More

    ಕರೊನಾ ನಿಯಂತ್ರಣಕ್ಕೆ ಮಾರ್ಗಸೂಚಿ ಜಾರಿ

    ದಾವಣಗೆರೆ: ಕರೊನಾ ಸೋಂಕು ನಿಯಂತ್ರಿಸುವ ದೃಷ್ಟಿಯಿಂದ ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.

    ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಆದೇಶದಲ್ಲಿರುವ ವಿವರಗಳನ್ನು ನೀಡಿದರು. ಮಾರ್ಗಸೂಚಿಗಳು ಬುಧವಾರ ರಾತ್ರಿ 10 ರಿಂದ ಜ.19ರ ಬೆಳಗ್ಗೆ 5 ಗಂಟೆವರೆಗೆ ಜಾರಿಯಲ್ಲಿರುತ್ತವೆ. ರಾತ್ರಿ ಕರ್ಫ್ಯೂ ಪ್ರತಿ ದಿನ ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆವರೆಗೆ, ವಾರಾಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 8 ರಿಂದ ಸೋಮವಾರ ಬೆಳಗ್ಗೆ 5 ಗಂಟೆವರೆಗೆ ಇರಲಿದೆ ಎಂದರು.

    ಸರ್ಕಾರದ ಮುಖ್ಯ ಕಾರ್ಯದರ್ಶಿ ನಿರ್ದೇಶನದಂತೆ ಜಿಲ್ಲಾ ನಿಯಂತ್ರಣ ಕೊಠಡಿ ಮತ್ತು ವಾರ್ ರೂಮ್‌ಗಳನ್ನು ಸಕ್ರಿಯ ಗೊಳಿಸಲಾಗುವುದು, ಪ್ರತಿ ತಾಲೂಕಿಗೆ ಒಂದು ನಿಯಂತ್ರಣ ಕೊಠಡಿ ಸ್ಥಾಪಿಸಲಾಗುವುದು ಎಂದು ತಿಳಿಸಿದರು.

    ಬೇರೆ ಜಿಲ್ಲೆಗಳಲ್ಲಿ ಕರೊನಾ ಪ್ರಕರಣಗಳು ಇದ್ದಕ್ಕಿದ್ದಂತೆ ದ್ವಿಗುಣವಾಗುತ್ತಿವೆ. ಸದ್ಯಕ್ಕೆ ನಮ್ಮ ಜಿಲ್ಲೆಯಲ್ಲಿ ಹೆಚ್ಚು ಪ್ರಕರಣಗಳು ಇಲ್ಲವೆಂದು ಅಸಡ್ಡೆ ತೋರದೆ ಸಾರ್ವಜನಿಕರು ಮಾರ್ಗಸೂಚಿಗಳನ್ನು ಸರಿಯಾಗಿ ಪಾಲಿಸಬೇಕು ಎಂದು ಮನವಿ ಮಾಡಿದರು.

    10ರಿಂದ ಬೂಸ್ಟರ್ ಡೋಸ್: ಜಿಲ್ಲೆಯ ಆರೋಗ್ಯ ಕಾರ್ಯಕರ್ತರು ಮತ್ತು ಪೊಲೀಸ್ ಸಿಬ್ಬಂದಿಗೆ ಜ.10ರಿಂದ ಕೋವಿಡ್ ನಿರೋಧಕ ಬೂಸ್ಟರ್ ಡೋಸ್ ನೀಡಲಾಗುವುದು ಎಂದು ಮಹಾಂತೇಶ ಬೀಳಗಿ ತಿಳಿಸಿದರು.

    ಜಿಲ್ಲೆಯಲ್ಲಿ ಇಲ್ಲ ಒಮಿಕ್ರಾನ್: ಜಿಲ್ಲೆಯಲ್ಲಿ ಒಮಿಕ್ರಾನ್‌ನ ಯಾವುದೇ ಪ್ರಕರಣ ಕಂಡುಬಂದಿಲ್ಲ. ಆದರೆ ಹರಿಹರದ ವ್ಯಕ್ತಿಯೊಬ್ಬರಿಗೆ ಸೋಂಕು ಇರುವುದು ಬೆಂಗಳೂರಿನಲ್ಲಿ ಪತ್ತೆಯಾಗಿ, ಅವರು ಅಲ್ಲಿಯೇ ಚಿಕಿತ್ಸೆ ಪಡೆದು ಈಗಾಗಲೇ ಚೇತರಿಸಿಕೊಂಡಿದ್ದಾರೆ. ನಮ್ಮ ಜಿಲ್ಲೆಯ ಒಮಿಕ್ರಾನ್ ಪ್ರಕರಣಗಳ ಪರೀಕ್ಷೆಗೆ ಮಾದರಿಗಳನ್ನು ಹಾಸನದ ಪ್ರಯೋಗಾಲಯಕ್ಕೆ ಕಳಿಸಲಾಗುವುದು. ಮುಂಬರುವ ದಿನಗಳಲ್ಲಿ ದಾವಣಗೆರೆ ಜಿಲ್ಲೆಯಲ್ಲೇ ಅಂಥ ಪ್ರಯೋಗಾಲಯ ಆರಂಭಿಸಲು ಪ್ರಯತ್ನಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts