬರ್​ 5ಕ್ಕೆ ಉಪಚುನಾವಣೆ ನಡೆಯಲಿದ್ದು ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಹುತೇಕ ಅನರ್ಹರೆಲ್ಲ ತಮ್ಮ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಆದರೆ ಇವತ್ತು ಕುತೂಹಲ ಮೂಡಿಸಿದ್ದು ಗೋಕಾಕ್​ ಕ್ಷೇತ್ರ. ಇಲ್ಲಿ ಬಿಜೆಪಿಯಿಂದ ರಮೇಶ್​...