ದಾವಣಗೆರೆ: ಕೇಂದ್ರ ಸರ್ಕಾರ ರಾಜ್ಯಕ್ಕೆ ಅನುದಾನ ಕೊಡದೆ ನಿರ್ಲಕ್ಷಿಸಿರುವುದು ಹಾಗೂ ಭಾರತ್ ಅಕ್ಕಿ ವಿತರಣೆ ಸ್ಥಗಿತಗೊಳಿಸಿದ್ದನ್ನು ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಭಾನುವಾರ ಚೊಂಬುಗಳ ಪ್ರದರ್ಶನದೊಂದಿಗೆ ನಗರದಲ್ಲಿ ಪ್ರತಿಭಟನೆ ನಡೆಸಿದರು.
ಜಯದೇವ ವೃತ್ತದಲ್ಲಿ ಜಮಾಯಿಸಿ ಬಹಿರಂಗ ಸಭೆ ನಡೆಸಿ ನರೇಂದ್ರ ಮೋದಿ ಸರ್ಕಾರದ ಧೋರಣೆ ಖಂಡಿಸಿದರು. ಧಿಕ್ಕಾರ ಕೂಗಿದರು.
ಜಿಲ್ಲಾ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಮೆರವಣಿಗೆಯಲ್ಲಿ ಹೊರಡುತ್ತಿದ್ದಂತೆ ತಡೆದ ಪೊಲೀಸರು 60ಕ್ಕೂ ಹೆಚ್ಚು ಕಾರ್ಯಕರ್ತರನ್ನು ಬಂಧಿಸಿ, ಕವಾಯತು ಮೖದಾನದಲ್ಲಿ ಬಿಡುಗಡೆ ಮಾಡಿದರು.
.ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಬಿ. ಮಂಜಪ್ಪ ಮಾತನಾಡಿ, ರಾಜ್ಯದಿಂದ ಬೃಹತ್ ಪ್ರಮಾಣದ ತೆರಿಗೆ ಕೇಂದ್ರಕ್ಕೆ ಹೋಗುತ್ತಿದ್ದರೂ ಬಜೆಟ್‌ನಲ್ಲಿ ರಾಜ್ಯವನ್ನು ಕಡೆಗಣಿಸಿದ ಬಿಜೆಪಿ, ತಮ್ಮ ಮಿತ್ರ ಪಕ್ಷದ ರಾಜ್ಯಕ್ಕೆ ಹೆಚ್ಚಿನ ಅನುದಾನ ಮೀಸಲಿಟ್ಟು ಕರ್ನಾಟಕಕ್ಕೆ ಮೋಸ ಮಾಡಿದ್ದಾರೆ ಎಂದು ದೂರಿದರು.
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸದನದಲ್ಲಿ ಪ್ರಕಟಿಸಿದಂತೆ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ. ನೀಡಲಿಲ್ಲ. ಬಡವರಿಗೆ ಭಾರತ್ ಬ್ರ್ಯಾಂಡ್ ಅಕ್ಕಿ ನೀಡುತ್ತೇವೆ ಎಂದಿದ್ದ ಸರ್ಕಾರ ಅದನ್ನೂ ನಿಲ್ಲಿಸಿದೆ ಎಂದು ಟೀಕಿಸಿದರು.
ಕೇಂದ್ರ ಸರ್ಕಾರವು ತನ್ನ ಅಧಿಕಾರ ಭದ್ರ ಪಡಿಸಿಕೊಳ್ಳುವಲ್ಲಿ ನಮ್ಮ ರಾಜ್ಯದ ಹಣವನ್ನು ಬೇರೆ ರಾಜ್ಯಗಳಿಗೆ ಸುರಿಯುತ್ತಿರುವುದರ ಬಗ್ಗೆ ರಾಜ್ಯದ ಜನ ಚಿಂತನೆ ಮಾಡಬೇಕಿದೆ ಎಂದರು.
ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಸ್ಥಿರವಾಗಿದ್ದರೂ ಇದನ್ನು ಕೆಡವಲು ಬಿಜೆಪಿ- ಜೆಡಿಎಸ್ ಪಕ್ಷಗಳು ಷಡ್ಯಂತ್ರ ನಡೆಸಿವೆ. ರಾಜ್ಯಪಾಲರನ್ನು ಕೖಗೊಂಬೆ ಮಾಡಲಾಗುತ್ತಿದೆ ಎಂದು ದೂರಿದರು.
ಮೈತ್ರಿ ಪಕ್ಷಗಳು ತಮ್ಮ ಅಕ್ರಮಗಳನ್ನು ಮುಚ್ಚಿಕೊಳ್ಳಲು ಪಾಪದ ಪಾದಯಾತ್ರೆ ನಡೆಸಲು ಮುಂದಾಗಿವೆ. ಭ್ರಷ್ಟರಹಿತ ಆಡಳಿತ ನಡೆಸಿರುವ ಸಿದ್ದರಾಮಯ್ಯನವರ ರಾಜೀನಾಮೆಗೆ ಒತ್ತಾಯಿಸುವುದು ಸರಿಯಲ್ಲ. ಪಾದಯಾತ್ರೆ ನಿಲ್ಲದಿದ್ದಲ್ಲಿ ರಾಜ್ಯಾದ್ಯಂತ ಬಿಜೆಪಿ ಸಂಸದರ ಕಚೇರಿ ಎದುರು ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ ಎಂದು ಎಚ್ಚರಿಸಿದರು.
