ದಾವಣಗೆರೆ: ಭದ್ರಾ ನೀರು ಹರಿವು ಆರಂಭಗೊಂಡು 11 ದಿನ ಕಳೆದರೂ ನಾಲೆಗಳಲ್ಲಿ ನೀರು ರಭಸವಾಗಿ ಮತ್ತು ನಿಗದಿತ ಪ್ರಮಾಣದಲ್ಲಿ ಹರಿಯುತ್ತಿಲ್ಲ. ಜಿಲ್ಲಾಡಳಿತ ಕೂಡಲೆ ರೈತರ ಸಂಕಷ್ಟಕ್ಕೆ ಧಾವಿಸಿ, ಸಮರ್ಪಕ ನಿರ್ವಹಣೆಗೆ ಕ್ರಮ ವಹಿಸಬೇಕೆಂದು ಆಗ್ರಹಿಸಿ ಜಿಲ್ಲಾ ಬಿಜೆಪಿ ರೈತ ಮೋರ್ಚಾ ಪದಾಧಿಕಾರಿಗಳು ಶುಕ್ರವಾರ ಜಿಲ್ಲಾಧಿಕಾರಿ ಡಾ. ಜಿ.ಎಂ. ಗಂಗಾಧರ ಸ್ವಾಮಿ ಅವರಿಗೆ ಮನವಿಪತ್ರ ಸಲ್ಲಿಸಿದರು.
ಕಳೆದ 11 ದಿನಗಳ ಅವಧಿಯಲ್ಲಿ ಎಡ ಮತ್ತು ಬಲ ನಾಲೆಗಳಿಗೆ ಒಟ್ಟು 26309 ಕ್ಯೂಸೆಕ್ ನೀರು ಹರಿಸಲಾಗಿದೆ. ಆದರೆ ನದಿಗೆ ಹರಿಸಲಾದ 2,70,777 ಕ್ಯೂಸೆಕ್ ನೀರಿನ ಪ್ರಮಾಣವನ್ನು ಬಲದಂಡೆ ನಾಲೆಯ ಅಚ್ಚುಕಟ್ಟು ಪ್ರದೇಶಕ್ಕೆ 102 ದಿನಗಳವರೆಗೆ ಹರಿಸಬಹುದಿತ್ತು. ದಾವಣಗೆರೆ ಜಿಲ್ಲೆಯ ಯಾವ ಕೆರೆಗೂ ಇಂದಿಗೂ ಒಂದು ಹನಿ ನೀರು ತಲುಪಿಲ್ಲ ಎಂದು ಹೇಳಿಕೊಂಡರು.
ಜು. 15 ರಿಂದಲೇ ನೀರು ಹರಿಸುವಂತೆ ಆಗ್ರಹಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಗಿತ್ತು. ಆಗ ಗಮನ ಹರಿಸಿದ್ದರೆ ಕೆರೆ ಕಟ್ಟೆಗಳು, ಹಳ್ಳ ಕೊಳ್ಳಗಳು ತುಂಬುತ್ತಿದ್ದವು. ರೈತರು ಭತ್ತದ ನಾಟಿಗೆ ಬೀಜ ಚೆಲ್ಲಲು ಅನುಕೂಲವಾಗುತ್ತಿತ್ತು. ಇದ್ಯಾವುದರ ಪರಿವೆಯೇ ಇಲ್ಲದೆ ಡ್ಯಾಂ ಪೂರ್ತಿ ತುಂಬಿಸಿ ಒಮ್ಮೆಲೆ ನದಿಗೆ ನೀರನ್ನು ವ್ಯರ್ಥವಾಗಿ ಹರಿಸಲಾಗುತ್ತಿದೆ. ಇದರಿಂದ ನದಿಯ ಆಸುಪಾಸಿನ ಜನರಿಗೆ ತೊಂದರೆಯಾಗಲಿದೆ ಎಂಬ ಕನಿಷ್ಠ ಜ್ಞಾನವೂ ಇಲ್ಲವಾಗಿದೆ ಎಂದು ಹೇಳಿದರು.
ಒಂದು ಸಣ್ಣ ಕೆರೆ ಕನಿಷ್ಠ 300 ಎಕರೆ ಜಮೀನಿಗೆ ನೀರುಣಿಸಲಿದೆ. ಕೆರೆಯ ಸುತ್ತ ಏಳೆಂಟು ಕಿ.ಮೀ ವ್ಯಾಪ್ತಿಯಲ್ಲಿ ಅಂತರ್ಜಲ ಮಟ್ಟ ಕುಸಿಯುವುದಿಲ್ಲ. ಇಂತಹ ಪರೋಕ್ಷ ನೀರಾವರಿ ಬಗ್ಗೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರು ಮತ್ತು ಜಿಲ್ಲಾಡಳಿತ ಚಿಂತನೆ ನಡೆಸಬೇಕು ಎಂದು ತಿಳಿಸಿದರು.
