26.8 C
Bangalore
Friday, December 13, 2019

ಫ್ಲೋರೋಸಿಸ್ ತಡೆಗೆ ಮುಂಜಾಗ್ರತೆ

Latest News

ಶಬರಿಮಲೆ ವಿಚಾರದಲ್ಲಿ ಸದ್ಯ ಯಾವುದೇ ಆದೇಶವನ್ನು ಹೊರಡಿಸಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್​

ನವದೆಹಲಿ: ಪೊಲೀಸ್​ ರಕ್ಷಣೆಯೊಂದಿಗೆ ಶಬರಿಮಲೆ ಅಯ್ಯಪ್ಪನ ಸನ್ನಿಧಿಯನ್ನು ಮಹಿಳೆಯರು ಸುರಕ್ಷಿತವಾಗಿ ಪ್ರವೇಶಿಸಲು ಕೇರಳ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಇಬ್ಬರು ಮಹಿಳಾ ಕಾರ್ಯಕರ್ತರು ಸಲ್ಲಿಸಿದ್ದ...

ತುಮಕೂರು ಸ್ಮಾರ್ಟ್‌ಸಿಟಿ ಜೆಎಂಡಿ ಎತ್ತಂಗಡಿ!

ತುಮಕೂರು: ಸ್ಮಾರ್ಟ್‌ಸಿಟಿ ಲಿಮಿಟೆಡ್ ಜಂಟಿ ವ್ಯವಸ್ಥಾಪಕ ನಿರ್ದೇಶಕ ವಿ.ಅಜಯ್ ಅವರನ್ನು ಎತ್ತಂಗಡಿ ಮಾಡಲಾಗಿದೆ. 3 ತಿಂಗಳ ಹಿಂದೇ ಸ್ಮಾರ್ಟ್‌ಸಿಟಿ ಎಂಡಿ ಜವಾಬ್ದಾರಿ ಹೊಣೆ ಹೊತ್ತಿದ್ದ ಮಹಾನಗರ...

ಕುಪ್ಪೂರು ಶ್ರೀ ಮರುಳಸಿದ್ದೇಶ್ವರ ಜಾತ್ರೆಗೆ ಸಿಎಂ ಯಡಿಯೂರಪ್ಪ ಚಾಲನೆ

ಚಿಕ್ಕನಾಯಕನಹಳ್ಳಿ: ಸುಕ್ಷೇತ್ರ ಕುಪ್ಪೂರು ಶ್ರೀಮರುಳಸಿದ್ದೇಶ್ವರ ಗದ್ದುಗೆ ಜಾತ್ರೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಗುರುವಾರ ಚಾಲನೆ ನೀಡಿದ್ದು, ನಾಡಿನ ವಿವಿಧೆಡೆಯಿಂದ ಸಾವಿರಾರು ಭಕ್ತರು ಜಾತ್ರೆಗೆ ಬಂದಿದ್ದರು. ಶ್ರೀಮಠದ ಆವರಣದಲ್ಲಿ ಗುರುವಾರ...

ಬಲರಾಮ್ ಕುಣಿಗಲ್ ಬಿಜೆಪಿ ಅಧ್ಯಕ್ಷ

ಕುಣಿಗಲ್: ತಾಲೂಕು ಬಿಜೆಪಿ ನೂತನ ಅಧ್ಯಕ್ಷರಾಗಿ ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎಸ್.ಬಲರಾಮ್ ಗುರುವಾರ ಅವಿರೋಧ ಆಯ್ಕೆಯಾದರು. ಪಟ್ಟಣದ ದಿಶಾ ಪಾರ್ಟಿ ಹಾಲ್‌ನಲ್ಲಿ ರಾಜ್ಯ ಬಿಜೆಪಿ...

ಭಾರತದ ಪ್ರಗತಿಗೆ ಬೇಕು ವೈಜ್ಞಾನಿಕ ಶಿಕ್ಷಣ: ಡಾ.ಡಿ.ವಿ.ಗೋಪಿನಾಥ್

ದಾವಣಗೆರೆ: ಭಾರತದ ಪ್ರಗತಿಗೆ ವೈಜ್ಞಾನಿಕ ಶಿಕ್ಷಣ ಅತ್ಯವಶ್ಯ ಎಂದು ಮುಂಬೈನ ಭಾಭಾ ಅಣು ಸಂಶೋಧನಾ ಕೇಂದ್ರದ ಜೀವ ವೈದ್ಯಕೀಯ ವಿಭಾಗದ ನಿವೃತ್ತ ನಿರ್ದೇಶಕ ಡಾ.ಡಿ.ವಿ.ಗೋಪಿನಾಥ್ ಹೇಳಿದರು. ಪಾರ್ವತಮ್ಮ...

