26.8 C
Bangalore
Friday, December 13, 2019

ಸಾಮಾಜಿಕ ಬದಲಾವಣೆಯ ಅನ್ವೇಷಣೆಗಳಾಗಲಿ

Latest News

ಶಬರಿಮಲೆ ವಿಚಾರದಲ್ಲಿ ಸದ್ಯ ಯಾವುದೇ ಆದೇಶವನ್ನು ಹೊರಡಿಸಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್​

ನವದೆಹಲಿ: ಪೊಲೀಸ್​ ರಕ್ಷಣೆಯೊಂದಿಗೆ ಶಬರಿಮಲೆ ಅಯ್ಯಪ್ಪನ ಸನ್ನಿಧಿಯನ್ನು ಮಹಿಳೆಯರು ಸುರಕ್ಷಿತವಾಗಿ ಪ್ರವೇಶಿಸಲು ಕೇರಳ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಇಬ್ಬರು ಮಹಿಳಾ ಕಾರ್ಯಕರ್ತರು ಸಲ್ಲಿಸಿದ್ದ...

ತುಮಕೂರು ಸ್ಮಾರ್ಟ್‌ಸಿಟಿ ಜೆಎಂಡಿ ಎತ್ತಂಗಡಿ!

ತುಮಕೂರು: ಸ್ಮಾರ್ಟ್‌ಸಿಟಿ ಲಿಮಿಟೆಡ್ ಜಂಟಿ ವ್ಯವಸ್ಥಾಪಕ ನಿರ್ದೇಶಕ ವಿ.ಅಜಯ್ ಅವರನ್ನು ಎತ್ತಂಗಡಿ ಮಾಡಲಾಗಿದೆ. 3 ತಿಂಗಳ ಹಿಂದೇ ಸ್ಮಾರ್ಟ್‌ಸಿಟಿ ಎಂಡಿ ಜವಾಬ್ದಾರಿ ಹೊಣೆ ಹೊತ್ತಿದ್ದ ಮಹಾನಗರ...

ಕುಪ್ಪೂರು ಶ್ರೀ ಮರುಳಸಿದ್ದೇಶ್ವರ ಜಾತ್ರೆಗೆ ಸಿಎಂ ಯಡಿಯೂರಪ್ಪ ಚಾಲನೆ

ಚಿಕ್ಕನಾಯಕನಹಳ್ಳಿ: ಸುಕ್ಷೇತ್ರ ಕುಪ್ಪೂರು ಶ್ರೀಮರುಳಸಿದ್ದೇಶ್ವರ ಗದ್ದುಗೆ ಜಾತ್ರೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಗುರುವಾರ ಚಾಲನೆ ನೀಡಿದ್ದು, ನಾಡಿನ ವಿವಿಧೆಡೆಯಿಂದ ಸಾವಿರಾರು ಭಕ್ತರು ಜಾತ್ರೆಗೆ ಬಂದಿದ್ದರು. ಶ್ರೀಮಠದ ಆವರಣದಲ್ಲಿ ಗುರುವಾರ...

ಬಲರಾಮ್ ಕುಣಿಗಲ್ ಬಿಜೆಪಿ ಅಧ್ಯಕ್ಷ

ಕುಣಿಗಲ್: ತಾಲೂಕು ಬಿಜೆಪಿ ನೂತನ ಅಧ್ಯಕ್ಷರಾಗಿ ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎಸ್.ಬಲರಾಮ್ ಗುರುವಾರ ಅವಿರೋಧ ಆಯ್ಕೆಯಾದರು. ಪಟ್ಟಣದ ದಿಶಾ ಪಾರ್ಟಿ ಹಾಲ್‌ನಲ್ಲಿ ರಾಜ್ಯ ಬಿಜೆಪಿ...

