ದಾವಣಗೆರೆ: ಖೇಲೋ ಇಂಡಿಯಾ ಅಡಿಯಲ್ಲಿ ಶಾಲಾ ಬಾಲಕಿಯರ ಸಬಲೀಕರಣದ ಭಾಗವಾಗಿ, ದಾವಣಗೆರೆಯಲ್ಲಿ ಜ. 4ರಿಂದ ಒಂದು ತಿಂಗಳ ಕಾಲ, 13 ವರ್ಷದೊಳಗಿನ ಬಾಲಕಿಯರ ರಾಜ್ಯ ಮಟ್ಟದ ಫುಟ್‌ಬಾಲ್ ಪಂದ್ಯಾವಳಿ ಆಯೋಜಿಸಲಾಗಿದೆ.
ದಾವಣಗೆರೆ ಜಿಲ್ಲಾ ಫುಟ್‌ಬಾಲ್ ಅಸೋಸಿಯೇಷನ್ ವತಿಯಿಂದ ನಗರದ ಲೂರ್ಡ್ಸ್ ಬಾಲಕರ ಶಾಲಾ ಮೈದಾನದಲ್ಲಿ ಈ ಪಂದ್ಯಾವಳಿ ನಡೆಯಲಿದೆ ಎಂದು ಅಸೋಸಿಯೇಷನ್ ಜಿಲ್ಲಾಧ್ಯಕ್ಷ ದಿನೇಶ್ ಕೆ. ಶೆಟ್ಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ರಾಜ್ಯದ ವಿವಿಧ ಜಿಲ್ಲೆಗಳಿಂದ 200ಕ್ಕೂ ಹಚ್ಚು ಸ್ಪರ್ಧಾಳುಗಳು ಭಾಗವಹಿಸಲಿದ್ದು, ಅವರಿಗೆ ವಸತಿ, ಊಟದ ವ್ಯವಸ್ಥೆ ಕಲ್ಪಿಸಲಾಗಿದೆ. ವಿಜೇತ ತಂಡಗಳಿಗೆ 50 ಸಾವಿರ ರೂ. ಪ್ರಥಮ ಬಹುಮಾನ, 30 ಸಾವಿರ ರೂ. ದ್ವಿತೀಯ ಬಹುಮಾನದ ಜತೆಗೆ ಪಾರಿತೋಷಕ ನೀಡಲಾಗುವುದು.
ಜ.4ರಂದು ಮಧ್ಯಾಹ್ನ 1 ಗಂಟೆಗೆ ಪಂದ್ಯಾವಳಿಗೆ ಎಸ್.ಎಸ್.ಕೇ ಟ್ರಸ್ಟ್‌ನ ಟ್ರಸ್ಟಿ ಹಾಗೂ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಚಾಲನೆ ನೀಡುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್, ಮೇಯರ್ ಕೆ. ಚಮನ್‌ಸಾಬ್, ಕ್ರೀಡಾ ಮತ್ತು ಯುವಜನ ಸೇವಾ ಸಬಲೀಕರಣ ಇಲಾಖೆ ಸಹಾಯಕಿ ನಿರ್ದೇಶಕಿ ರೇಣುಕಾ, ಪಾಲಿಕೆ ಆಯುಕ್ತೆ ರೇಣುಕಾ, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಅನಿತಾಬಾಯಿ ಮಾಲತೇಶ್, ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷೆ ಆಶಾ ಉಮೇಶ್, ಸವಿತಾ ಗಣೇಶ್ ಹುಲ್ಮನಿ, ಸುಧಾ ಇಟ್ಟಿಗುಡಿ, ಮೀನಾಕ್ಷಿ ಜಗದೀಶ್, ತರಬೇತುದಾರ ಮುಸ್ತಫಾ, ಶ್ರೀನಿವಾಸ ದಾಸಕರಿಯಪ್ಪ ಇತರರು ಪಾಲ್ಗೊಳ್ಳುವರು ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಪದಾಧಿಕಾರಿಗಳಾದ ಮೊಹಮ್ಮದ್ ರಫಿ, ಚಂದ್ರಶೇಖರ್, ಅಲ್ಲಾವಲಿ ಮುಜಾಹಿದ್‌ಖಾನ್ ಇತರರಿದ್ದರು.