ದಾವಣಗೆರೆ: ಫ್ಲೋರೋಸಿಸ್ ಕಾಯಿಲೆಗೆ ಸೂಕ್ತ ಔಷಧವಿಲ್ಲ. ಹಾಗಾಗಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ತಹಸೀಲ್ದಾರ್ ಸಂತೋಷ್‌ಕುಮಾರ್ ತಾಲೂಕು ಅಧಿಕಾರಿಗಳಿಗೆ ಸೂಚಿಸಿದರು.

ತಹಸೀಲ್ದಾರ್ ಕಚೇರಿಯಲ್ಲಿ ಶನಿವಾರ ಏರ್ಪಡಿಸಿದ್ದ ರಾಷ್ಟ್ರೀಯ ಫ್ಲೋರೋಸಿಸ್ ತಡೆ ಹಾಗೂ ನಿಯಂತ್ರಣ, ಆರ್‌ಬಿಎಸ್‌ಕೆ ಕಾರ್ಯಕ್ರಮ ಮತ್ತು ಆಶಾ ಕುಂದುಕೊರತೆಯ ತಾಲೂಕು ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಫ್ಲೋರೈಡ್ ಹೆಚ್ಚಾಗಿರುವ ನೀರು, ಇತರೆ ಆಹಾರ ಪದಾರ್ಥಗಳು, ಔಷಧಿಗಳು ಫ್ಲೋರೋಸಿಸ್ ಮೂಲವಾಗಿದೆ. ವಯಸ್ಸು, ಲಿಂಗ ಭೇದವಿಲ್ಲದೆ ಎಲ್ಲರಲ್ಲೂ ಕಂಡುಬರುವ ಸಾಮಾನ್ಯ ಕಾಯಿಲೆಯಾಗಿದೆ ಎಂದರು.

ಫ್ಲೋರೈಡ್ ಅಂಶದ ನೀರು, ಟೂತ್‌ಪೇಸ್ಟ್ ಹಾಗೂ ಆಹಾರ ಪದಾರ್ಥಗಳ ಬಳಕೆ ತಗ್ಗಿಸಬೇಕು. ಅಂಗನವಾಡಿ, ಶಾಲೆ ಹಾಗೂ ಹಾಸ್ಟೆಲ್‌ಗಳ ಆಹಾರ ತಯಾರಿಕೆಗೆ ಶುದ್ಧ ನೀರಿನ ಘಟಕದ ನೀರನ್ನೇ ಬಳಸಬೇಕು. ವಾರಕ್ಕೆರೆಡು ಬಾರಿ ಹುಳಿಯ ಆಹಾರ ಪದಾರ್ಥವನ್ನು ನೀಡಬೇಕು. ಶಿಕ್ಷಕರ ಮೂಲಕ ಫ್ಲೋರೋಸಿಸ್ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಿ ಎಂದು ಸಲಹೆ ತಿಳಿಸಿದರು.

ಜಿಲ್ಲಾ ಫ್ಲೋರೋಸಿಸ್ ನಿಯಂತ್ರಣ ಸಲಹೆಗಾರ ಬಿ.ಎಂ.ಸಿದ್ದಯ್ಯ ಮಾತನಾಡಿ, ದಾವಣಗೆರೆ ಸೇರಿ 19 ಜಿಲ್ಲೆಗಳಲ್ಲಿ ಫ್ಲೋರೋಸಿಸ್ ಇದೆ. ದಂತ, ಮೂಳೆ ಮತ್ತು ದೇಹದ ಇತರೆ ಭಾಗಗಳಲ್ಲಿ ಈ ಕಾಯಿಲೆ ಕಾಣಬಹುದು. ಫ್ಲೋರೈಡ್‌ಯುಕ್ತ ಅಂತರ್ಜಲ, ಧೂಳು, ಗಣಿ ಕಾರ್ಖಾನೆಗಳ ಹೊಗೆ, ಕಪ್ಪು ಕಲ್ಲುಪ್ಪು, ಅಡಿಕೆ, ಹೊಗೆಸೊಪ್ಪು ಸೇವನೆ, ಸೋಡಿಯಂ ಫ್ಲೋರೈಡ್ ಮಾತ್ರೆ, ಮಂಪರು ಔಷಧಿ ಸೇವನೆಯಿಂದ ಇರು ಬರಲಿದೆ ಎಂದರು.