ಭಾರತದ ಪ್ರಗತಿಗೆ ಬೇಕು ವೈಜ್ಞಾನಿಕ ಶಿಕ್ಷಣ: ಡಾ.ಡಿ.ವಿ.ಗೋಪಿನಾಥ್

ದಾವಣಗೆರೆ: ಭಾರತದ ಪ್ರಗತಿಗೆ ವೈಜ್ಞಾನಿಕ ಶಿಕ್ಷಣ ಅತ್ಯವಶ್ಯ ಎಂದು ಮುಂಬೈನ ಭಾಭಾ ಅಣು ಸಂಶೋಧನಾ ಕೇಂದ್ರದ ಜೀವ ವೈದ್ಯಕೀಯ ವಿಭಾಗದ ನಿವೃತ್ತ ನಿರ್ದೇಶಕ ಡಾ.ಡಿ.ವಿ.ಗೋಪಿನಾಥ್ ಹೇಳಿದರು. ಪಾರ್ವತಮ್ಮ...

ದಾವಣಗೆರೆ: ಸಾಮಾಜಿಕ ಬದಲಾವಣೆ ತರುವಂತಹ ಅನ್ವೇಷಣೆಗಳು ಆಗಬೇಕಿದೆ ಎಂದು ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಸಿಬಿಎಸ್‌ಸಿ ಶಾಲೆಗಳ ಸಹ ಸಂಚಾಲಕ ಗಜಾನನ ಲೋಂಡೆ ಆಶಿಸಿದರು.

ನಿಟುವಳ್ಳಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ರಾಷ್ಟ್ರೋತ್ಥಾನ ಸಿಬಿಎಸ್‌ಸಿ ಶಾಲೆಗಳ ಅನ್ವೇಷಣ್:2019-20 ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕ್ರಿಸ್ತ ಪೂರ್ವದಲ್ಲೇ ಭಾರತದಲ್ಲಿ ಅನ್ವೇಷಣೆ ನಡೆದಿದ್ದವು. ಅಂದಿನ ವೈಜ್ಞಾನಿಕ ಚಿಂತನೆಗಳು ಶ್ರೇಷ್ಠವಾಗಿದ್ದವು. ಪ್ರತಿಯೊಬ್ಬರ ಅನ್ವೇಷಣಾ ಗುಣದಿಂದಾಗಿ ವಿಜ್ಞಾನ ಮತ್ತು ತಂತ್ರಜ್ಞಾನ ಮುಂದುವರಿದಿದೆ ಎಂದು ಹೇಳಿದರು.

ಕ್ರಿ.ಪೂ. 8ನೇ ಶತಮಾನದಲ್ಲಿ ಭರತನು, ನಾಟ್ಯಶಾಸ್ತ್ರ ಕಂಡುಹಿಡಿದು ಜಗತ್ತಿಗೆ ನೀಡಿದ. ಈಗಲೂ ಅದೇ ನಾಟ್ಯ ಪದ್ಧತಿ ಚಾಲ್ತಿಯಲ್ಲಿದೆ. ಚಾಣಕ್ಯನ ಅರ್ಥಶಾಸ್ತ್ರ, ಖಗೋಳಶಾಸ್ತ್ರ ಅಧ್ಯಯನ ಮಾಡಿದ ಆರ್ಯಭಟ ಮೊದಲಾದ ಅನ್ವೇಷಣೆಗಳೂ ಈಗಲೂ ಪ್ರಸ್ತುತವಾಗಿವೆ ಎಂದರು.