ಡ್ಯಾಂ ತುಂಬಿದೆ ಎಂಬ ಸಂತಸದಲ್ಲೂ ನಾಲೆಯಲ್ಲಿ ನೀರಿನ ಕೊರತೆ ಕಾಡುತ್ತಿದೆ. ಕಳೆದ ಬೇಸಿಗೆ ಹಂಗಾಮಿನಲ್ಲಿ ರೈತರು ಬೀಕರ ಬರದಿಂದ ಬಸವಳಿದಿದ್ದಾರೆ. ರೈತರ ಸಹನೆಯ ಕಟ್ಟೆ ಒಡೆಯುವ ಮುನ್ನ ಜಿಲ್ಲಾಡಳಿತ ಎಚ್ಚೆತ್ತುಕೊಳ್ಳಬೇಕು. ಮಳೆಗಾಲದ ಹಂಗಾಮಿನ ಭತ್ತ ಬೆಳೆಗೆ ಸೂಕ್ತ ರೀತಿಯಲ್ಲಿ ನೀರು ಒದಗಿಸಬೇಕು.
ಕೊನೆ ಭಾಗಕ್ಕೆ ನೀರೊದಗಿಸುವ ಜತೆಗೆ ದಾವಣಗೆರೆ ಜಿಲ್ಲೆಯ ಎಲ್ಲಾ ಕೆರೆ ಕಟ್ಟೆಗಳನ್ನು ತುಂಬಿಸಿಕೊಳ್ಳಲು ಕ್ರಮ ಕೈಗೊಳ್ಳಬೇಕು. ರೈತರು ಹೊಲಗಳಲ್ಲಿ ನಿರ್ಮಿಸಿಕೊಂಡಿರುವ ಕೃಷಿ ಹೊಂಡಗಳನ್ನು ತುಂಬಿಸಲು ಕ್ರಮ ಕೈಗೊಳ್ಳಬೇಕು. ಇರುವ ನೀರನ್ನು ಸಮರ್ಥವಾಗಿ ಬಳಕೆ ಮಾಡಬೇಕು. ಡ್ಯಾಂ ತುಂಬಿದೆ ಎಂದು ನಿರ್ಲಕ್ಷ್ಯ ವಹಿಸಬಾರದು. ಎಲ್ಲಿಯೂ ನೀರು ಪೋಲಾಗದಂತೆ ಎಚ್ಚರ ವಹಿಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಕಲ್ಲಿ ಜಿಲ್ಲಾ ಬಿಜೆಪಿ ವಕ್ತಾರ ಕೊಳೇನಹಳ್ಳಿ ಬಿ.ಎಂ. ಸತೀಶ್, ದೂಡಾ ಮಾಜಿ ಅಧ್ಯಕ್ಷ ಎ.ವೈ.ಪ್ರಕಾಶ್, ಮಾಜಿ ಮೇಯರ್ ಎಚ್.ಎನ್. ಗುರುನಾಥ್, ಮುಖಂಡರಾದ ಬೇತೂರು ಸಂಗನಗೌಡ, ವಸಂತಕುಮಾರ್, ಕುಂದುವಾಡ ಗಣೇಶಪ್ಪ, ಎಚ್.ಎನ್.ಶಿವಕುಮಾರ್, ಕಲಪನಹಳ್ಳಿ ಕೆ.ಜಿ.ಉಜ್ಜಪ್ಪ, ಆನೆಕೊಂಡ ರೇವಣಸಿದ್ದಪ್ಪ, ರಮೇಶನಾಯ್ಕ, ಶಿರಮಗೊಂಡನಹಳ್ಳಿ ಮಂಜುನಾಥ, ಈಶ್ವರಪ್ಪ ಇತರರಿದ್ದರು.
ಭದ್ರಾ ನೀರು ಸಮರ್ಪಕವಾಗಿ ಹರಿಸಲು ಆಗ್ರಹ ಜಿಲ್ಲಾಡಳಿತಕ್ಕೆ ಬಿಜೆಪಿ ರೈತ ಮೋರ್ಚಾ ಮನವಿ
ಬಿಕ್ಕಳಿಕೆ ಏಕೆ ಬರುತ್ತದೆ? ಕಿರಿಕಿರಿ ಉಂಟುಮಾಡುವ ಅದನ್ನು ನಿಯಂತ್ರಿಸುವುದು ಹೇಗೆ?
ಬೆಂಗಳೂರು: ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
ಈ ದಿನಾಂಕದಂದು ಜನಿಸಿದವರು ದಾನದಲ್ಲಿ ಕರ್ಣನನ್ನು ಮೀರಿಸುತ್ತಾರೆ! ನೀವೂ ಹುಟ್ಟಿದ್ದು ಇದೇ ದಿನಾನಾ?
ಜ್ಯೋತಿಷ್ಯಶಾಸ್ತ್ರದಲ್ಲಿ ಸಂಖ್ಯಾಶಾಸ್ತ್ರವೂ ಒಂದು. ಇದರ ಪ್ರಕಾರ ವ್ಯಕ್ತಿಯ ಜನ್ಮ ದಿನಾಂಕವು ಅವನ ವ್ಯಕ್ತಿತ್ವದ ಬಗ್ಗೆ ಮತ್ತು…
ಗೋಲ್ಡನ್ ಅವರ್ ರಹಸ್ಯ: ಮುಂಜಾನೆ ಬೇಗ ಏಳುವುದರಿಂದ ಇದೆ 6 ಪ್ರಯೋಜನಗಳು
ಬೆಂಗಳೂರು: ಮನೆಯಲ್ಲಿ ಕೆಲವರು ಸೂರ್ಯೋದಯಕ್ಕೂ ಮೊದಲೇ ಏಳುವ ಅಭ್ಯಾಸ ಇಟ್ಟುಕೊಂಡಿರುತ್ತಾರೆ. ಮುಂಜಾನೆ ಬೇಗ ಏಳುವುದನ್ನು ರೂಢಿ…