ಆರ್‌ಬಿಎಸ್‌ಕೆ ವೈದ್ಯಾಧಿಕಾರಿ ಡಾ.ಮಂಜುನಾಥ್ ಮಾತನಾಡಿ, ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದಡಿ ಜಿಲ್ಲೆಯ ಅಂಗನವಾಡಿ, ಶಾಲೆಗಳಲ್ಲಿ ಮಕ್ಕಳಿಗೆ ಆರೋಗ್ಯ ತಪಾಸಣೆ ನಡೆಸಿ, ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದರು.

ತಾಲೂಕು ಸಮಾಜ ಕಲ್ಯಾಣಾಧಿಕಾರಿ ಬೇಬಿ ಸುನೀತಾ, ತಾಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಚ್.ಉಮಾಪತಿ, ಕಾರ್ಯಕ್ರಮ ವ್ಯವಸ್ಥಾಪಕ ಪಿ.ವಿ.ರವಿ, ಆಶಾ ಕಾರ್ಯಕರ್ತೆಯರ ಮೇಲ್ವಿಚಾರಕಿ ಸುರೇಖಾ ಮತ್ತಿತರರಿದ್ದರು.

ಮಕ್ಕಳಿಗೆ ಸೂಕ್ತ ಟೂತ್‌ಪೇಸ್ಟ್‌ಗಳ ಬಳಸಲು ಸೂಚಿಸಬೇಕು. ಕಾಲ್ಸಿಯಂ ಉಳ್ಳ ಹಾಲು-ಬೆಲ್ಲ, ಹಸಿರುಸೊಪ್ಪು, ನುಗ್ಗೆಕಾಯಿ ಬಳಕೆ ಹೆಚ್ಚಿಸಬೇಕು. ವಿಟಮಿನ್ ಸಿ ಅಂಶಗಳುಳ್ಳ ಸೀಬೆ, ನಲ್ಲಿಕಾಯಿ, ನಿಂಬೆ, ಕ್ಯಾರೆಟ್, ಕಿತ್ತಳೆ, ಮೋಸಂಬಿ, ಪರಂಗಿಹಣ್ಣು, ಬೆಳ್ಳುಳ್ಳಿ, ಈರುಳ್ಳಿ, ಗೆಣಸು ಬಳಸಬೇಕು ಎಂದು ಜಿಲ್ಲಾ ಫ್ಲೋರೋಸಿಸ್ ನಿಯಂತ್ರಣ ಸಲಹೆಗಾರ ಬಿ.ಎಂ.ಸಿದ್ದಯ್ಯ ತಿಳಿಸಿದರು.

ದಂತ ಫ್ಲೋರೋಸಿಸ್ ಮಕ್ಕಳಲ್ಲಿ ಹೆಚ್ಚು: ದಂತ ಫ್ಲೋರೋಸಿಸ್ ಬಗೆಯು 5ರಿಂದ 8 ವರ್ಷದ ಮಕ್ಕಳಲ್ಲಿ ಹೆಚ್ಚು. ಹಲ್ಲಿನ ಮೇಲೆ ಹಳದಿ ಅಥವಾ ಕಂದು ಬಣ್ಣದ ಕಲೆಗಳು ಉಂಟಾಗಿ ಶಾಶ್ವತವಾಗಿ ಉಳಿಯುತ್ತವೆ ಎಂದು ಜಿಲ್ಲಾ ಫ್ಲೋರೋಸಿಸ್ ನಿಯಂತ್ರಣ ಸಲಹೆಗಾರ ಬಿ.ಎಂ.ಸಿದ್ದಯ್ಯ ತಿಳಿಸಿದರು. ಮೂಳೆ ಫ್ಲೋರೋಸಿಸ್‌ನಿಂದಾಗಿ ಮೂಳೆಗಳ ನೋವು, ಕೀಲುಗಳ ಬಿಗಿತ, ನರಗಳ ಸೆಳೆತದಿಂದಾಗಿ ಕತ್ತಿನ ಮೂಳೆ ಮತ್ತು ಬೆನ್ನಿನ ಎಲುಬುಗಳ ಬಾಗುವಿಕೆ, ನರಗಳ ತೊಂದರೆ, ಬೆನ್ನುಮೂಳೆಗಳ ಸಂಕುಚಿತ ಉಂಟಾಗುತ್ತದೆ. ಮೂರನೇ ವಿಧದಲ್ಲಿ ದೇಹದ ಮೃದು ಅಂಗಾಂಗಗಳಲ್ಲಿ ಸ್ನಾಯು ಹಾಗೂ ಕೆಂಪು ರಕ್ತ ಕಣಗಳು, ಜೀರ್ಣಾಂಗಗಳಲ್ಲಿ ಹರಡಿ ಹೊಟ್ಟೆನೋವು, ಭೇದಿ, ಅಜೀರ್ಣತೆ ಉಂಟಾಗುತ್ತದೆ. ಇದರಿಂದ ಸ್ನಾಯುಗಳ ದೌರ್ಬಲ್ಯ, ಅತಿ ಬಾಯಾರಿಕೆ, ಸತತ ಮೂತ್ರಕ್ಕೆ ಹೋಗುವ ತೊಂದರೆ ಬರಲಿವೆ ಎಂದರು.