ಕೃಷಿ ಕೆಲಸದಿಂದ ಕಂಪ್ಯೂಟರ್‌ವರೆಗೆ ವಿಜ್ಞಾನ ಕ್ಷೇತ್ರದಲ್ಲಿ ವಿಕಸಿತ ಸಂಶೋಧನೆಗಳಾಗುತ್ತಿವೆ. ಇದಕ್ಕೆ ಕೊನೆ ಎಂಬುದಿಲ್ಲ. ನಮ್ಮ ಜೀವನ ಸುಧಾರಣೆ, ವಿಜ್ಞಾನದ ಬೆಳವಣಿಗೆ ಮೇಲೆ ಆಧಾರಿತವಾಗಿದೆ. ನಾವೂ ಸಹ ವೈಜ್ಞಾನಿಕ ಆಲೋಚನೆ ಬೆಳೆಸಿಕೊಳ್ಳಬೇಕು. ಸಮಾಜೋಪಯೋಗಿ ಆವಿಷ್ಕಾರಗಳತ್ತ ಮಕ್ಕಳು ಪ್ರಯೋಗಶೀಲರಾಗಬೇಕು ಎಂದು ಆಶಿಸಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ರಾಷ್ಟ್ರೋತ್ಥಾನ ಪರಿಷತ್‌ನ ಪ್ರಧಾನ ಕಾರ್ಯದರ್ಶಿ ಎನ್.ದಿನೇಶ್ ಹೆಗಡೆ, ಇಂದು ಇಡೀ ವಿಶ್ವವೇ ಭಾರತದತ್ತ ದೃಷ್ಟಿ ಹಾಯಿಸಿದೆ. ಎಲ್ಲ ಕ್ಷೇತ್ರದಲ್ಲೂ ದೇಶ ಮುಂಚೂಣಿಯಲ್ಲಿದೆ. ಈಗಾಗಲೆ ಚಂದ್ರಯಾನ, ಮಂಗಳಯಾನ ಯಶಸ್ವಿಯಾಗಿವೆ. ವಿದ್ಯಾರ್ಥಿಗಳು ಸೃಜನಶೀಲತೆ ರೂಢಿಸಿಕೊಂಡಲ್ಲಿ ಮತ್ತಷ್ಟು ಅನ್ವೇಷಣೆ ಮಾಡಬಹುದು ಎಂದರು.

ಯಾವುದೇ ಅನ್ವೇಷಣೆಗಳು ದೇಶ ಮತ್ತು ಜನರ ಒಳಿತಿಗೆ ಬಳಕೆಯಾಗಬೇಕು. ಮಕ್ಕಳನ್ನು ವೈಜ್ಞಾನಿಕ ಸಂಶೋಧನೆಯತ್ತ ಪ್ರೇರೇಪಿಸಲು ಈ ಕಾರ್ಯಕ್ರಮ ಸಹಕಾರಿಯಾಗಲಿ ಎಂದು ಹೇಳಿದರು.

ತರಳಬಾಳು ಕೃಷಿ ವಿಜ್ಞಾನ ಕೇಂದ್ರ ವಿಜ್ಞಾನಿ ಡಾ.ಟಿ.ಎನ್.ದೇವರಾಜ್ ಮಾತನಾಡಿ, ಭಾರತದಲ್ಲಿ 135 ಕೋಟಿ ಜನಸಂಖ್ಯೆ ಇದೆ. 2050ರ ವೇಳೆಗೆ ವಿಶ್ವದ ಜನಸಂಖ್ಯೆ 900 ಕೋಟಿ ರೂ. ದಾಟುವ ಅಂದಾಜಿದೆ. ಇಷ್ಟು ಜನರಿಗೆ ಬೇಕಾದ ಕೃಷಿ ಆಹಾರ ಉತ್ಪಾದನೆಯೇ ನಮ್ಮ ಮುಂದಿನ ಸವಾಲಾಗಿದೆ. ಕೃಷಿ ಎಂಬುದು ಎಲ್ಲ ರಂಗಕ್ಕೂ ಮಾತೃಕ್ಷೇತ್ರ. ಕೃಷಿ ಕ್ಷೇತ್ರದಲ್ಲಿ ಸಂಶೋಧನೆಗಳು ಆಗಬೇಕಿದೆ. ಜನತೆ ಸ್ಮಾರ್ಟ್ ಆಗುವ ಜತೆಗೆ ದೇಶದ ಬೆಳವಣಿಗೆಗೆ ಸಹಕಾರಿಯಾಗಬೇಕಿದೆ ಎಂದು ಹೇಳಿದರು.

