25.7 C
Bangalore
Sunday, December 15, 2019

ಬಸವ ಚಿಂತನೆ ಬಿತ್ತುವ ಯತ್ನ

Latest News

ಕಳ್ಳಬಟ್ಟಿ ಸಾರಾಯಿ ಮಾರಾಟಗಾರನ ಬಂಧನ

ರಾಯಬಾಗ: ತಾಲೂಕಿನ ಮೊರಬ ಗ್ರಾಮದಲ್ಲಿ ಕಳ್ಳಬಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ, ಆರೋಪಿಯನ್ನು ಬಂಧಿಸಿ, ಆತನಿಂದ...

ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಸಮ್ಮೇಳನ

ಉಡುಪಿ: ತುಳು ಭಾಷಿಗ ತುಳು ಶಿವಳ್ಳಿ ಬ್ರಾಹ್ಮಣರು ಮಾತೃಭಾಷೆ ಮರೆಯುತ್ತಿದ್ದಾರೆ. ಅದು ಸಲ್ಲದು. ನಮ್ಮ ಸಂಸ್ಕೃತಿ-ಸಂಸ್ಕಾರಗಳ ಉಳಿವಿಗಾಗಿ ಶ್ರಮಿಸುವುದು ಗಾಯತ್ರಿ ಮಂತ್ರವನ್ನು ನಿತ್ಯವೂ...

ಕ್ರಿಕೆಟ್ ಪಂದ್ಯಾವಳಿ, ಡಿಎಆರ್ ಮೈದಾನದಲ್ಲಿ ಲಾಠಿಗೆ ಮಣಿದ ಲೇಖನಿ

ಬಳ್ಳಾರಿ: ಪೊಲೀಸ್ ವಾರ್ಷಿಕ ಕ್ರೀಡಾಕೂಟ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಪೊಲೀಸ್ ಕ್ರೀಡಾಂಗಣದಲ್ಲಿ ಭಾನುವಾರ ಪೊಲೀಸರು ಮತ್ತು ಪತ್ರಕರ್ತರ ಮಧ್ಯೆ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ...

ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಉಹಾಪೋಹ – ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ

ರಾಯಚೂರು: ಇನ್ನೆರಡು ಉಪ ಮುಖ್ಯಮಂತ್ರಿ ಹುದ್ದೆ ಸೃಜಿಸಲಾಗುತ್ತಿದೆ ಎನ್ನುವುದು ಮಾಧ್ಯಮಗಳ ಸೃಷ್ಟಿ. ಮುಂದಿನ ಸಚಿವ ಸಂಪುಟದ ವಿಸ್ತರಣೆ, ಬದಲಾವಣೆಯನ್ನು ವರಿಷ್ಠರು ತೀರ್ಮಾನಿಸಲಿದ್ದಾರೆ ಎಂದು...

ಮೊಬೈಲ್ ಹಾಳು ಮಾಡಿದ್ದಕ್ಕೆ ಸೋದರ ಮಾವನೇ ಬಾಲಕಿಗೆ ಚಾಕು ಇರಿದು ಹತ್ಯೆ

ಶಿವಮೊಗ್ಗ: ಮೊಬೈಲ್ ವಿಚಾರದಲ್ಲಿ ಭಾನುವಾರ ಸೋದರ ಮಾವನೇ ಬಾಲಕಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಗಾಡಿಕೊಪ್ಪದಲ್ಲಿ ನಡೆದಿದೆ.5 ವರ್ಷದ ರಂಜನಿ ಹತ್ಯೆಯಾದ...

ದಾವಣಗೆರೆ: ಹನ್ನೆರಡನೇ ಶತಮಾನದ ಬಸವಾದಿ ಶರಣರ ಆಶಯಗಳನ್ನು ಜನಮಾನಸದಲ್ಲಿ ಬಿತ್ತುವ ಪ್ರಯತ್ನ ಅಲ್ಲಿ ನಡೆಯಿತು. ಸಮಾನತೆ, ಕಾಯಕ, ದಾಸೋಹ ಮುಂತಾದ ಆದರ್ಶಗಳು ಇಂದಿನ ದಿನಗಳಲ್ಲಿ ಎಷ್ಟು ಪ್ರಸ್ತುತವಾಗಿವೆ ಎಂಬ ಚಿಂತನ ಮಂಥನವಾಯಿತು.

ಸಹಮತ ವೇದಿಕೆ ವತಿಯಿಂದ ಇಲ್ಲಿನ ಹದಡಿ ರಸ್ತೆಯ ಎಸ್.ಎಸ್.ಕಲ್ಯಾಣ ಮಂಟಪದಲ್ಲಿ ಗುರುವಾರ ಆಯೋಜಿಸಿದ್ದ ಮತ್ತೆ ಕಲ್ಯಾಣ ಕಾರ್ಯಕ್ರಮ ಬಸವತತ್ವದ ಮೇಲೆ ಬೆಳಕು ಚೆಲ್ಲಿತು. ಸಂವಾದ, ಸಾಮರಸ್ಯದ ನಡಿಗೆ, ವಚನ ಗಾಯನ, ಉಪನ್ಯಾಸ ಸೇರಿದಂತೆ ಅರ್ಥಪೂರ್ಣವಾಗಿ ನೆರವೇರಿತು.