ರಾಜ್ಯದ ಪಾಲಿನ ಅನುದಾನ ಕೊಡುವಲ್ಲಿ ವಿಫಲವಾದ ಬಿಜೆಪಿ ಸರ್ಕಾರ ಬೇಕೆ ಎಂಬುಧನ್ನು ಜನರು ಯೋಚಿಸಬೇಕು. ದೇಶದಲ್ಲಿ ಕಾಂಗ್ರೆಸ್ ಎದ್ದು ಬರುತ್ತಿದೆ. ಜನರು ಪಕ್ಷಕ್ಕೆ ಅಧಿಕಾರ ನೀಡಿದ್ದಾರೆ. ದಾವಣಗೆರೆ ದೂಡಾದಲ್ಲೂ ಬಿಜೆಪಿಗರು ಮಾಡಿದ ಹಗರಣ ಮುಂದೆ ಬೆಳಕಿಗೆ ತರಲಾಗುವುದು ಎಂದರು.
ಪಾಲಿಕೆ ಸದಸ್ಯ ಚಮನ್‌ಸಾಬ್ ಮಾತನಾಡಿ, ಬಿಜೆಪಿಯವರು ಗವರ್ನರ್ ಕಚೇರಿಯನ್ನು ಬಿಜೆಪಿ ಕಚೇರಿಯಾಗಿಸಿ ರಾಜಕೀಯ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಬಿಜೆಪಿ ನೆಲ ಕಚ್ಚಲಿದೆ ಎಂದು ಹೇಳಿದರು.
ಅಹಿಂದ ಮುಖಂಡ ಆನಂದಪ್ಪ ಮಾತನಾಡಿ, ಮೋದಿ ಅವರು ಕಾಂಗ್ರೆಸ್ಸೇತರ ಮುಖ್ಯಮಂತ್ರಿಗಳನ್ನು ಬಂಧಿಸುವ ಕಾರ್ಯ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರನ್ನು ಯಾವುದರಲ್ಲಿ ಬಂಧಿಸಬೇಕು ಎಂದು ತಿಳಿಯದ ಅವರು, ಇಂದು ಆಧಾರ ರಹಿತ ಪ್ರಕರಣಗಳಲ್ಲಿ ಸಿಲುಕಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.
ಮುಖಂಡ ಕೆ.ಜಿ. ಶಿವಕುಮಾರ್ ಮಾತನಾಡಿ, ಕೇಂದ್ರ ಸರ್ಕಾರವು ಬಜೆಟ್ ವಿಚಾರದಲ್ಲಿ ಮಲತಾಯಿ ದೋರಣೆ ಮಾಡಿದೆ. ಚುನಾವಣೆ ನೆಪದಲ್ಲಿ ಭಾರತ್ ಬ್ರ್ಯಾಂಡ್ ಅಕ್ಕಿ ನೀಡಿ, ವಾಪಸ್ ಅಕ್ಕಿ ನೀಡಲು ಮುಂದಾಗಿಲ್ಲ ಎಂದು ಹೇಳಿದರು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ದೂಡಾ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ, ಪಾಲಿಕೆ ಸದಸ್ಯ ಎ. ನಾಗರಾಜ್, ಎಸ್. ಮಲ್ಲಿಕಾರ್ಜುನ್, ಮೇಯರ್ ವಿನಾಯಕ ಪೈಲ್ವಾನ್, ಅಯೂಬ್ ಪೖಲ್ವಾನ್, ಗೋಣೆಪ್ಪ, ಶಾಂತಕುಮಾರ್, ಡೋಲಿ ಚಂದ್ರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಿಂಗಪ್ಪ, ಯುವರಾಜ್, ಮಂಗಳಮ್ಮ, ಶುಭಮಂಗಳಾ, ಮಂಜುಳಮ್ಭ, ದಾಕ್ಷಾಯಣಮ್ಮ, ರಾಜೇಶ್ವರಿ ಹಾಗೂ ಇತರರಿದ್ದರು.
ಭದ್ರಾ ಮೇಲ್ದಂಡೆಗೆ ಕೇಂದ್ರದಿಂದ ಸಿಗದ ಅನುದಾನ ಕಾಂಗ್ರೆಸ್ ಪ್ರತಿಭಟನೆ
ತೂಕ ಇಳಿಸಿಕೊಳ್ಳಬೇಕಾ? ಸುಮ್ಮನೆ ಈ ಹಣ್ಣು, ಸೊಪ್ಪಿನ ವಾಸನೆಯನ್ನು ಒಮ್ಮೆ ಉಸಿರಾಡಿದ್ರೆ ಸಾಕು
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಮುಂಜಾನೆ ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿದು ನೋಡಿ; ಆರೋಗ್ಯ ಸಮಸ್ಯೆಗೆ ಸಿಗುತ್ತೆ ಪರಿಹಾರ …
ಬೆಂಗಳೂರು: ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬಿಕ್ಕಳಿಕೆ ಏಕೆ ಬರುತ್ತದೆ? ಕಿರಿಕಿರಿ ಉಂಟುಮಾಡುವ ಅದನ್ನು ನಿಯಂತ್ರಿಸುವುದು ಹೇಗೆ?
ಬೆಂಗಳೂರು: ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…