ಇನ್‌ಸ್ಪೈರ್ ಅವಾರ್ಡ್, ರಾಜ್ಯ ವಿಜ್ಞಾನ ವಸ್ತು ಪ್ರದರ್ಶನ ಮತ್ತಿತರೆ ಕಾರ್ಯಕ್ರಮದಲ್ಲಿ ಬಹುಮಾನ ಪಡೆದ ಗೋಕುಲ ಆದಿತ್ಯ, ಸೃಷ್ಟಿ, ಗೌರಿ ಶಾಮನೂರು ಮತ್ತಿತರೆ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.

Stay connected

278,748FansLike
588FollowersFollow
626,000SubscribersSubscribe

ವಿಡಿಯೋ ನ್ಯೂಸ್

VIDEO| ಬರೋಬ್ಬರಿ 20 ಕೆ.ಜಿ. ತೂಕದ ಹೆಬ್ಬಾವು ಸೆರೆಹಿಡಿದ ಮಹಿಳೆ:...

ತಿರುವನಂತಪುರ: ಮಹಿಳೆಯೊಬ್ಬರು ಸುಮಾರು 20 ಕೆ.ಜಿ. ತೂಗುವ ಬೃಹದಾಕಾರದ ಹೆಬ್ಬಾವನ್ನು ಸೆರೆಹಿಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಮೆಚ್ಚುಗೆ ಮಹಾಪೂರ ಹರಿದುಬಂದಿದೆ. ವಿಡಿಯೋದಲ್ಲಿರುವ ಮಹಿಳೆಯನ್ನು ಕೊಚ್ಚಿ ಮೂಲದ ವನ್ಯಜೀವಿ ಸಂರಕ್ಷಕಿ...

ಅತ್ಯಾಚಾರ ಪ್ರಕರಣ ಕುರಿತು ರಾಹುಲ್​ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ಗದ್ದಲ:...

ನವದೆಹಲಿ: ಅತ್ಯಾಚಾರ ಪ್ರಕರಣ ಕುರಿತು ಗುರುವಾರ ಜಾರ್ಖಂಡ್​ ಸಮಾವೇಶದಲ್ಲಿ ಕಾಂಗ್ರೆಸ್​ ಮಾಜಿ ಅಧ್ಯಕ್ಷ ಹಾಗೂ ವಯನಾಡಿನ ಹಾಲಿ ಸಂಸದ ರಾಹುಲ್​ ಗಾಂಧಿ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ....

VIDEO: 8 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಲು 40 ಅಡಿ...

ತ್ರಿಶೂರ್​: ಇಲ್ಲೋರ್ವ ಯುವಕ ಬಾವಿಯಲ್ಲಿ ಬಿದ್ದಿದ್ದ ಹೆಬ್ಬಾವನ್ನು ರಕ್ಷಿಸಲು ಹಗ್ಗದ ಮೂಲಕ ಕೆಳಗೆ ಇಳಿದು ಬಳಿಕ ಅಪಾಯಕ್ಕೆ ಸಿಲುಕಿದ ವಿಡಿಯೋವೊಂದು ವೈರಲ್​ ಆಗಿದೆ. ಈ ಘಟನೆ ನಡೆದಿದ್ದು ಕೇರಳದ ತ್ರಿಶೂಲ್​ನಲ್ಲಿ ಎನ್ನಲಾಗಿದೆ. ವಿಡಿಯೋದಲ್ಲಿ ಇರುವ...

VIDEO| ಲಕ್ಷ್ಯದ ಜೊತೆಯಲಿ ಅನಿರುದ್ಧ್; ಡೈಲಾಗ್​ ಟೀಸರ್​ ಬಿಡುಗಡೆ

ಬೆಂಗಳೂರು: ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆಮನ ಗೆದ್ದಿರುವ ನಟ ಅನಿರುದ್ಧ್ ಈಗ ‘ಲಕ್ಷ್ಯ’ಗೆ ಜತೆಯಾಗಿದ್ದಾರೆ. ಅಂದರೆ ‘ಲಕ್ಷ್ಯ’ ಸಿನಿಮಾದ ಡೈಲಾಗ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅವರು ಚಿತ್ರತಂಡದ ಜತೆ...

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....