ಬೆಳಗ್ಗೆ ನಡೆದ ಮುಕ್ತ ಸಂವಾದ ಕಾರ್ಯಕ್ರಮದಲ್ಲಿ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿ ಕುತೂಹಲಕರ ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆದುಕೊಂಡರು.

ಸಾನ್ನಿಧ್ಯ ವಹಿಸಿದ್ದ ಸಾಣೇಹಳ್ಳಿ ಮಠದ ಶ್ರೀ ಪಂಡಿತಾರಾಧ್ಯ ಸ್ವಾಮೀಜಿ ಮಾತನಾಡಿ, 12ನೇ ಶತಮಾನದಲ್ಲಿದ್ದ ಅಸಮಾನತೆ, ಜಾತಿಭೇದ, ಲಿಂಗ ತಾರತಮ್ಯ, ಮೌಢ್ಯಗಳ ವಿರುದ್ಧ ಶರಣರು ಸಮಾಜದಲ್ಲಿ ಮೂಡಿಸಿದ ಜಾಗೃತಿಯ ಕುರಿತು ಹೇಳಿದರು.

ಅನುಭವ ಮಂಟಪದ ವೇದಿಕೆಯ ಮೂಲಕ ಸಮಾಜ ಕಟ್ಟುವ ಕೆಲಸ ಹೇಗೆ ನಡೆಯಿತು ಎಂಬುದನ್ನು ತೆರೆದಿಟ್ಟರು. ಶರಣರ ವಚನಗಳ ಸಾರವನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕಾದ ಅನಿವಾರ್ಯತೆಯ ಕುರಿತು ಯುವಜನಾಂಗಕ್ಕೆ ಕಿವಿಮಾತು ಹೇಳಿದರು.

ಮುಕ್ತ ಸಂವಾದದಲ್ಲಿ ಸರ್ಕಾರಿ ಪ್ರಥಮದರ್ಜೆ ಮಹಿಳಾ ಕಾಲೇಜು ಪ್ರಾಂಶುಪಾಲ ಡಾ.ದಾದಾಪೀರ್ ನವಿಲೇಹಾಳ್, ಉಪನ್ಯಾಸಕಿ ಅರುಣಕುಮಾರಿ ಬಿರಾದಾರ, ಮಾಜಿ ಸಂಸದ ಕೆ.ಆರ್.ಜಯದೇವಪ್ಪ ಉಪಸ್ಥಿತರಿದ್ದರು. ಕಾರ್ಮಿಕ ಮುಖಂಡ ಎಚ್.ಕೆ.ರಾಮಚಂದ್ರಪ್ಪ ಸ್ವಾಗತಿಸಿದರು. ಜಿ.ಪಂ.ಮಾಜಿ ಅಧ್ಯಕ್ಷೆ ಜಯಲಕ್ಷ್ಮೀ ಮಹೇಶ್ ವಂದಿಸಿದರು.

ವಚನ ಸಾಹಿತ್ಯ ಪಠ್ಯವಾಗಲಿ: ಪ್ರಾಥಮಿಕ ಶಿಕ್ಷಣದಿಂದ ವಿಶ್ವವಿದ್ಯಾಲಯ ಹಂತದವರೆಗೆ ಶರಣರ ವಚನಗಳನ್ನು ಪಠ್ಯವಾಗಿಸಬೇಕಿದೆ. ಅರಿವು-ಆಚಾರ ಒಂದಾಗಬೇಕು. ಅಂಥ ಜಾಗೃತಿಯನ್ನು ವಚನಗಳು ಮೂಡಿಸುತ್ತವೆ. ಮತ್ತೆ ಕಲ್ಯಾಣದ ಆಶಯವೂ ಅದೇ ಆಗಿದೆ ಎಂದು ಎಂದು ಸಾಣೇಹಳ್ಳಿ ಶ್ರೀಗಳು ಪ್ರತಿಪಾದಿಸಿದರು.

ಸಂವಾದದಲ್ಲಿ ಅರ್ಥಪೂರ್ಣ ಚರ್ಚೆ: ಸಂವಾದದಲ್ಲಿ ವಿದ್ಯಾರ್ಥಿಗಳಿಂದ ಪ್ರಶ್ನೆಗಳ ಸುರಿಮಳೆಯೇ ಆಯಿತು. ವೇದಿಕೆಯಲ್ಲಿದ್ದ ಅತಿಥಿಗಳು ಅವುಗಳಿಗೆ ಸೂಕ್ತ ಉತ್ತರವನ್ನೂ ನೀಡಿದರು.

ಶರಣರ ತತ್ವಾದರ್ಶಗಳು ಈಗಲೂ ಎಷ್ಟು ಪ್ರಸ್ತುತ, ಜಾತಿಯನ್ನು ರಾಜಕಾರಣಕ್ಕೆ ಬಳಸಿಕೊಳ್ಳುತ್ತಿರುವುದು ಎಷ್ಟು ಸರಿ, ಕೋಮುವಾದ, ದೇಗುಲ ಸಂಸ್ಕೃತಿ, ಅಂತರ್ಜಾತಿ ವಿವಾಹ, ಲಿಂಗ ತಾರತಮ್ಯ, ಆಧುನಿಕ ಮಹಿಳೆಯರ ಸಮಸ್ಯೆಗಳು, ವಿದ್ಯಾರ್ಥಿಗಳಿಗೆ ಜಾತಿ, ವರ್ಗದ ಹಿನ್ನೆಲೆಯಲ್ಲಿ ಸೌಲಭ್ಯಗಳನ್ನು ಒದಗಿಸುವುದು, ಸ್ವಾರ್ಥ, ಪಾಪ, ಪುಣ್ಯ, ರೈತರ ಸಮಸ್ಯೆಗಳು ಹೀಗೆ ವೈವಿಧ್ಯಮಯ ಪ್ರಶ್ನೆಗಳು ಕೇಳಿಬಂದವು.

ವಿದ್ಯಾರ್ಥಿಗಳಾದ ಎಸ್.ಪವಿತ್ರಾ, ಕೆ.ಎಸ್.ಮೇಘನಾ, ಕಮಲಾ, ಆಶಾ, ಲಾವಣ್ಯಾ, ಜಿ.ಪಿ.ರಶ್ಮಿ, ಯಾಸ್ಮಿನ್, ಎಸ್.ವಿನಯ್, ವೈ.ವಿ.ವಿದ್ಯಾ, ಎಸ್.ಸುಮಿತ್ರಾ, ಪೂರ್ಣಿಮಾ, ಓಬಯ್ಯ, ಜಿ.ಎಸ್.ಕಿರಣ್ ಕುಮಾರ್, ಎಂ.ಎಸ್.ಕೀರ್ತನಾ, ಮೇಘಾ, ಗಗನ್, ಬಸವರಾಜ್, ಚೈತ್ರಾ, ಆಫ್ರಿನ್, ಪಿ.ಎಸ್.ಅಂಬಿಕಾ, ನಿಂಗರಾಜ್ ಪ್ರಶ್ನೆ ಕೇಳಿದರು.

ಸಾಣೇಹಳ್ಳಿಯಲ್ಲಿ ಯುವ ಕಾರ್ಯಾಗಾರ: ಮತ್ತೆ ಕಲ್ಯಾಣ ಇದು ಕೇವಲ ಪ್ರಾರಂಭ. ಇದರ ಉದ್ದೇಶವನ್ನು ಈಡೇರಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಸಂಜೆ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಶ್ರೀ ಪಂಡಿತಾರಾಧ್ಯ ಸ್ವಾಮೀಜಿ ಹೇಳಿದರು. ಎಲ್ಲ ಜಿಲ್ಲೆಗಳಿಂದ ಆಯ್ದ ಯುವಜನರಿಗೆ ಸಾಣೇಹಳ್ಳಿಯಲ್ಲಿ ಕಾರ್ಯಾಗಾರ ಮಾಡುವ ಉದ್ದೇಶವಿದೆ ಎಂದು ತಿಳಿಸಿದರು.

ಶಿವಮೊಗ್ಗದ ಮಾನಸ ಸಾಂಸ್ಕೃತಿಕ ಕೇಂದ್ರದ ನಿರ್ದೇಶಕ ಡಾ.ರಾಜೇಂದ್ರ ಚೆನ್ನಿ ಮಾತನಾಡಿ, ಪರಸ್ಪರ ಪ್ರೀತಿ, ಅಂತಃಕರಣ ಕಡಿಮೆಯಾಗಿದ್ದು ನಾವೆಲ್ಲ ದ್ವೀಪದಂತಾಗಿದ್ದೇವೆ. ಇಂಥ ಸನ್ನಿವೇಶದಲ್ಲಿ ಮತ್ತೆ ಕಲ್ಯಾಣದ ಆಶಯ ಮಹತ್ವದ್ದಾಗಿದೆ ಎಂದು ತಿಳಿಸಿದರು.

ಹಾವೇರಿಯ ಸಾಹಿತಿ ಡಾ.ಅನಸೂಯಾ ಕಾಂಬಳೆ, ಬಸವ ಬಳಗದ ಸಂಚಾಲಕ ವಿ.ಸಿದ್ಧರಾಮ ಶರಣರು, ಪಾಂಡೋಮಟ್ಟಿ ವಿರಕ್ತ ಮಠದ ಶ್ರೀ ಗುರುಬಸವ ಸ್ವಾಮೀಜಿ, ಮುರಳೀಧರ ವಿದ್ಯಾರಣ್ಯ ಸ್ವಾಮೀಜಿ, ಇಸ್ಲಾಂ ಧರ್ಮಗುರು ಇಬ್ರಾಹಿಂ ಸಖಾಫಿ, ಮಾಜಿ ಸಚಿವ ಎಸ್.ಎಸ್.ಪಾಟೀಲ್ ಇದ್ದರು.

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...