Stay connected

278,748FansLike
588FollowersFollow
626,000SubscribersSubscribe

ವಿಡಿಯೋ ನ್ಯೂಸ್

VIDEO| ಬರೋಬ್ಬರಿ 20 ಕೆ.ಜಿ. ತೂಕದ ಹೆಬ್ಬಾವು ಸೆರೆಹಿಡಿದ ಮಹಿಳೆ:...

ತಿರುವನಂತಪುರ: ಮಹಿಳೆಯೊಬ್ಬರು ಸುಮಾರು 20 ಕೆ.ಜಿ. ತೂಗುವ ಬೃಹದಾಕಾರದ ಹೆಬ್ಬಾವನ್ನು ಸೆರೆಹಿಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಮೆಚ್ಚುಗೆ ಮಹಾಪೂರ ಹರಿದುಬಂದಿದೆ. ವಿಡಿಯೋದಲ್ಲಿರುವ ಮಹಿಳೆಯನ್ನು ಕೊಚ್ಚಿ ಮೂಲದ ವನ್ಯಜೀವಿ ಸಂರಕ್ಷಕಿ...

ಅತ್ಯಾಚಾರ ಪ್ರಕರಣ ಕುರಿತು ರಾಹುಲ್​ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ಗದ್ದಲ:...

ನವದೆಹಲಿ: ಅತ್ಯಾಚಾರ ಪ್ರಕರಣ ಕುರಿತು ಗುರುವಾರ ಜಾರ್ಖಂಡ್​ ಸಮಾವೇಶದಲ್ಲಿ ಕಾಂಗ್ರೆಸ್​ ಮಾಜಿ ಅಧ್ಯಕ್ಷ ಹಾಗೂ ವಯನಾಡಿನ ಹಾಲಿ ಸಂಸದ ರಾಹುಲ್​ ಗಾಂಧಿ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ....

VIDEO: 8 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಲು 40 ಅಡಿ...

ತ್ರಿಶೂರ್​: ಇಲ್ಲೋರ್ವ ಯುವಕ ಬಾವಿಯಲ್ಲಿ ಬಿದ್ದಿದ್ದ ಹೆಬ್ಬಾವನ್ನು ರಕ್ಷಿಸಲು ಹಗ್ಗದ ಮೂಲಕ ಕೆಳಗೆ ಇಳಿದು ಬಳಿಕ ಅಪಾಯಕ್ಕೆ ಸಿಲುಕಿದ ವಿಡಿಯೋವೊಂದು ವೈರಲ್​ ಆಗಿದೆ. ಈ ಘಟನೆ ನಡೆದಿದ್ದು ಕೇರಳದ ತ್ರಿಶೂಲ್​ನಲ್ಲಿ ಎನ್ನಲಾಗಿದೆ. ವಿಡಿಯೋದಲ್ಲಿ ಇರುವ...

VIDEO| ಲಕ್ಷ್ಯದ ಜೊತೆಯಲಿ ಅನಿರುದ್ಧ್; ಡೈಲಾಗ್​ ಟೀಸರ್​ ಬಿಡುಗಡೆ

ಬೆಂಗಳೂರು: ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆಮನ ಗೆದ್ದಿರುವ ನಟ ಅನಿರುದ್ಧ್ ಈಗ ‘ಲಕ್ಷ್ಯ’ಗೆ ಜತೆಯಾಗಿದ್ದಾರೆ. ಅಂದರೆ ‘ಲಕ್ಷ್ಯ’ ಸಿನಿಮಾದ ಡೈಲಾಗ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅವರು ಚಿತ್ರತಂಡದ ಜತೆ...

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....